ಧರ್ಮೋಪದೇಶಕಾಂಡ 6:15 - ಕನ್ನಡ ಸಮಕಾಲಿಕ ಅನುವಾದ15 ಏಕೆಂದರೆ ನಿಮ್ಮ ಮಧ್ಯದಲ್ಲಿರುವ ನಿಮ್ಮ ಯೆಹೋವ ದೇವರು ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತರಾದ ದೇವರು. ನಿಮ್ಮ ದೇವರ ಕೋಪವು ನಿಮ್ಮ ಮೇಲೆ ಉರಿಯಲು, ಅವರು ನಿಮ್ಮನ್ನು ಭೂಮಿಯ ಮೇಲಿನಿಂದ ತೆಗೆದುಹಾಕುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿಮ್ಮ ಮಧ್ಯದಲ್ಲಿರುವ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸುವುದಿಲ್ಲ, ಆತನು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಾನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಿಮ್ಮ ಮಧ್ಯೆಯಿರುವ ನಿಮ್ಮ ದೇವರಾದ ಸರ್ವೇಶ್ವರ ತಮಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸದ ದೇವರು; ಅವರು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಿಮ್ಮ ಮಧ್ಯದಲ್ಲಿರುವ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂವಿುಯ ಮೇಲೆ ಉಳಿಯದಂತೆ ನಾಶಮಾಡಾನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಿಮ್ಮ ದೇವರಾದ ಯೆಹೋವನು ಯಾವಾಗಲೂ ನಿಮ್ಮ ಜೊತೆಯಲ್ಲಿರುವನು. ಸುಳ್ಳುದೇವರನ್ನು ಪೂಜಿಸುವವರನ್ನು ಯೆಹೋವನು ದ್ವೇಷಿಸುವುದರಿಂದ ಅವರನ್ನು ಈ ಲೋಕದಿಂದ ಅಳಿಸಿಬಿಡುವನು. ಅಧ್ಯಾಯವನ್ನು ನೋಡಿ |
ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯನ್ನು ನೀವು ಉಲ್ಲಂಘಿಸಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಅವರು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವರು. ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯುವುದು. ಅವರು ನಿಮಗೆ ಕೊಟ್ಟ ಒಳ್ಳೆಯ ದೇಶದಿಂದ ನೀವು ಬೇಗನೆ ನಾಶವಾಗಿಹೋಗುವಿರಿ,” ಎಂದನು.