ಧರ್ಮೋಪದೇಶಕಾಂಡ 7:16 - ಕನ್ನಡ ಸಮಕಾಲಿಕ ಅನುವಾದ16 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಒಪ್ಪಿಸುವ ಜನರನ್ನೆಲ್ಲಾ ನೀವು ಸಂಹರಿಸಬೇಕು. ಅವರ ಮೇಲೆ ನೀವು ಕಟಾಕ್ಷವಿಡಬಾರದು. ಅವರ ದೇವರುಗಳನ್ನು ಆರಾಧಿಸಬಾರದು. ಏಕೆಂದರೆ ಅವು ನಿಮಗೆ ಉರುಲಾಗುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿಮ್ಮ ದೇವರಾದ ಸರ್ವೇಶ್ವರಾ, ನಿಮ್ಮಿಂದ ಪರಾಜಯಪಡಿಸುವ ಜನರುಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯಪಡಿಸುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆ ದೇಶದಲ್ಲಿ ನೀವು ಯೆಹೋವನ ಸಹಾಯದಿಂದ ಸೋಲಿಸುವ ಜನರನ್ನೆಲ್ಲಾ ಕೊಂದುಬಿಡಬೇಕು. ಅವರಿಗೆ ಕನಿಕರ ತೋರಬಾರದು. ಅವರ ದೇವರುಗಳನ್ನು ಪೂಜಿಸಕೂಡದು! ಯಾಕೆಂದರೆ ಅವು ನಿಮಗೆ ಉರುಲಾಗಿ ನಿಮ್ಮ ಜೀವಿತವನ್ನು ಹಾಳುಮಾಡುತ್ತವೆ. ಅಧ್ಯಾಯವನ್ನು ನೋಡಿ |
ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’