ಧರ್ಮೋಪದೇಶಕಾಂಡ 7:15 - ಕನ್ನಡ ಸಮಕಾಲಿಕ ಅನುವಾದ15 ಯೆಹೋವ ದೇವರು ಎಲ್ಲಾ ರೋಗಗಳನ್ನು ನಿಮ್ಮಿಂದ ತೆಗೆದುಬಿಡುವರು. ನಿಮಗೆ ತಿಳಿದಿರುವ ಈಜಿಪ್ಟಿನ ಕ್ರೂರರೋಗಗಳನ್ನು ನಿಮ್ಮ ಮೇಲೆ ಬರಮಾಡದ, ನಿಮ್ಮನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿಮ್ಮಲ್ಲಿ ಯಾವ ವ್ಯಾಧಿಯೂ ಉಂಟಾಗದಂತೆ ಯೆಹೋವನು ಮಾಡುವನು. ನಿಮ್ಮ ಅನುಭವಕ್ಕೆ ಬಂದ ಪ್ರಕಾರ ಐಗುಪ್ತದೇಶದಲ್ಲಿ ಪ್ರಬಲವಾಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸದೆ, ಅವುಗಳನ್ನು ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಿಮಗೆ ಯಾವ ವ್ಯಾಧಿಯೂ ತಗಲದಂತೆ ಸರ್ವೇಶ್ವರ ನೋಡಿಕೊಳ್ಳುವರು. ನೀವೇ ಅನುಭವದಿಂದ ಅರಿತಿರುವಂತೆ ಈಜಿಪ್ಟ್ ದೇಶದಲ್ಲಿ ಪ್ರಬಲ ಆಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸಲಿಲ್ಲ; ಅವುಗಳನ್ನು ನಿಮ್ಮ ದ್ವೇಷಿಗಳ ಮೇಲೆ ಮಾತ್ರ ಬರಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಿಮ್ಮಲ್ಲಿ ಯಾವ ವ್ಯಾಧಿಯೂ ಉಂಟಾಗದಂತೆ ಯೆಹೋವನು ಮಾಡುವನು. ನಿಮ್ಮ ಅನುಭವಕ್ಕೆ ಬಂದ ಪ್ರಕಾರ ಐಗುಪ್ತದೇಶದಲ್ಲಿ ಪ್ರಬಲವಾಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸದೆ ಅವುಗಳನ್ನು ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಿಮ್ಮಿಂದ ಎಲ್ಲಾ ತರದ ಕಾಯಿಲೆಗಳನ್ನು ಯೆಹೋವನು ತೆಗೆದುಹಾಕುವನು. ಈಜಿಪ್ಟಿನಲ್ಲಿ ನಿಮ್ಮನ್ನು ಬಾಧಿಸುತ್ತಿದ್ದ ಭಯಂಕರ ಕಾಯಿಲೆಗಳು ನಿಮ್ಮನ್ನು ಬಾಧಿಸುವುದಿಲ್ಲ. ಆ ಕಾಯಿಲೆಗಳು ನಿಮ್ಮ ವೈರಿಗಳಿಗೆ ಉಂಟಾಗುವವು. ಅಧ್ಯಾಯವನ್ನು ನೋಡಿ |