Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:7 - ಕನ್ನಡ ಸಮಕಾಲಿಕ ಅನುವಾದ

7 ಅವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸ ಮಾಡಿಸಿ, ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯವಾಗಿ ಮಾತನಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇವುಗಳನ್ನು ನಿನ್ನ ಮಕ್ಕಳಿಗೆ ಮನದಟ್ಟಾಗಿಸು; ಮನೆಯಲ್ಲಿರುವಾಗಲು, ಪ್ರಯಾಣದಲ್ಲಿರುವಾಗಲು, ಮಲಗುವಾಗಲು, ಏಳುವಾಗಲು ಇವುಗಳನ್ನು ಕುರಿತು ಪಾಠಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ ಮನೆಯಲ್ಲಿ ಕೂತಿರುವಾಗಲೂ ದಾರಿನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಇವುಗಳ ವಿಷಯದಲ್ಲಿ ಮಾತಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮ ಮಕ್ಕಳಿಗೆ ಇದನ್ನು ಕಲಿಸಲು ಮರೆಯಬೇಡಿರಿ. ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ರಸ್ತೆಗಳಲ್ಲಿ ನಡೆಯುತ್ತಿರುವಾಗ, ನೀವು ಮಲಗಿರುವಾಗ, ಎದ್ದಾಗ ಈ ಆಜ್ಞೆಗಳ ಕುರಿತಾಗಿ ಮಾತಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:7
29 ತಿಳಿವುಗಳ ಹೋಲಿಕೆ  

ನೀವು ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ, ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.


ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸಬೇಡಿರಿ; ಕರ್ತನ ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಮಕ್ಕಳನ್ನು ಬೆಳೆಸಿರಿ.


ಆದರೆ ಕ್ರಿಸ್ತ ಯೇಸುವನ್ನು ನಿಮ್ಮ ಹೃದಯಗಳಲ್ಲಿ “ಕರ್ತದೇವರು” ಎಂದು ಪ್ರತಿಷ್ಠೆ ಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವದಿಂದಲೂ ಗೌರವದಿಂದಲೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧವಾಗಿರಿ.


ನೀವೂ, ನಿಮ್ಮ ಮಕ್ಕಳೂ, ನಿಮ್ಮ ಮೊಮ್ಮಕ್ಕಳೂ ತಮ್ಮ ಜೀವನದ ದಿವಸಗಳಲ್ಲೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಕೈಗೊಳ್ಳುವ ಹಾಗೆಯೂ, ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಾನು ನಿಮಗೆ ಕೊಡುವ ದೇವರ ಎಲ್ಲಾ ತೀರ್ಪುಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಬೇಕು.


ನಿಮ್ಮ ಬಾಯೊಳಗಿಂದ ಯಾವ ಕೆಟ್ಟಮಾತೂ ಹೊರಡದಿರಲಿ. ಕೇಳುವವರಿಗೆ ಆತ್ಮಿಕ ಹಿತವನ್ನುಂಟು ಮಾಡಿ, ಇತರರಿಗೆ ಅವಶ್ಯವಿರುವ ಮಾತುಗಳನ್ನು ಮಾತ್ರ ಆಡಿರಿ.


ಏಕೆಂದರೆ, ಅವನು ತನ್ನ ಮಕ್ಕಳಿಗೂ ಅವನ ತರುವಾಯ ಅವನ ಮನೆಯವರಿಗೂ ಯೆಹೋವ ದೇವರ ಮಾರ್ಗವನ್ನು ಕೈಗೊಂಡು, ನೀತಿ ನ್ಯಾಯಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸುವನು. ಆಗ ಯೆಹೋವ ದೇವರಾದ ನಾನು ಅಬ್ರಹಾಮನಿಗೆ ಹೇಳಿದ್ದು ನೆರವೇರುವದು,” ಎಂದುಕೊಂಡರು.


ನೀನು ನಡೆಯುವಾಗ ಅವು ನಿನಗೆ ಮಾರ್ಗದರ್ಶಿಯಾಗಿರುತ್ತವೆ. ನೀನು ಮಲಗುವಾಗ ಅವು ನಿನ್ನನ್ನು ಕಾಯುತ್ತವೆ. ನೀನು ಎಚ್ಚರಗೊಂಡಾಗ ಅವು ನಿನ್ನೊಂದಿಗೆ ಮಾತಾಡುತ್ತವೆ.


ಒಳ್ಳೆಯವನು ತನ್ನ ಹೃದಯದ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಆದರೆ ಕೆಟ್ಟವನು ತನ್ನ ಹೃದಯದ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.


ಒಳ್ಳೆಯವನು ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.


ನಿಮ್ಮ ಸಂಭಾಷಣೆ ಯಾವಾಗಲೂ ಪೂರ್ಣ ಕೃಪೆಯುಳ್ಳದ್ದೂ, ಉಪ್ಪಿನಿಂದ ಹದವುಳ್ಳದ್ದೂ ಆಗಿರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಹೇಗೆ ಉತ್ತರಕೊಡಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.


ಜ್ಞಾನಿಗಳ ತುಟಿಗಳು ಪರಿಜ್ಞಾನವನ್ನು ಹರಡುತ್ತವೆ. ಆದರೆ ಬುದ್ಧಿಹೀನರ ಹೃದಯವು ಹಾಗೆ ಮಾಡುವುದೇ ಇಲ್ಲ.


ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ, ಜ್ಞಾನದ ಕೊರತೆಯಿಂದ ಬುದ್ಧಿಹೀನರು ಸಾಯುತ್ತಾರೆ.


ಆಗ ಯೆಹೋವ ದೇವರಿಗೆ ಭಯಪಡುವವರು, ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡರು. ಯೆಹೋವ ದೇವರು ಕಿವಿಗೊಟ್ಟು ಅದನ್ನು ಕೇಳಿದರು. ಇದಲ್ಲದೆ ಯೆಹೋವ ದೇವರಿಗೆ ಭಯಪಟ್ಟು, ಅವರ ನಾಮವನ್ನು ಗೌರವಿಸುವವರ ಬಗ್ಗೆ ಅವರು ತಮ್ಮ ಮುಂದೆ ಇದ್ದ ಜ್ಞಾಪಕ ಪುಸ್ತಕದಲ್ಲಿ ಬರೆಸಿದರು.


ಜ್ಞಾನಿಯ ನಾಲಿಗೆಯು ಒಳ್ಳೆಯ ಪರಿಜ್ಞಾನವನ್ನು ಹರಡುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನು ಹೊರಗೆಡವುತ್ತದೆ.


“ಯೆಹೋವ ದೇವರ ಆಶೀರ್ವಾದವು ನಿಮ್ಮ ಮೇಲೆ ಇರಲಿ; ಯೆಹೋವ ದೇವರು ಹೆಸರಿನಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ,” ಎಂದು ಹಾದುಹೋಗುವವರು ಹೇಳದಿರಲಿ.


ಅರಸರ ಮುಂದೆ ನಿಮ್ಮ ಶಾಸನಗಳನ್ನು ಮಾತಾಡುವೆನು, ಅವುಗಳ ಬಗ್ಗೆ ನಾನೆಂದೂ ನಾಚಿಕೆಪಡುವುದಿಲ್ಲ.


ಆಗ ಊರುಬಾಗಿಲಲ್ಲಿ ಕೂಡಿದ್ದ ಸಮಸ್ತ ಜನರೂ ಹಿರಿಯರೂ, “ನಾವು ಸಾಕ್ಷಿಗಳೇ, ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಯೆಹೋವ ದೇವರು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡಲಿ. ಎಫ್ರಾತದಲ್ಲಿ ಧನವಂತನಾಗಿರು, ಬೇತ್ಲೆಹೇಮಿನಲ್ಲಿ ಘನವಂತನಾಗಿರು.


ನೀತಿವಂತನ ಬಾಯಿ ಜ್ಞಾನವನ್ನು ನುಡಿಯುವುದು; ಅವನ ನಾಲಿಗೆ ನ್ಯಾಯವನ್ನು ಮಾತನಾಡುವುದು.


ನೀನು ಮಾಡಿದ್ದಕ್ಕೆ ಯೆಹೋವ ದೇವರು ನಿನಗೆ ಬದಲು ಕೊಡಲಿ. ಇಸ್ರಾಯೇಲ್ ದೇವರಾದ ಯೆಹೋವ ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಅವರಿಂದ ದೊಡ್ಡ ಪ್ರತಿಫಲ ಅನುಗ್ರಹಿಸಲಿ,” ಎಂದನು.


ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ, “ಯೆಹೋವ ದೇವರು ನಿಮ್ಮ ಸಂಗಡ ಇರಲಿ,” ಎಂದನು. ಅದಕ್ಕೆ ಅವರು, “ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,” ಎಂದರು.


ದೇವರೇ, ನನ್ನ ಯೌವನದಿಂದ ನನಗೆ ನೀವು ಕಲಿಸಿದ್ದೀರಿ. ಈವರೆಗೂ ನಿಮ್ಮ ಅದ್ಭುತಕಾರ್ಯಗಳನ್ನು ಘೋಷಿಸುತ್ತಿದ್ದೇನೆ.


ಜೀವಂತನು; ಜೀವಂತನೇ ನಿನ್ನನ್ನು ಸ್ತುತಿಸುವೆನು. ಹೌದು, ಜೀವಂತನಾದ ನಾನೇ ಈ ಹೊತ್ತು ನಿಮ್ಮನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿಮ್ಮ ನಿಷ್ಠೆಯನ್ನು ಬೋಧಿಸುವನು.


ಪೂರ್ವಿಕರು ನಿನಗೆ ಬೋಧಿಸಿ ಬುದ್ಧಿ ಹೇಳಲಿಲ್ಲವೋ? ಅವರು ತಮ್ಮ ತಿಳುವಳಿಕೆಯನ್ನು ಹೊರತರಲಿಲ್ಲವೋ?


ನಿಮ್ಮ ಬಾಯಿಂದ ಬರುವ ನಿಯಮಗಳನ್ನೆಲ್ಲಾ ನನ್ನ ತುಟಿಗಳಿಂದ ನಾನು ವರ್ಣಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು