ಧರ್ಮೋಪದೇಶಕಾಂಡ 7:22 - ಕನ್ನಡ ಸಮಕಾಲಿಕ ಅನುವಾದ22 ನಿಮ್ಮ ದೇವರಾದ ಯೆಹೋವ ದೇವರು ಆ ಜನಾಂಗಗಳನ್ನು ನಿಮ್ಮ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವರು. ನೀವು ಅವರನ್ನು ತ್ವರೆಯಾಗಿ ಸಂಹರಿಸಬಾರದು. ಹಾಗೆ ಮಾಡಿದರೆ, ಕಾಡುಮೃಗಗಳು ಹೆಚ್ಚಾಗಿ ನಿಮಗೆ ತೊಂದರೆಕೊಡುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪಸ್ವಲ್ಪವಾಗಿ ಹೊರಟು ಹೋಗುವಂತೆ ಮಾಡುವನು. ನೀವು ಅವರನ್ನು ಒಂದೇ ಬಾರಿಗೆ ನಿರ್ಮೂಲಮಾಡಬಾರದು. ಹಾಗೆ ಮಾಡಿದರೆ ಕಾಡುಮೃಗಗಳು ಹೆಚ್ಚಿ ಅವು ನಿಮಗೆ ತೊಂದರೆಯನ್ನು ಉಂಟುಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮಧ್ಯೆ ಇದ್ದಾರೆ. ಅವರು ಭಯಭಕ್ತಿಗೆ ಪಾತ್ರರಾದ ಮಹಾದೇವರು. ನಿಮ್ಮ ದೇವರಾದ ಸರ್ವೇಶ್ವರ ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪ ಸ್ವಲ್ಪವಾಗಿ ಹೊರಡಿಸುವರು. ನೀವು ಬಹು ಶೀಘ್ರವಾಗಿ ಅವರನ್ನು ನಿರ್ಮೂಲಮಾಡಕೂಡದು; ಮಾಡಿದರೆ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯನ್ನುಂಟುಮಾಡುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮ್ಮ ಎದುರಿನಿಂದ ಸ್ವಲ್ಪಸ್ವಲ್ಪವಾಗಿ ಹೊರಡಿಸುತ್ತಿರುವನು. ನೀವು ಬಹು ಶೀಘ್ರವಾಗಿ ಅವರನ್ನು ನಿರ್ಮೂಲಮಾಡಕೂಡದು; ಮಾಡಿದರೆ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯನ್ನುಂಟುಮಾಡಾವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳವರನ್ನು ಸ್ವಲ್ಪ ಸ್ವಲ್ಪವಾಗಿಯೇ ಅಲ್ಲಿಂದ ತೆಗೆದುಬಿಡುವನು. ನೀವು ಒಂದೇ ಸಮಯಕ್ಕೆ ಎಲ್ಲರನ್ನು ನಾಶಮಾಡಬಾರದು. ಹಾಗೆ ಮಾಡಿದ್ದಲ್ಲಿ ದೇಶದಲ್ಲೆಲ್ಲಾ ಕಾಡುಪ್ರಾಣಿಗಳು ತುಂಬಿಹೋಗುತ್ತವೆ. ಅಧ್ಯಾಯವನ್ನು ನೋಡಿ |