Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:25 - ಕನ್ನಡ ಸಮಕಾಲಿಕ ಅನುವಾದ

25 ಅವರು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಯೆಹೋವ ದೇವರ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಗೊಂಡು ನಡೆದರೆ, ಅದು ನಮಗೆ ನೀತಿಯಾಗಿರುವುದು,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಮ್ಮ ದೇವರಾದ ಯೆಹೋವನು ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಆತನ ದೃಷ್ಟಿಯಲ್ಲಿ ನೀತಿವಂತರೆಂದು ಪರಿಗಣಿಸಲು ಯೋಗ್ಯರಾಗುವೆವು” ಎಂಬುದಾಗಿ ನೀವು ಉತ್ತರಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಮ್ಮ ದೇವರಾದ ಸರ್ವೇಶ್ವರ ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಅವರ ದೃಷ್ಟಿಯಲ್ಲಿ ನೀತಿವಂತರೆಂದು ಪರಿಗಣಿತರಾಗುವೆವು,’ ಎಂದು ನೀವು ಉತ್ತರಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಮ್ಮ ದೇವರಾದ ಯೆಹೋವನು ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಆತನ ದೃಷ್ಟಿಯಲ್ಲಿ ನೀತಿವಂತರೆಂದು ಎಣಿಸಲ್ಪಡುವೆವೆಂಬದಾಗಿ ನೀವು ಉತ್ತರಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ, ಇಡೀ ಧರ್ಮಶಾಸ್ತ್ರಕ್ಕೆ ನಾವು ಚಾಚೂತಪ್ಪದೆ ಎಚ್ಚರಿಕೆಯಿಂದ ವಿಧೇಯರಾದರೆ, ನಾವು ಒಳ್ಳೆಯದನ್ನು ಮಾಡಿದೆವೆಂದು ದೇವರು ಹೇಳುತ್ತಾನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:25
13 ತಿಳಿವುಗಳ ಹೋಲಿಕೆ  

ನಿನ್ನ ನೆರೆಯವನು ಅದರಲ್ಲಿ ಮಲಗಲು ಸಾಯಂಕಾಲದ ಹೊತ್ತಿಗೆ ಅವನು ಹೊದ್ದುಕೊಳ್ಳುವ ವಸ್ತ್ರವನ್ನು ಹಿಂತಿರುಗಿಸು. ಆಗ ಅವನು ನಿನ್ನನ್ನು ಆಶೀರ್ವದಿಸುವನು. ನೀನು ಮಾಡಿದ್ದು ನಿನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ನೀತಿಯ ಕಾರ್ಯವೆಂದು ಪರಿಗಣಿಸಲಾಗುವುದು.


ಅವರು ದೇವರಿಂದ ಬರುವ ನೀತಿಯನ್ನು ತಿಳಿಯದವರಾಗಿ ತಮ್ಮದೇ ಆದ ನೀತಿಯನ್ನು ಸ್ಥಾಪಿಸಲು ಪ್ರಯತ್ನಪಟ್ಟದ್ದರಿಂದ ಅವರು ತಮ್ಮನ್ನು ದೇವರ ನೀತಿಗೆ ಒಳಪಡಿಸಲಿಲ್ಲ.


ಏಕೆಂದರೆ ಯಾವನಾದರೂ ಇಡೀ ಮೋಶೆಯ ನಿಯಮದಲ್ಲಿ ಒಂದೇ ಒಂದನ್ನು ಕೈಕೊಂಡು ನಡೆಯದೇ ಹೋದರೆ, ಅವನು ಇಡೀ ನಿಯಮವನ್ನೇ ಕೈಕೊಳ್ಳದ ಅಪರಾಧಿಯಾಗುತ್ತಾನೆ.


ನೀತಿಯ ಮಾರ್ಗದಲ್ಲಿ ಜೀವವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.


ನಿಮ್ಮ ಎಲ್ಲಾ ಅಪ್ಪಣೆಗಳನ್ನು ಪರಿಗಣಿಸುವಾಗ ನಾನು ನಾಚಿಕೆಗೆ ಗುರಿಯಾಗುವುದಿಲ್ಲ.


ಆದ್ದರಿಂದ ನೀವು ನನ್ನ ನಿಯಮಗಳನ್ನೂ, ನನ್ನ ನಿರ್ಣಯಗಳನ್ನೂ ಕೈಗೊಳ್ಳಿರಿ. ಇವುಗಳನ್ನು ಅನುಸರಿಸುವವರು ನಿಯಮಗಳ ಮೂಲಕವೇ ಬದುಕುವರು, ನಾನೇ ಯೆಹೋವ ದೇವರು.


ನಿಯಮವು ನಂಬಿಕೆಯನ್ನು ಆಧಾರಗೊಂಡದ್ದಲ್ಲ. ಆದರೆ, “ನಿಯಮಗಳ ಕ್ರಿಯೆಗಳನ್ನು ಮಾಡುವವನು ಅವುಗಳ ಮೂಲಕ ಬದುಕುವನು.”


ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು, ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.


ಆಗ ಅವರು ದೇವರಲ್ಲಿ ತಮ್ಮ ಭರವಸೆ ಇಡುವರು. ಮತ್ತು ದೇವರ ಕ್ರಿಯೆಗಳನ್ನು ಮರೆತು ಬಿಡದೆ ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವರು.


ಸತ್ಯವನ್ನು ನಡೆಸುವುದಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಗೊಂಡು ಸತ್ಯಪರನಾಗಿ ನಡೆದರೆ, ಅವನು ನೀತಿವಂತನು ಮತ್ತು ನಿಶ್ಚಯವಾಗಿ ಬದುಕುವನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು