ಧರ್ಮೋಪದೇಶಕಾಂಡ 5:31 - ಕನ್ನಡ ಸಮಕಾಲಿಕ ಅನುವಾದ31 ನೀನಾದರೋ ಇಲ್ಲಿ ನನ್ನ ಸಂಗಡ ನಿಂತುಕೋ. ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸೊತ್ತಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞಾನಿಯಮ ಮತ್ತು ನ್ಯಾಯಗಳನ್ನು ನಿಮಗೆ ಹೇಳುವೆನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನಾನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನು ಮತ್ತು ವಿಧಿನಿಯಮಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ನೀನು ಇಲ್ಲೇ ನನ್ನ ಬಳಿ ಇರು; ಅವರಿಗೆ ಬೋಧಿಸಬೇಕಾದ ಎಲ್ಲ ಆಜ್ಞೆಗಳನ್ನೂ ವಿಧಿನಿರ್ಣಯಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ನಾಡಿನಲ್ಲಿ ಅವರು ಅವುಗಳನ್ನು ಅನುಸರಿಸಬೇಕು,’ ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನೀನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನೂ ವಿಧಿನಿರ್ಣಯಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆದರೆ ಮೋಶೆಯೇ, ನೀನು ನನ್ನ ಬಳಿಯಲ್ಲಿಯೇ ನಿಂತಿರು. ನೀನು ಅವರಿಗೆ ಉಪದೇಶಿಸಬೇಕಾಗಿರುವ ಎಲ್ಲಾ ಆಜ್ಞೆಗಳನ್ನು, ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ನಾನು ನಿನಗೆ ತಿಳಿಸುತ್ತೇನೆ. ಅವರ ವಾಸಕ್ಕಾಗಿ ನಾನು ಕೊಡಲಿರುವ ದೇಶದಲ್ಲಿ ಅವರು ಇವುಗಳೆಲ್ಲವನ್ನು ಪರಿಪಾಲಿಸಬೇಕು.’ ಅಧ್ಯಾಯವನ್ನು ನೋಡಿ |