Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:22 - ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರು ನಮ್ಮ ಕಣ್ಣ ಮುಂದೆಯೇ ಈಜಿಪ್ಟಿನ ಮೇಲೆಯೂ, ಫರೋಹನ ಮೇಲೆಯೂ, ಅವನ ಎಲ್ಲಾ ಮನೆಯ ಮೇಲೆಯೂ ಭಯಂಕರವಾದ ದೊಡ್ಡ ಗುರುತುಗಳನ್ನೂ, ಅದ್ಭುತಗಳನ್ನೂ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆತನು ಐಗುಪ್ತ್ಯರನ್ನೂ, ಫರೋಹನನ್ನೂ ಮತ್ತು ಅವನ ಮನೆಯವರನ್ನೂ ಬಾಧಕವಾದ ದೊಡ್ಡ ಮಹತ್ಕಾರ್ಯಗಳಿಂದಲೂ, ಉತ್ಪಾತಗಳಿಂದಲೂ ನಮ್ಮ ಕಣ್ಣೆದುರಿನಲ್ಲಿ ಶಿಕ್ಷಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಭಯಂಕರ ಆದ ಮಹತ್ಕಾರ್ಯಗಳಿಂದ ಮತ್ತು ಸೂಚಕಕಾರ್ಯಗಳಿಂದ ಈಜಿಪ್ಟಿನವರನ್ನೂ ಫರೋಹನನ್ನೂ ಅವನ ಮನೆಯವರನ್ನೂ ನಮ್ಮ ಕಣ್ಣೆದುರಿನಲ್ಲೇ ಶಿಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆತನು ಐಗುಪ್ತ್ಯರನ್ನೂ ಫರೋಹನನ್ನೂ ಅವನ ಮನೆಯವರನ್ನೂ ಬಾಧಕವಾದ ದೊಡ್ಡ ಮಹತ್ಕಾರ್ಯಗಳಿಂದಲೂ ಉತ್ಪಾತಗಳಿಂದಲೂ ನಮ್ಮ ಕಣ್ಣೆದುರಿನಲ್ಲಿ ಶಿಕ್ಷಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋವನು ಈಜಿಪ್ಟಿನವರನ್ನೂ ಫರೋಹನನ್ನೂ ಅವನ ಪರಿವಾರದವರನ್ನೂ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಮಹತ್ಕಾರ್ಯಗಳಿಂದಲೂ ಭಯಂಕರ ಕಾರ್ಯಗಳಿಂದಲೂ ಬಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:22
15 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿ ನಿಮ್ಮ ಕಣ್ಣ ಮುಂದೆಯೇ ನಿಮಗೆ ಮಾಡಿದ್ದೆಲ್ಲದರ ಹಾಗೆ ಯಾವ ದೇವರು ಒಂದು ಜನಾಂಗವನ್ನು ಮತ್ತೊಂದು ಜನಾಂಗದಿಂದ ತಮಗಾಗಿ ಆಯ್ದು ತೆಗೆದುಕೊಳ್ಳುವುದಕ್ಕೆ ಪರೀಕ್ಷೆಗಳು, ಗುರುತುಗಳು, ಅದ್ಭುತಗಳು ಇವುಗಳ ಮೂಲಕವಾಗಿಯೂ, ಯುದ್ಧದಿಂದಲೂ, ಭುಜಬಲದಿಂದಲೂ, ಚಾಚಿದ ತೋಳಿನಿಂದಲೂ, ದೊಡ್ಡ ಭಯಗಳಿಂದಲೂ ಪ್ರಯತ್ನ ಮಾಡಿದರೋ?


ನಿನ್ನ ಕಣ್ಣುಗಳಿಂದ ಮಾತ್ರ ನೀನು ಗಮನಿಸುವೆ. ದುಷ್ಟರಿಗೆ ಪ್ರತಿದಂಡನೆ ಆಗುವುದನ್ನು ಸಹ ನೀನು ಕಾಣುವೆ.


ಕಣ್ಣಾರೆ ನೋಡಿದ ದೊಡ್ಡ ಉಪದ್ರವಗಳನ್ನೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ, ಅದ್ಭುತಗಳನ್ನೂ, ದೇವರ ಬಲವಾದ ಹಸ್ತವನ್ನೂ, ಚಾಚಿದ ತೋಳನ್ನೂ ನೀವು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀವು ಯಾವ ಜನರಿಗೆ ಭಯಪಡುತ್ತೀರೋ, ಆ ಜನರಿಗೆಲ್ಲಾ ನಿಮ್ಮ ದೇವರಾದ ಯೆಹೋವ ದೇವರು ಹಾಗೆಯೇ ಮಾಡುವರು.


ಬಾಳ್ ಪೆಯೋರನ ವಿಷಯದಲ್ಲಿ ಯೆಹೋವ ದೇವರು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು. ಬಾಳ್ ಪೆಯೋರನನ್ನು ಹಿಂಬಾಲಿಸಿದ ಜನರನ್ನೆಲ್ಲಾ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿದರಲ್ಲವೇ?


ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾಪಿಸಿ, “ನಿಮ್ಮ ದೇವರಾದ ಯೆಹೋವ ದೇವರು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣುಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳನ್ನೂ ಯೆಹೋವ ದೇವರು ಹಾಗೆಯೇ ಮಾಡುವರು.


ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಿಮ್ಮ ಕಣ್ಣು ಮುಂದೆ, ಯುದ್ಧಮಾಡಿದಂತೆಯೇ ಈಗಲೂ ನಿಮಗೋಸ್ಕರ ಯುದ್ಧಮಾಡುವರು.


ಈಜಿಪ್ಟೇ, ನಿಮ್ಮ ಮಧ್ಯದಲ್ಲಿ ಸೂಚಕಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ದೇವರು ಫರೋಹನಿಗೂ, ಅವನ ಸಕಲ ಸೇವಕರಿಗೂ ವಿರೋಧವಾಗಿ ಕಳುಹಿಸಿದನು.


ಹೀಗಿರುವುದರಿಂದ ನನ್ನ ಕೈಯನ್ನು ಚಾಚಿ ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿ, ನಾನು ಅದನ್ನು ನಾನಾ ವಿಧವಾಗಿ ಬಾಧಿಸುವೆನು. ತರುವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.


ಆಗ ನೀವು ಅವರಿಗೆ, “ನಾವು ಈಜಿಪ್ಟ್ ದೇಶದಲ್ಲಿ ಫರೋಹನನಿಗೆ ದಾಸರಾಗಿದ್ದೆವು. ಯೆಹೋವ ದೇವರು ಬಲವಾದ ಕೈಯಿಂದ ನಮ್ಮನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.


ಆದರೆ ದೇವರು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶವನ್ನು ನಮಗೆ ಕೊಡುವಂತೆಯೂ ನಾವು ಅದರಲ್ಲಿ ಪ್ರವೇಶ ಮಾಡುವಂತೆಯೂ ನಮ್ಮನ್ನು ಈಜಿಪ್ಟಿನಿಂದ ಬರಮಾಡಿದರು.


ಅವರೊಬ್ಬರೇ ಮಹಾ ಅದ್ಭುತಗಳನ್ನು ಮಾಡುತ್ತಾರೆ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಈಜಿಪ್ಟಿನಲ್ಲಿ ಏನು ಮಾಡಿದೆನೆಂದೂ, ನಾನೇ ಯೆಹೋವ ದೇವರೆಂದೂ ನೀವು ತಿಳಿದುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಅದ್ಭುತ ಸೂಚಕಕಾರ್ಯಗಳನ್ನು ತಿಳಿಸಬೇಕು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು