Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:20 - ಕನ್ನಡ ಸಮಕಾಲಿಕ ಅನುವಾದ

20 ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು, “ನಮ್ಮ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಈ ಷರತ್ತುಗಳ, ತೀರ್ಪುಗಳ ಹಾಗು ನಿಯಮಗಳ ಅರ್ಥ ಏನು?” ಎಂದು ನಿಮ್ಮನ್ನು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇನ್ನು ಮುಂದೆ ನಿಮ್ಮ ಮಕ್ಕಳು, “ಈ ಆಜ್ಞಾವಿಧಿನಿಯಮಗಳನ್ನು ನಮ್ಮ ದೇವರಾದ ಯೆಹೋವನು ಏಕೆ ನೇಮಿಸಿದನು?” ಎಂದು ವಿಚಾರಿಸುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಇನ್ನು ಮುಂದೆ ನಿಮ್ಮ ಮಕ್ಕಳು, ‘ಈ ಆಜ್ಞಾವಿಧಿನಿರ್ಣಯಗಳನ್ನು ನಮ್ಮ ದೇವರಾದ ಸರ್ವೇಶ್ವರ ಏಕೆ ನೇಮಿಸಿದರು?’ ಎಂದು ವಿಚಾರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇನ್ನು ಮುಂದೆ ನಿಮ್ಮ ಮಕ್ಕಳು - ಈ ಆಜ್ಞಾವಿಧಿ ನಿರ್ಣಯಗಳನ್ನು ನಮ್ಮ ದೇವರಾದ ಯೆಹೋವನು ಯಾತಕ್ಕೆ ನೇವಿುಸಿದನು ಎಂದು ವಿಚಾರಿಸುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಮುಂದಿನ ದಿನಗಳಲ್ಲಿ ನಿಮ್ಮ ಮಕ್ಕಳು ನಿಮಗೆ ಈ ಪ್ರಶ್ನೆ ಕೇಳಬಹುದು: ‘ಯೆಹೋವದೇವರು ನಮಗೆ ನ್ಯಾಯವಿಧಿ, ನಿಯಮಗಳನ್ನು ಕೊಟ್ಟಿರುತ್ತಾನೆ. ಇವುಗಳ ಅರ್ಥವೇನು?’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:20
12 ತಿಳಿವುಗಳ ಹೋಲಿಕೆ  

“ಮುಂದೆ ಬರುವ ಕಾಲದಲ್ಲಿ ನಿಮ್ಮ ಪುತ್ರರು ನಿಮಗೆ, ‘ಇದರ ಅರ್ಥವೇನು?’ ಎಂದು ಕೇಳುವಾಗ, ನೀವು ಅವರಿಗೆ, ‘ಯೆಹೋವ ದೇವರು ತಮ್ಮ ಭುಜಬಲದಿಂದ ನಮ್ಮನ್ನು ಈಜಿಪ್ಟಿನ ದಾಸತ್ವದೊಳಗಿಂದ ಹೊರಗೆ ಬರಮಾಡಿದ್ದಾರೆ.


ನಿಮ್ಮ ಮಕ್ಕಳು, ‘ಈ ಆಚರಣೆಯ ಅರ್ಥವೇನು?’ ಎಂದು ಕೇಳಿದಾಗ,


ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳಿಗೆ ಶಿಕ್ಷಣವನ್ನು ಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದರಿಂದ ದೂರ ಹೋಗುವುದಿಲ್ಲ.


ಅವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸ ಮಾಡಿಸಿ, ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯವಾಗಿ ಮಾತನಾಡಬೇಕು.


ಆ ದಿನದಲ್ಲಿ ನಿಮ್ಮ ಮಕ್ಕಳಿಗೆ, ‘ನಾವು ಈಜಿಪ್ಟಿನಿಂದ ಹೊರಗೆ ಬಂದಾಗ ಯೆಹೋವ ದೇವರು ನಮಗೆ ಮಾಡಿದ್ದನ್ನು ಸ್ಮರಿಸುವುದಕ್ಕಾಗಿ ಇದನ್ನು ಆಚರಿಸುತ್ತೇವೆ,’ ಎಂದು ತಿಳಿಸಬೇಕು.


ನಿಮ್ಮ ಕಣ್ಣುಗಳಿಂದ ನೋಡಿದ ಕಾರ್ಯಗಳನ್ನು ನೀವು ಮರೆಯದ ಹಾಗೆಯೂ, ನೀವು ಬದುಕುವ ದಿನಗಳೆಲ್ಲಾ ಅವು ನಿಮ್ಮ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು, ಕಾಪಾಡಿಕೊಳ್ಳಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ, ನಿಮ್ಮ ಮಕ್ಕಳ ಮಕ್ಕಳಿಗೂ ಬೋಧಿಸಿರಿ.


ಆಗ ಯೆಹೋವ ದೇವರು ತಾವು ಹೇಳಿದಂತೆ ನಿಮ್ಮ ಎಲ್ಲಾ ಶತ್ರುಗಳನ್ನು ನಿಮ್ಮ ಮುಂದೆಯೇ ಓಡಿಸಿಬಿಡುವರು.


ಆಗ ನೀವು ಅವರಿಗೆ, “ನಾವು ಈಜಿಪ್ಟ್ ದೇಶದಲ್ಲಿ ಫರೋಹನನಿಗೆ ದಾಸರಾಗಿದ್ದೆವು. ಯೆಹೋವ ದೇವರು ಬಲವಾದ ಕೈಯಿಂದ ನಮ್ಮನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.


ದೇವರೇ, ನಾವು ನಮ್ಮ ಕಿವಿಯಾರೆ ಕೇಳಿದ್ದೇವೆ; ನೀವು ಪೂರ್ವಕಾಲದಲ್ಲಿ ನಮ್ಮ ಪಿತೃಗಳ ದಿವಸಗಳಲ್ಲಿ ಮಾಡಿದ ಕಾರ್ಯವನ್ನು ನಮಗೆ ಅವರು ವಿವರಿಸಿದ್ದಾರೆ.


ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಈಜಿಪ್ಟಿನಲ್ಲಿ ಏನು ಮಾಡಿದೆನೆಂದೂ, ನಾನೇ ಯೆಹೋವ ದೇವರೆಂದೂ ನೀವು ತಿಳಿದುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಅದ್ಭುತ ಸೂಚಕಕಾರ್ಯಗಳನ್ನು ತಿಳಿಸಬೇಕು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು