ಧರ್ಮೋಪದೇಶಕಾಂಡ 5:9 - ಕನ್ನಡ ಸಮಕಾಲಿಕ ಅನುವಾದ9 ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವುಗಳಿಗೆ ಅಡ್ಡಬೀಳಬೇಡ. ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ, ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಹೆತ್ತವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವುಗಳಿಗೆ ಅಡ್ಡ ಬೀಳಲೂಬಾರದು, ಪೂಜೆಮಾಡಲೂಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾನೇ ನಿಮ್ಮ ದೇವರಾದ ಯೆಹೋವನು. ಆದ್ದರಿಂದ ನೀವು ಯಾವ ವಿಗ್ರಹವನ್ನೂ ಪೂಜಿಸಬಾರದು ಮತ್ತು ಅದರ ಸೇವೆ ಮಾಡಬಾರದು. ನನ್ನ ಜನರು ಇತರ ದೇವರುಗಳನ್ನು ಆರಾಧಿಸುವುದನ್ನು ನಾನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪ ಮಾಡಿದವರನ್ನು ನಾನು ಶಿಕ್ಷಿಸುತ್ತೇನೆ. ಅವರ ಮಕ್ಕಳು, ಮೊಮ್ಮಕ್ಕಳು ಮತ್ತು ಮರಿಮೊಮ್ಮಕ್ಕಳು ನನ್ನ ದಂಡನೆಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿ |