ಧರ್ಮೋಪದೇಶಕಾಂಡ 7:1 - ಕನ್ನಡ ಸಮಕಾಲಿಕ ಅನುವಾದ1 ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಬರಮಾಡಿದಾಗ, ಅವರು ನಿಮಗಿಂತ ದೊಡ್ಡವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಎಂದರೆ, ಗಿರ್ಗಾಷಿಯರನ್ನೂ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿ, ಸಂಖ್ಯೆಯಲ್ಲೂ ಶಕ್ತಿಯಲ್ಲೂ ನಿಮ್ಮನ್ನು ಮೀರುವ ಜನಾಂಗಗಳನ್ನು ಅಲ್ಲಿಂದ ನಿಮ್ಮ ಮುಂದೆಯೆ ಹೊರಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಸಂಖ್ಯೆಯಲ್ಲಿಯೂ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ಯೆಹೋವನು ನಿಮ್ಮನ್ನು ನಡೆಸುವನು. ನಿಮಗಿಂತ ಬಲಿಷ್ಠವಾಗಿದ್ದು ಅಲ್ಲಿ ವಾಸಿಸುತ್ತಿರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ಆ ದೇಶದಿಂದ ನಿಮಗಾಗಿ ಹೊರಗಟ್ಟುವನು. ಅಧ್ಯಾಯವನ್ನು ನೋಡಿ |