Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:2 - ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ದಂಡಿಸಿ ಸಂಪೂರ್ಣವಾಗಿ ತೆಗೆದುಹಾಕಿಬಿಡುವರು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು. ಅವರಿಗೆ ದಯೆ ತೋರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಂಥ ಏಳು ಜನಾಂಗಗಳು ಯಾವುವೆಂದರೆ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಹಾಗು ಯೆಬೂಸಿಯರು. ಅವರನ್ನು ನೀವು ಸೋಲಿಸಿ ವಿನಾಶ ಶಾಪಗ್ರಸ್ತರನ್ನಾಗಿಸಬೇಕು. ಅವರ ಸಂಗಡ ಒಪ್ಪಂದಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿಮ್ಮ ಎದುರಿನಿಂದ ಹೊರಡಿಸುವವನಾಗಿ ಅವರನ್ನು ನಿಮ್ಮಿಂದ ಪರಾಜಯಪಡಿಸುವಾಗ ನೀವು ಅವರನ್ನು ನಿಶ್ಶೇಷವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮಗೆ ಅಧೀನಪಡಿಸುವನು. ನೀವು ಅವರನ್ನು ಸೋಲಿಸಿಬಿಡುವಿರಿ. ನೀವು ಅವರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅವರೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಬೇಡಿ ಮತ್ತು ಅವರಿಗೆ ಕರುಣೆಯನ್ನು ತೋರಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:2
45 ತಿಳಿವುಗಳ ಹೋಲಿಕೆ  

‘ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ, ಅವರ ಬಲಿಪೀಠಗಳನ್ನು ಕೆಡಿವಿಬಿಡಿರಿ,’ ಎಂದು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಏಕೆ ಮಾಡಿದಿರಿ?


ಗೂಢಚಾರರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು. ನಾವು ನಿನಗೆ ಕರುಣೆ ತೋರಿಸುವೆವು,” ಎಂದರು.


ಯೆಹೋವ ದೇವರು ಲಿಬ್ನವನ್ನೂ, ಅದರ ಅರಸನನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟರು. ಯೆಹೋಶುವನು ಅದನ್ನೂ, ಅದರಲ್ಲಿರುವ ಎಲ್ಲರನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಖಡ್ಗದಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು.


ಆಗ ಅವರು ಆಕೆಗೆ, “ನೀನು ಈ ನಮ್ಮ ಕಾರ್ಯವನ್ನು ಬಹಿರಂಗ ಮಾಡದೆ ಇದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿ ಇರುವೆವು. ಯೆಹೋವ ದೇವರು ನಮಗೆ ದೇಶವನ್ನು ಕೊಟ್ಟಾಗ, ಸತ್ಯದಿಂದಲೂ, ದಯೆಯಿಂದಲೂ ನಡೆದುಕೊಳ್ಳುವೆವು,” ಎಂದರು.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ರಕ್ಷಿಸುವುದಕ್ಕೂ, ನಿಮ್ಮ ಶತ್ರುಗಳನ್ನು ನಿಮ್ಮ ಮುಂದೆ ಒಪ್ಪಿಸಿಬಿಡುವುದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾರೆ. ಅವರು ನಿಮ್ಮಲ್ಲಿ ಅಶುದ್ಧವಾದ ಕಾರ್ಯವನ್ನು ನೋಡಿ, ನಿಮ್ಮನ್ನು ಬಿಟ್ಟು ತಿರುಗಿಹೋಗದಂತೆ ನಿಮ್ಮ ಪಾಳೆಯವು ನಿರ್ಮಲವಾಗಿರಬೇಕು.


ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆಕಳುಹಿಸಿದನು. ಗಿಬ್ಯೋನ್ಯರು ಇಸ್ರಾಯೇಲರಿಗೆ ಸೇರಿದವರಲ್ಲ. ಅಮೋರಿಯರಲ್ಲಿ ಉಳಿದ ಜನರಾಗಿದ್ದರು. ಅವರನ್ನು ಕೊಲ್ಲುವುದಿಲ್ಲವೆಂದು ಇಸ್ರಾಯೇಲರು ಆಣೆ ಇಟ್ಟಿದ್ದರು. ಆದರೆ ಸೌಲನು ಇಸ್ರಾಯೇಲರಿಗಾಗಿಯೂ, ಯೆಹೂದದವರಿಗಾಗಿಯೂ ತನಗಿದ್ದ ಆಸಕ್ತಿಯಿಂದ ಅವರನ್ನು ಕೊಂದುಹಾಕಲು ಪ್ರಯತ್ನಮಾಡಿದ್ದನು.


ಯೆಹೂದ ಗೋತ್ರದವರು ಹೋದಾಗ, ಯೆಹೋವ ದೇವರು ಕಾನಾನ್ಯರನ್ನೂ ಪೆರಿಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಬೆಜೆಕಿನಲ್ಲಿ ಹತ್ತು ಸಾವಿರ ಜನರನ್ನು ಕೊಂದರು.


ಯೆಹೋವ ದೇವರು ಅವರ ತಂದೆಗಳಿಗೆ ಆಣೆಯಿಟ್ಟ ಪ್ರಕಾರವೇ ಅವರ ಸುತ್ತಲೂ ಅವರಿಗೆ ವಿಶ್ರಾಂತಿಕೊಟ್ಟರು. ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ. ಅವರ ಶತ್ರುಗಳನ್ನೆಲ್ಲಾ ಯೆಹೋವ ದೇವರು ಅವರ ಕೈಗಳಿಗೆ ಒಪ್ಪಿಸಿದರು.


ಯೆಹೋಶುವನು ಈ ಸಮಸ್ತ ಅರಸರನ್ನೂ, ಅವರ ರಾಜ್ಯವನ್ನೂ ಏಕಕಾಲದಲ್ಲಿ ವಶಪಡಿಸಿಕೊಂಡನು. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.


ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ, ದಕ್ಷಿಣದ ಪ್ರದೇಶವನ್ನೂ, ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸರನ್ನೂ ಒಬ್ಬರನ್ನೂ ಉಳಿಸದೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದನು.


ಯೆಹೋವ ದೇವರು ಲಾಕೀಷನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಟ್ಟರು. ಅವರು ಅದನ್ನು ಎರಡನೆಯ ದಿವಸದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲರನ್ನು ಖಡ್ಗದಿಂದ ಹೊಡೆದರು.


ಆ ದಿನದಲ್ಲಿ ಯೆಹೋಶುವನು ಮಕ್ಕೇದ ಊರನ್ನು ಸ್ವಾಧೀನಪಡಿಸಿಕೊಂಡನು. ಅದರ ಅರಸನನ್ನೂ ಜನರನ್ನೂ ಖಡ್ಗಕ್ಕೆ ತುತ್ತಾಗುವಂತೆ ಮಾಡಿದನು. ಅದರಲ್ಲಿರುವ ಎಲ್ಲವನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ, ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೂ ಮಾಡಿದನು.


ಅದಕ್ಕವರು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವುದಕ್ಕೂ, ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡುವುದಕ್ಕೂ ತಮ್ಮ ಸೇವಕ ಮೋಶೆಗೆ ಆಜ್ಞಾಪಿಸಿದ್ದಾರೆಂದು, ನಿಮ್ಮ ಸೇವಕರಾದ ನಾವು ಕೇಳಿದೆವು. ಆದ್ದರಿಂದ ನಾವು ನಮ್ಮ ಪ್ರಾಣಕ್ಕಾಗಿ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.


ಇಸ್ರಾಯೇಲರು ಮರುಭೂಮಿಯಲ್ಲಿಯೂ ಬಯಲಿನಲ್ಲಿಯೂ ಓಡಿಸಿದ ಆಯಿ ಎಂಬ ಪಟ್ಟಣದ ನಿವಾಸಿಗಳೆಲ್ಲರನ್ನೂ ಖಡ್ಗದಿಂದ ಸಂಹರಿಸಿದ ನಂತರ ಅವರೆಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು.


ನೀವು ಅವರಿಗೆ ಸಮ್ಮತಿಸಬಾರದು. ಅವರ ಮಾತನ್ನು ಕೇಳಬಾರದು. ನೀವು ಅವರನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು.


ಈ ಪ್ರಕಾರ ನಮ್ಮ ದೇವರಾದ ಯೆಹೋವ ದೇವರು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲರನ್ನೂ ನಮ್ಮ ಕೈಗಳಲ್ಲಿ ಒಪ್ಪಿಸಿದರು. ಒಬ್ಬನಾದರೂ ತಪ್ಪಿಸಿಕೊಂಡು ಬದುಕುಳಿಯದಂತೆ ಅವರನ್ನು ಹೊಡೆದೆವು.


ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ, ಅವರ ಚಿತ್ರಗಳನ್ನೂ ಅವರು ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ, ಅವರ ಸಮಸ್ತ ಪವಿತ್ರ ಸ್ಥಳಗಳನ್ನೂ ಹಾಳುಮಾಡಬೇಕು.


ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ದೇವರು ಸ್ತುತಿಹೊಂದಲಿ.” ಅಬ್ರಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತನೆಯ ಒಂದು ಭಾಗವನ್ನು ಕೊಟ್ಟನು.


“ಯೆಹೋವ ದೇವರು ಹೊರತಾಗಿ ಮತ್ತೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.


ಆದಕಾರಣ ಈಗ ಬಾಲಕರನ್ನೂ, ಎಲ್ಲಾ ಪುರುಷನನ್ನು ಅರಿತಿರುವ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ.


ನಮ್ಮ ದೇವರಾದ ಯೆಹೋವ ದೇವರು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿದ್ದರಿಂದ, ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಸೋಲಿಸಿದೆವು.


ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತೆಗೆದುಕೊಂಡು, ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು. ಒಬ್ಬರನ್ನೂ ಉಳಿಸಲಿಲ್ಲ.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಒಪ್ಪಿಸುವ ಜನರನ್ನೆಲ್ಲಾ ನೀವು ಸಂಹರಿಸಬೇಕು. ಅವರ ಮೇಲೆ ನೀವು ಕಟಾಕ್ಷವಿಡಬಾರದು. ಅವರ ದೇವರುಗಳನ್ನು ಆರಾಧಿಸಬಾರದು. ಏಕೆಂದರೆ ಅವು ನಿಮಗೆ ಉರುಲಾಗುವವು.


ನೀವು ಅವನ ಮೇಲೆ ದಯೆ ತೋರಬಾರದು. ನಿಮಗೆ ಒಳ್ಳೆಯದಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಾಯೇಲರಲ್ಲಿ ಉಳಿಯದಂತೆ ತೆಗೆದುಹಾಕಬೇಕು.


ಅವಳ ಕೈಯನ್ನು ಕಡಿದುಹಾಕಬೇಕು. ಅವಳಿಗೆ ಕರುಣೆ ತೋರಿಸಬಾರದು.


ಯೆಹೋವ ದೇವರು ಅವರನ್ನು ನಿಮಗೆ ಒಪ್ಪಿಸಿಕೊಡುವಾಗ, ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಅವರಿಗೆ ಮಾಡಬೇಕು.


ನಿತ್ಯ ದೇವರು ನಿನ್ನ ಆಶ್ರಯವು. ದೇವರ ಶಾಶ್ವತ ತೋಳುಗಳು ನಿನಗೆ ಆಶ್ರಯ. ನಿನ್ನ ವೈರಿಗಳನ್ನು ನಿನ್ನ ಮುಂದೆ ಓಡಿಸಿ, ‘ಅವರನ್ನು ಸಂಹರಿಸಿರಿ,’ ಎಂದು ಆಜ್ಞಾಪಿಸುವರು.


ಆಗ ಇಸ್ರಾಯೇಲರು ಹಿವ್ವಿಯರಾದ ಅವರಿಗೆ, “ನೀವು ಒಂದು ವೇಳೆ ನಮ್ಮ ಹತ್ತಿರದಲ್ಲಿ ವಾಸಿಸುವವರು ಆಗಿರಬಹುದು. ನಾವು ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವುದು ಹೇಗೆ?” ಎಂದರು.


ಆದಕಾರಣ ನಮ್ಮ ಒಡೆಯನಾದ ನಿನ್ನ ಯೋಚನೆಯ ಪ್ರಕಾರವಾಗಿಯೂ, ನಮ್ಮ ದೇವರ ಆಜ್ಞೆಗೆ ಭಯಪಡುವವರ ಯೋಚನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ, ಅವರಿಂದ ಹುಟ್ಟಿದವರನ್ನೂ ಕಳುಹಿಸಿಬಿಡಲು, ಈಗಲೇ ನಮ್ಮ ದೇವರ ಮುಂದೆ ಒಡಂಬಡಿಕೆ ಮಾಡಿಕೊಂಡು, ದೇವರ ನಿಯಮದ ಪ್ರಕಾರ ನಡೆಯೋಣ.


ಯೆಹೋವ ದೇವರು ಅವರಿಗೆ ಆಜ್ಞಾಪಿಸಿದ ಜನಗಳನ್ನು ಅವರು ದಂಡಿಸದೆ ಹೋದರು.


ಆಗ ಇಸ್ರಾಯೇಲರು ಯೆಹೋವ ದೇವರಿಗೆ ಪ್ರಮಾಣಮಾಡಿ, “ನೀನು ಈ ಜನರನ್ನು ನಮ್ಮ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ, ನಾವು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆವು,” ಎಂದರು.


ಹೀಗಿರುವುದರಿಂದ ನೀವು ಈ ಹೊತ್ತು ತಿಳಿದುಕೊಳ್ಳತಕ್ಕದ್ದೇನೆಂದರೆ, ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡುವರು. ದೇವರು ಅವರನ್ನು ನಿಮ್ಮ ಮುಂದೆ ಸೋಲಿಸುವರು. ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನೀವು ಅವರನ್ನು ಸ್ವಾಧೀನಪಡಿಸಿಕೊಂಡು ಅವರನ್ನು ಬೇಗ ತೆಗೆದುಹಾಕುವಿರಿ.


ಆ ಶಿಕ್ಷೆಯನ್ನು ನಡೆಸುವಾಗ ತಪ್ಪು ಕಂಡವನೇ ಮೊದಲು ಕಲ್ಲು ಎಸೆಯಬೇಕು, ತರುವಾಯ ಜನರೆಲ್ಲರೂ ಎಸೆಯಲಿ.


ಯೆಹೋವ ದೇವರು ಅವರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿಕೊಟ್ಟರು. ಇವರು ಅವರನ್ನು ಹೊಡೆದು ದೊಡ್ಡ ಸೀದೋನ್, ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಕಣಿವೆಯವರೆಗೂ ಹಿಂದಟ್ಟಿ, ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ಎಲ್ಲರನ್ನು ಸಂಹರಿಸಿದರು.


ಆಗ ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣಗಳನ್ನು ತಿರುಗಿಕೊಡುತ್ತೇನೆ. ನನ್ನ ತಂದೆ ಸಮಾರ್ಯದಲ್ಲಿ ಮಾಡಿದ ಹಾಗೆಯೇ, ದಮಸ್ಕದಲ್ಲಿ ನೀನು ನಿನಗಾಗಿ ಬೀದಿಗಳನ್ನು ಮಾಡಿಸಬೇಕು,” ಎಂದನು. ಅದಕ್ಕೆ ಅಹಾಬನು, “ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳುಹಿಸಿಬಿಡುತ್ತೇನೆ,” ಎಂದನು. ಹೀಗೆಯೇ ಅಹಾಬನು ಬೆನ್ಹದದನ ಸಂಗಡ ಒಡಂಬಡಿಕೆಯನ್ನು ಮಾಡಿ, ಅವನನ್ನು ಕಳುಹಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು