ಧರ್ಮೋಪದೇಶಕಾಂಡ 5:22 - ಕನ್ನಡ ಸಮಕಾಲಿಕ ಅನುವಾದ22 ಈ ಮಾತುಗಳನ್ನು ಯೆಹೋವ ದೇವರು ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು, ಇವುಗಳ ಮಧ್ಯದೊಳಗಿಂದ, ನಿಮ್ಮ ಸಭೆಗೆಲ್ಲಾ ಕೇಳಿಸುವಂತೆ ಮಹಾ ಸ್ವರದಿಂದ ನುಡಿದರು. ಅವರು ಹೆಚ್ಚೇನೂ ಕೂಡಿಸಲಿಲ್ಲ. ದೇವರು ಈ ಮಾತುಗಳನ್ನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು. ಇದಲ್ಲದೆ ಆತನು ಮತ್ತೇನೂ ಹೇಳಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಈ ಮಾತುಗಳನ್ನು ಸರ್ವೇಶ್ವರ ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು, ಇವುಗಳ ಮಧ್ಯೆ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾಸ್ವರದಿಂದ ನುಡಿದರು; ಬೇರೆ ಏನನ್ನೂ ಕೂಡಿಸದೆ, ಈ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಬರೆದು ನನಗೆ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು; ಆಮೇಲೆ ಇನ್ನು ಮಾತಾಡಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಮೋಶೆಯು ಹೇಳಿದ್ದೇನೆಂದರೆ: “ನೀವೆಲ್ಲಾ ಆ ಬೆಟ್ಟದ ಬಳಿಯಲ್ಲಿರುವಾಗ ದೇವರಾದ ಯೆಹೋವನು ಈ ಆಜ್ಞೆಗಳನ್ನು ನಿಮಗೆ ಕೊಟ್ಟನು. ಬೆಂಕಿ, ಮೋಡ ಮತ್ತು ಕಾರ್ಗತ್ತಲೊಳಗಿನಿಂದ ಯೆಹೋವನು ಗಟ್ಟಿಯಾದ ಸ್ವರದಲ್ಲಿ ಮಾತಾಡಿದ್ದನ್ನು ನೀವು ಕೇಳಿದಿರಿ. ಆತನು ಈ ಆಜ್ಞೆಗಳನ್ನು ಕೊಟ್ಟ ಬಳಿಕ ಬೇರೆ ಏನನ್ನೂ ಹೇಳಲಿಲ್ಲ. ಆತನು ತನ್ನ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದು ನನಗೆ ಕೊಟ್ಟನು. ಅಧ್ಯಾಯವನ್ನು ನೋಡಿ |