ಧರ್ಮೋಪದೇಶಕಾಂಡ 7:12 - ಕನ್ನಡ ಸಮಕಾಲಿಕ ಅನುವಾದ12 ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದುಕೊಂಡರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನೂ, ಕರುಣೆಯನ್ನೂ ನಿಮಗೋಸ್ಕರ ನೆರವೇರಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ಒಡಂಬಡಿಕೆಯನ್ನು ನಂಬಿಗಸ್ತಿಕೆಯಿಂದ ನೆರವೇರಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಈ ವಿಧಿಗಳನ್ನು ನೀವು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸುವರು, ನಿಮಗೆ ಕೃಪೆತೋರುವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನೂ ಕೃಪೆಯನ್ನೂ ನಿಮ್ಮಲ್ಲಿ ನೆರವೇರಿಸುವವನಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ನೀವು ಈ ಕಟ್ಟಳೆಗಳಿಗೆ ಕಿವಿಗೊಡುವುದಾದರೆ ಮತ್ತು ಅವುಗಳಿಗೆ ಎಚ್ಚರಿಕೆಯಿಂದ ವಿಧೇಯರಾದರೆ, ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರೊಡನೆ ಮಾಡಿಕೊಂಡ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವನು; ಅಧ್ಯಾಯವನ್ನು ನೋಡಿ |
“ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.