Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:32 - ಕನ್ನಡ ಸಮಕಾಲಿಕ ಅನುವಾದ

32 ಹೀಗಿರುವುದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದಂತೆ ಅವುಗಳನ್ನು ಕೈಗೊಂಡು ನಡೆಯಬೇಕು. ಎಡಕ್ಕಾದರೂ, ಬಲಕ್ಕಾದರೂ ತಿರುಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 “ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆಯೇ ನಡೆದುಕೊಳ್ಳಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬೇಡಿ. ಬದಲಿಗೆ, ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ ಮಾರ್ಗದಲ್ಲೇ ಮುನ್ನಡೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆದದರಿಂದ ನೀವು ಸ್ವಲ್ಪವಾದರೂ ತಪ್ಪದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಆದ್ದರಿಂದ, ಇಸ್ರೇಲ್ ಜನರೇ, ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಅನುಸರಿಸಲು ನೀವು ಎಚ್ಚರದಿಂದಿರಬೇಕು. ಆತನನ್ನು ಹಿಂಬಾಲಿಸುವುದನ್ನು ನಿಲ್ಲಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:32
26 ತಿಳಿವುಗಳ ಹೋಲಿಕೆ  

ನಿನ್ನ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಕಾಲುಗಳು ದೂರವಿರಲಿ.


“ನೀವು ಬಲಗೊಳ್ಳಿರಿ, ಎಡಕ್ಕಾಗಲಿ, ಬಲಕ್ಕಾಗಲಿ ತಿರುಗದೆ, ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವ ಎಲ್ಲವನ್ನು ಕೈಗೊಂಡು ನಡೆಯಿರಿ.


“ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ದೇವರ ನಿಯಮದ ಪ್ರಕಾರ ನೀನು ಕೈಗೊಂಡು ನಡೆಯುವ ಹಾಗೆ ಬಲಿಷ್ಠನಾಗಿರು, ಧೈರ್ಯದಿಂದಿರು. ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ, ಅದನ್ನು ಬಿಟ್ಟು ಬಲಕ್ಕಾದರೂ, ಎಡಕ್ಕಾದರೂ ತಿರುಗಬೇಡ.


ಹೀಗೆ ಮಾಡಿದರೆ, ಅವನೂ, ಅವನ ಸಂತತಿಯವರೂ ದೀರ್ಘಕಾಲ ಇಸ್ರಾಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು.


ಹೀಗಿರುವುದರಿಂದ ನೀವು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಅನುಸರಿಸಿ ನಡೆಯದಂತೆ, ನಾನು ಇಂದು ನಿಮಗೆ ಆಜ್ಞಾಪಿಸುವ ಈ ಮಾತುಗಳನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ತಿರುಗಬಾರದು.


“ ‘ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು. ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು; ನನ್ನ ನ್ಯಾಯಗಳನ್ನು ಅನುಸರಿಸಿ, ನನ್ನ ನಿಯಮಗಳನ್ನು ಪಾಲಿಸುವಂತೆ ಮಾಡುವೆನು.


ಕುಷ್ಠರೋಗಿಗಳ ವಿಷಯದಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವುದನ್ನೆಲ್ಲಾ ನೀವು ಜಾಗ್ರತೆಯಿಂದ ಕಾಪಾಡಿ ಕೈಗೊಳ್ಳುವ ಹಾಗೆ ನೋಡಿಕೊಳ್ಳಿ. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನು ನೀವು ಕಾಪಾಡಿ ಕೈಗೊಳ್ಳಬೇಕು.


ನಾನು ನಿಮಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಕಾಪಾಡಿ ಕೈಗೊಳ್ಳಬೇಕು. ಅದಕ್ಕೆ ಏನೂ ಕೂಡಿಸಬಾರದು. ಅದರಿಂದ ಏನನ್ನೂ ತೆಗೆದುಹಾಕಬಾರದು.


ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ಆಜ್ಞಾವಿಧಿಗಳನ್ನು ಕಾಪಾಡಿ ನಡೆದುಕೊಳ್ಳಬೇಕು.


ನೀವು ಬದುಕಿ ಅಭಿವೃದ್ಧಿಯಾಗಿ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಿ, ಅದನ್ನು ಸ್ವಾಧೀನ ಮಾಡಿಕೊಳ್ಳುವ ಹಾಗೆ ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಗೊಳ್ಳಿರಿ.


ಅವರು ನೀತಿಮಾರ್ಗವನ್ನು ತಿಳಿದುಕೊಂಡ ಮೇಲೆ ತಮಗೆ ಕೊಡಲಾದ ಪವಿತ್ರ ಆಜ್ಞೆಯಿಂದ ತೊಲಗಿ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.


ಆದರೆ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು, ದುಷ್ಟರ ಸಂಗಡ ದೇವರು ತೊಲಗಿಸಲಿ. ಇಸ್ರಾಯೇಲರ ಮೇಲೆ ಸಮಾಧಾನವಿರಲಿ.


ಯೆಹೋವ ದೇವರು, “ನಾನು ಅವರಿಗೆ ಆಜ್ಞಾಪಿಸಿದ ಎಲ್ಲದರ ಪ್ರಕಾರ ಮತ್ತು ನನ್ನ ಸೇವಕನಾದ ಮೋಶೆಯು ಅವರಿಗೆ ಆಜ್ಞಾಪಿಸಿದ ಸಮಸ್ತ ನಿಯಮದ ಪ್ರಕಾರ ಕೈಗೊಂಡು ನಡೆಯುವುದರಲ್ಲಿ ಅವರು ಜಾಗರೂಕರಾಗಿದ್ದರೆ, ನಾನು ಅವರ ಪಿತೃಗಳಿಗೆ ಕೊಟ್ಟ ದೇಶದಿಂದ ಪುನಃ ಇಸ್ರಾಯೇಲರು ಅಲೆದಾಡುವಂತೆ ಮಾಡುವುದಿಲ್ಲ,” ಎಂದು ಹೇಳಿದ್ದರು.


ಅವರು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಯೆಹೋವ ದೇವರ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಗೊಂಡು ನಡೆದರೆ, ಅದು ನಮಗೆ ನೀತಿಯಾಗಿರುವುದು,” ಎಂದು ಹೇಳಬೇಕು.


ಹೀಗಿರುವುದರಿಂದ ಓ ಇಸ್ರಾಯೇಲರೇ, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ವಿಧೇಯರಾಗಿರಿ.


ಇದಲ್ಲದೆ ದೇವರು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ, ನೀತಿಗಳನ್ನೂ, ನಿಯಮವನ್ನೂ, ಆಜ್ಞೆಯನ್ನೂ ನೀವು ನಿರಂತರವಾಗಿ ಕೈಗೊಳ್ಳಲು ಎಚ್ಚರಿಕೆಯಾಗಿರಬೇಕು. ಇತರ ದೇವರುಗಳಿಗೆ ಭಯಪಡಬೇಡಿರಿ.


ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು.


ನಾನೇ ಯೆಹೋವ ದೇವರೂ ನಿಮ್ಮ ದೇವರೂ ಆಗಿದ್ದೇನೆ. ನನ್ನ ನಿಯಮಗಳಲ್ಲೇ ನಡೆಯಿರಿ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಕೈಗೊಂಡು ಅವುಗಳನ್ನೇ ಮಾಡಿರಿ.


ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನೂ, ಅವರು ನಿಮಗೆ ನೀಡಿದ ಷರತ್ತುಗಳನ್ನೂ, ಅವರ ತೀರ್ಪುಗಳನ್ನೂ ಎಚ್ಚರಿಕೆಯಿಂದ ಕೈಗೊಳ್ಳಬೇಕು.


ಅವರು ನಿಮಗೆ ಬೋಧಿಸುವ ತೀರ್ಪಿನ ಪ್ರಕಾರವೂ, ಅವರು ನಿಮಗೆ ಹೇಳುವ ನ್ಯಾಯದ ಪ್ರಕಾರವೂ ನೀವು ಮಾಡಬೇಕು. ಅವರು ನಿಮಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ತಿರುಗಬಾರದು.


ಅವರ ದೇಶವನ್ನು ತೆಗೆದುಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸೊತ್ತಾಗಿ ಕೊಟ್ಟೆವು.


ತಮ್ಮ ತಪ್ಪುಗಳನ್ನು ತಿಳಿದುಕೊಳ್ಳಲು ಯಾರಿಗೆ ಸಾಧ್ಯ? ನನ್ನ ಗುಪ್ತ ಪಾಪಗಳನ್ನು ಕ್ಷಮಿಸು.


ಸರ್ವಶಕ್ತರಾದ ದೇವರೇ, ನೀವು ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು.


ಏಕೆಂದರೆ ಅವು ನಿನ್ನ ದಿನಗಳನ್ನು ಹೆಚ್ಚಿಸಿ ದೀರ್ಘಾಯುಷ್ಯವನ್ನು ನೀಡುವುದು, ಸಮಾಧಾನವನ್ನೂ ಸಮೃದ್ಧಿಯನ್ನೂ ನಿನಗೆ ಕೊಡುವುದು.


ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ ಇದರಲ್ಲೇ ನಡೆಯಿರಿ,” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು