Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:13 - ಕನ್ನಡ ಸಮಕಾಲಿಕ ಅನುವಾದ

13 ಅವರು ನಿಮ್ಮನ್ನು ಪ್ರೀತಿಸಿ, ನಿಮ್ಮನ್ನು ಆಶೀರ್ವದಿಸಿ, ನಿಮ್ಮನ್ನು ಅಭಿವೃದ್ಧಿಗೊಳಿಸಿ ಮತ್ತು ನಿಮಗೆ ಕೊಡುತ್ತೇನೆಂದು ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ದೇಶದಲ್ಲಿ ನಿಮ್ಮ ಗರ್ಭದ ಫಲವನ್ನೂ ಅಂದರೆ, ಭೂಮಿಯ ಹುಟ್ಟುವಳಿಯನ್ನೂ, ನಿಮ್ಮ ಧಾನ್ಯವನ್ನೂ, ನಿಮ್ಮ ಹೊಸ ದ್ರಾಕ್ಷಾರಸವನ್ನೂ, ನಿಮ್ಮ ಎಣ್ಣೆಯನ್ನೂ, ನಿಮ್ಮ ಪಶುಗಳನ್ನೂ, ನಿಮ್ಮ ಕುರಿಗಳ ಮಂದೆಗಳನ್ನೂ ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ನಿಮ್ಮನ್ನು ಪ್ರೀತಿಸಿ, ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ, ವ್ಯವಸಾಯವನ್ನೂ, ನಿಮಗಿರುವ ದವಸ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ನಿಮ್ಮ ದನ ಮತ್ತು ಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿಮ್ಮನ್ನು ಅಚಲವಾಗಿ ಪ್ರೀತಿಸಿ, ಅಭಿವೃದ್ಧಿಗೊಳಿಸುವರು; ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿನಲ್ಲಿ ನಿಮ್ಮ ಸಂತಾನವನ್ನು, ವ್ಯವಸಾಯವನ್ನು, ದವಸಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಹಾಗು ದನಕುರಿಗಳ ಮಂದೆಯನ್ನು ವೃದ್ಧಿಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿಮ್ಮನ್ನು ಪ್ರೀತಿಸಿ ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ ವ್ಯವಸಾಯವನ್ನೂ ನಿಮಗಿರುವ ಧಾನ್ಯದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ನಿಮ್ಮ ದನಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಮತ್ತು ಆತನು ಆಶೀರ್ವದಿಸುವನು. ನಿಮ್ಮ ಜನಾಂಗವು ವೃದ್ಧಿಯಾಗುವಂತೆ ಮಾಡುವನು. ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಆಶೀರ್ವದಿಸುವನು. ನಿಮ್ಮ ಹೊಲಗಳಲ್ಲಿ ಸಮೃದ್ಧಿಯಾದ ಬೆಳೆಯು ಉಂಟಾಗುವಂತೆ ಆಶೀರ್ವದಿಸುವನು. ಆತನು ನಿಮಗೆ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಕೊಡುವನು. ನಿಮ್ಮ ದನಕುರಿಗಳು ಮರಿಗಳನ್ನು ಈಯುವಂತೆ ಆಶೀರ್ವದಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದಲ್ಲಿ ನೀವು ನೆಲೆಸಿರುವಾಗ ನಿಮಗೆ ಈ ಆಶೀರ್ವಾದಗಳೆಲ್ಲಾ ಪ್ರಾಪ್ತವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:13
26 ತಿಳಿವುಗಳ ಹೋಲಿಕೆ  

ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಗೊಳ್ಳುವವರೇ ನನ್ನನ್ನು ಪ್ರೀತಿಸುವವರು. ನನ್ನನ್ನು ಪ್ರೀತಿಸುವವನು ತನ್ನ ತಂದೆಗೆ ಪ್ರಿಯನಾಗಿರುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಿಸಿಕೊಳ್ಳುವೆನು,” ಎಂದು ಹೇಳಿದರು.


ನಾನು ನನ್ನ ತಂದೆಯ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನೆಲೆಗೊಂಡಿರುವಂತೆಯೇ ನೀವು ನನ್ನ ಆಜ್ಞೆಗಳನ್ನು ಪಾಲಿಸಿ ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಳ್ಳುವಿರಿ.


ಏಕೆಂದರೆ ನೀವು ನನ್ನನ್ನು ಪ್ರೀತಿಸಿ ನಾನು ದೇವರಿಂದ ಹೊರಟು ಬಂದವನೆಂದು ನಂಬಿದ್ದರಿಂದ ತಂದೆಯು ತಾವೇ ನಿಮ್ಮನ್ನು ಪ್ರೀತಿಸುತ್ತಾರೆ.


ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡಬೇಕು. ಆಗ ಆತನು ನಿಮ್ಮ ಆಹಾರವನ್ನೂ ನೀರನ್ನೂ ಆಶೀರ್ವದಿಸುವನು. ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿಬಿಡುವೆನು.


ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಯೆಹೋವ ದೇವರ ಆಶೀರ್ವಾದವು ಸಂಪತ್ತನ್ನು ಉಂಟುಮಾಡುವುದು; ಅವರು ಅದರೊಂದಿಗೆ ಯಾವ ದುಃಖವನ್ನೂ ಸೇರಿಸುವುದಿಲ್ಲ.


ಇದಲ್ಲದೆ ಯೆಹೋವ ದೇವರು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಅಧಿಕವಾಗಿ ಆಶೀರ್ವದಿಸಿದರು. ಯೋಬನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಕತ್ತೆಗಳೂ ದೊರಕಿದವು.


ನಿಮಗೆ ಕೊಡುತ್ತೇನೆಂದು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಯೆಹೋವ ದೇವರು ಭೂಮಿಯ ಮೇಲೆ ನಿಮ್ಮನ್ನು ಸಂತಾನ, ಪಶು ಮತ್ತು ಕೃಷಿ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವರು.


ಅಂಥವರು ನೀರಿನ ಕಾಲುವೆಗಳ ಬಳಿಯಲ್ಲಿ ನೆಟ್ಟಿರುವ, ಮರದ ಹಾಗಿರುವರು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದೆ, ಅದರ ಎಲೆ ಉದುರುವುದೇ ಇಲ್ಲ. ಅದರಂತೆ ಅವರು ಮಾಡುವ ಕಾರ್ಯವೆಲ್ಲವೂ ಸಫಲವಾಗುವುದು.


ನೀವು ಎಲ್ಲಾ ಜನರಿಗಿಂತ ಹೆಚ್ಚಾಗಿರುವ ಕಾರಣ ಯೆಹೋವ ದೇವರು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ. ನೀವು ಎಲ್ಲಾ ಜನರಿಗಿಂತ ಸಂಖ್ಯಾತರು.


ಏಕೆಂದರೆ ಯೆಹೋವ ದೇವರು ನೀತಿಯುಳ್ಳವರು. ಅವರು ನ್ಯಾಯವನ್ನು ಪ್ರೀತಿಸುತ್ತಾರೆ; ಯಥಾರ್ಥರು ಅವರ ಮುಖವನ್ನು ದೃಷ್ಟಿಸುವರು.


“ ‘ನಾನು ನಿಮ್ಮನ್ನು ಲಕ್ಷಿಸಿ, ನಿಮ್ಮನ್ನು ಅಭಿವೃದ್ಧಿ ಮಾಡಿ, ನಿಮ್ಮನ್ನು ಹೆಚ್ಚಿಸಿ, ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.


ಇದಲ್ಲದೆ ನೀವು ನಿಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕಾಪಾಡಿ,


ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳು ಸ್ವಾಧೀನ ಮಾಡಿಕೊಂಡ ದೇಶಕ್ಕೆ ನಿಮ್ಮನ್ನು ತರುವರು. ನೀವು ಅದನ್ನು ಸ್ವಾಧೀನಮಾಡಿಕೊಳ್ಳುವಿರಿ. ದೇವರು ನಿಮ್ಮ ಪಿತೃಗಳಿಗಿಂತಲೂ ನಿಮ್ಮನ್ನು ಸಮೃದ್ಧಿಗೊಳಿಸಿ ಹೆಚ್ಚಿಸುವರು.


ಮಕ್ಕಳು ಯೆಹೋವ ದೇವರು ಕೊಟ್ಟ ಸೊತ್ತು. ಗರ್ಭಫಲವು ದೇವರ ಬಹುಮಾನ.


ಯೆಹೋವ ದೇವರು ಕುರುಡರ ಕಣ್ಣುಗಳನ್ನು ತೆರೆಯುತ್ತಾರೆ. ಅವರು ದೀನರನ್ನು ಎತ್ತುತ್ತಾರೆ. ನೀತಿವಂತರನ್ನು ಪ್ರೀತಿಸುತ್ತಾರೆ.


ದುಷ್ಟರ ಮಾರ್ಗವು ಯೆಹೋವ ದೇವರಿಗೆ ಅಸಹ್ಯ. ಆದರೆ ನೀತಿಯನ್ನು ಹಿಂಬಾಲಿಸುವವನನ್ನು ಅವರು ಪ್ರೀತಿಸುತ್ತಾರೆ.


ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ಹೋಗಿ ಯೆಹೋವ ದೇವರಾದ ನಾನು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ,” ಎಂದು ಹೇಳಿದರು.


ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಲೋಕದ ಎಲ್ಲಾ ಜನಾಂಗಗಳಿಗಿಂತ ಉನ್ನತ ಸ್ಥಿತಿಯಲ್ಲಿರಿಸುವರು.


“ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.


ನೀವು ಅವನಿಗೂ ಅವನ ಮನೆಗೂ ಅವನಲ್ಲಿ ಇರುವ ಎಲ್ಲವುಗಳ ಸುತ್ತಲು ಬೇಲಿ ಹಾಕಿದ್ದೀರಲ್ಲಾ? ಅವನು ಕೈಹಾಕಿದ ಕೆಲಸವನ್ನು ನೀವು ಆಶೀರ್ವದಿಸಿದ್ದೀರಿ, ಆದ್ದರಿಂದ ಅವನ ಕುರಿದನಗಳ ಹಿಂಡುಗಳು ಭೂಮಿಯ ಮೇಲೆಲ್ಲಾ ಹರಡುತ್ತಾ ಬಂದಿದೆ.


ದೇವರು ಅವರನ್ನು ಆಶೀರ್ವದಿಸಿದ್ದರಿಂದ, ಅವರು ಬಹಳವಾಗಿ ಹೆಚ್ಚಿದರು; ದೇವರು ದನಗಳು ಕಡಿಮೆಯಾಗುವಂತೆ ಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು