Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:3 - ಕನ್ನಡ ಸಮಕಾಲಿಕ ಅನುವಾದ

3 ಹೀಗಿರುವುದರಿಂದ ಓ ಇಸ್ರಾಯೇಲರೇ, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದುದರಿಂದ ಇಸ್ರಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ, ಅಭಿವೃದ್ಧಿಯಾಗುವಂತೆ, ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದದರಿಂದ ಇಸ್ರಾಯೇಲ್ಯರೇ, ನಿಮ್ಮ ಪಿತೃಗಳ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವದಕ್ಕೂ ನೀವು ಬಹಳವಾಗಿ ಹೆಚ್ಚುವದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಸ್ರೇಲಿನ ಜನರೇ, ಕಿವಿಗೊಟ್ಟು ಕೇಳಿರಿ. ದೇವರ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನಿಮಗೆ ಎಲ್ಲಾದರಲ್ಲಿ ಶುಭವಾಗುವುದು. ನಿಮಗೆ ಹೆಚ್ಚು ಮಕ್ಕಳಾಗುವವು. ನೀವು ನೆಲೆಸುವ ದೇಶವು ನಿಮ್ಮ ಪೂರ್ವಿಕರಿಗೆ ದೇವರು ವಾಗ್ದಾನ ಮಾಡಿದ ಪ್ರಕಾರ ಫಲಭರಿತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:3
25 ತಿಳಿವುಗಳ ಹೋಲಿಕೆ  

ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸುವೆನು. ನಿನ್ನ ಸಂತಾನದವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ನಿನ್ನ ಸಂತತಿಯು ಭೂಮಿಯ ಧೂಳಿನಂತೆ ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣೋತ್ತರಗಳಿಗೆ ಹರಡಿಕೊಳ್ಳುವೆ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಜನರು ಆಶೀರ್ವಾದ ಹೊಂದುವರು.


ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವಾಗುವುದು.


ಯೆಹೋವ ದೇವರು ಅವನನ್ನು ಹೊರಗೆ ಕರೆದುಕೊಂಡು ಬಂದು, “ಈಗ ನೀನು ಆಕಾಶವನ್ನು ದೃಷ್ಟಿಸಿ, ನಕ್ಷತ್ರಗಳನ್ನು ಲೆಕ್ಕಿಸಲು ನಿನ್ನಿಂದಾದರೆ, ಲೆಕ್ಕಿಸು. ಅದರಂತೆಯೇ ನಿನ್ನ ಸಂತತಿಯು ಆಗುವುದು,” ಎಂದು ಹೇಳಿದರು.


“ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನ ನೆರವೇರುವ ಕಾಲವು ಹತ್ತಿರ ಬಂದಾಗ, ಈಜಿಪ್ಟಿನಲ್ಲಿ ನಮ್ಮ ಜನರ ಸಂಖ್ಯೆ ಬಹಳ ಹೆಚ್ಚಾಯಿತು.


ನೀತಿವಂತರಿಗೆ ನೀವು, “ಅವರಿಗೆ ಒಳ್ಳೆಯದಾಗಲಿ!” ಎಂದು ಹೇಳಿರಿ. ಏಕೆಂದರೆ ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.


ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ, ಬಹುಕಾಲ ಬದುಕಿದರೂ ದೇವರಿಗೆ ಹೆದರಿ ದೈವಭಕ್ತಿಯುಳ್ಳವರಿಗೆ ಒಳ್ಳೆಯದಾಗುವುದೆಂದು ನಾನು ಬಲ್ಲೆನು.


ಹೀಗಿರುವುದರಿಂದ ನೀವು ಅವುಗಳನ್ನು ಎಚ್ಚರದಿಂದ ಕೈಗೊಂಡು ಅನುಸರಿಸಿರಿ. ಏಕೆಂದರೆ ಇತರ ಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, “ನಿಶ್ಚಯವಾಗಿ ಇದು ದೊಡ್ಡ ಜನಾಂಗವು ಎಂತಹ ಜ್ಞಾನವೂ ವಿವೇಕವೂ ಉಳ್ಳ ಜನಾಂಗವಾಗಿದೆ” ಎನ್ನುವರು.


ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಹರಡಿಕೊಂಡು ಬಲಗೊಂಡರು, ಅದರಿಂದ ಆ ದೇಶವು ಅವರಿಂದ ತುಂಬಿತು.


ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ, ನಿನ್ನ ಸಂತಾನದವರನ್ನು ಸಹ ಲೆಕ್ಕಿಸಲು ಸಾಧ್ಯವಾಗುವುದು.


“ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ, ನಿನ್ನನ್ನು ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು. ನೀನು ಆಶೀರ್ವಾದವಾಗಿ ಇರುವಿ.


ಈಜಿಪ್ಟಿನ ವ್ಯಥೆಯಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ಇರುವ ಹಾಲು ಜೇನು ಹರಿಯುವ ದೇಶಕ್ಕೆ ಬರಮಾಡುವೆನೆಂದು ವಾಗ್ದಾನ ಮಾಡಿದ್ದೇನೆ,’ ಎಂದು ಅವರಿಗೆ ತಿಳಿಸು.


ನಿಮಗೂ, ನಿಮ್ಮ ತರುವಾಯ ನಿಮ್ಮ ಮಕ್ಕಳಿಗೂ ಒಳ್ಳೆಯದು ಆಗುವ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀವು ಬಹಳ ದಿವಸವಿರುವ ಹಾಗೆಯೂ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ದೇವರ ನಿಯಮಗಳನ್ನೂ, ಆಜ್ಞೆಗಳನ್ನೂ ಅನುಸರಿಸಿರಿ.


ಆದರೆ ನಾನು ಇದನ್ನು ಅವರಿಗೆ, “ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು; ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೆಯದಾಗುವಂತೆ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ,” ಎಂದು ಆಜ್ಞಾಪಿಸಿ ಹೇಳಿದೆನು.


ನಾವು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇವೋ, ಆ ನಮ್ಮ ದೇವರಾದ ಯೆಹೋವ ದೇವರ ಮಾತನ್ನು ಅದು ಹಿತವಾದರೂ ಸರಿಯೇ, ಅಹಿತವಾದರೂ ಸರಿಯೇ ಕೇಳುವೆವು,” ಎಂದರು.


ಇದಲ್ಲದೆ ಮೋಶೆಗೆ, “ನಾನು ನಿನ್ನ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿದ್ದೇನೆ,” ಎಂದು ಹೇಳಿದರು. ಮೋಶೆಯು ದೇವರ ಕಡೆ ದೃಷ್ಟಿ ಇಡುವುದಕ್ಕೆ ಭಯಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.


ಆ ದೇಶದಲ್ಲಿ ಗೋಧಿಯೂ, ಜವೆಗೋಧಿಯೂ, ದ್ರಾಕ್ಷೆಯೂ, ಅಂಜೂರ ಮರಗಳೂ, ದಾಳಿಂಬೆಗಳೂ ಇರುತ್ತವೆ. ಅದು ಓಲಿವ್ ಎಣ್ಣೆಯೂ, ಜೇನೂ ಉಳ್ಳ ದೇಶವೇ.


ಯೆಹೋವ ದೇವರು ನಿಮ್ಮ ಪಿತೃಗಳಿಗೂ, ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ.


ನಮ್ಮನ್ನು ಈ ಸ್ಥಳಕ್ಕೆ ಕರೆತಂದು, ಹಾಲೂ ಜೇನೂ ಹರಿಯುವ ದೇಶವಾಗಿರುವ ಈ ದೇಶವನ್ನು ನಮಗೆ ಕೊಟ್ಟಿದ್ದಾರೆ.


ಪರಲೋಕದ ನಿಮ್ಮ ಪರಿಶುದ್ಧ ನಿವಾಸದೊಳಗಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಾಯೇಲರನ್ನೂ, ನೀವು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಪ್ರಕಾರ, ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ಈ ದೇಶವನ್ನೂ ಆಶೀರ್ವದಿಸಿರಿ,” ಎಂದು ಹೇಳಬೇಕು.


ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಪ್ರಕಾರ ಅಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಹಾಲೂ ಜೇನೂ ಹರಿಯುವಂಥ ದೇಶವನ್ನು ನೀವು ಪ್ರವೇಶಿಸುವಂತೆ ಯೊರ್ದನ್ ನದಿಯನ್ನು ದಾಟುವಾಗ, ಅವುಗಳ ಮೇಲೆ ಈ ನಿಯಮದ ವಾಕ್ಯಗಳನ್ನೆಲ್ಲಾ ಆ ಕಲ್ಲಿನ ಮೇಲೆ ಬರೆಯಬೇಕು.


ನಾನು ಅವರ ಪಿತೃಗಳಿಗೆ ಪ್ರಮಾಣ ಮಾಡಿದಂಥ, ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ, ಅವರು ತಿಂದು ತೃಪ್ತರಾಗಿ ಕೊಬ್ಬಿದವರಾದಾಗ, ಅವರು ಅನ್ಯದೇವರುಗಳ ಕಡೆಗೆ ತಿರುಗಿಕೊಂಡು, ಅವುಗಳನ್ನು ಪೂಜಿಸಿ, ನನಗೆ ಕೋಪವನ್ನೆಬ್ಬಿಸಿ, ನನ್ನ ಒಡಂಬಡಿಕೆಯನ್ನು ಮೀರುವರು.


ದೇವರೇ, ನಿಮ್ಮ ಸೂತ್ರಗಳನ್ನು ಪೂರ್ಣವಾಗಿ ಕೈಗೊಳ್ಳಬೇಕೆಂದು ನೀವು ಆಜ್ಞಾಪಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು