Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:25 - ಕನ್ನಡ ಸಮಕಾಲಿಕ ಅನುವಾದ

25 ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ಅವುಗಳ ಮೇಲಿರುವ ಬೆಳ್ಳಿಬಂಗಾರವನ್ನು ಆಶಿಸಿ ನೀವು ತೆಗೆದುಕೊಳ್ಳಬಾರದು. ಅದು ನಿಮಗೆ ಉರುಲಾದೀತು. ಏಕೆಂದರೆ ಅದು ನಿಮ್ಮ ದೇವರಾದ ಯೆಹೋವ ದೇವರಿಗೆ ಅಸಹ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಆ ಜನರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಬಯಸಬಾರದು. ಅದನ್ನು ತೆಗೆದುಕೊಂಡರೆ ಅದೇ ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾದುದು; ಅವರಿಂದ ಶಾಪಗ್ರಸ್ತವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಯೆಹೋವನಿಗೆ ಹೇಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಅವರ ದೇವರುಗಳ ಪ್ರತಿಮೆಗಳನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅವರ ವಿಗ್ರಹಗಳಲ್ಲಿರುವ ಬೆಳ್ಳಿಬಂಗಾರಗಳನ್ನು ನೀವು ತೆಗೆದುಕೊಳ್ಳಬೇಡಿ. ನೀವು ತೆಗೆದುಕೊಂಡರೆ ಅವು ನಿಮಗೆ ಉರುಲಾಗಿ ನಿಮ್ಮನ್ನೇ ನಾಶಮಾಡುತ್ತವೆ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ವಿಗ್ರಹಗಳನ್ನು ದ್ವೇಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:25
22 ತಿಳಿವುಗಳ ಹೋಲಿಕೆ  

ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು, ಅದನ್ನು ಬೆಂಕಿಯಿಂದ ಸುಟ್ಟು ಪುಡಿಯಾಗುವವರೆಗೆ ಅರೆದು ನೀರಿನ ಮೇಲೆ ಚೆಲ್ಲಿ, ಆ ನೀರನ್ನು ಇಸ್ರಾಯೇಲರು ಕುಡಿಯುವಂತೆ ಮಾಡಿದನು.


ಅಲ್ಲಿ ಫಿಲಿಷ್ಟಿಯರು ತಮ್ಮ ದೇವರುಗಳನ್ನು ಬಿಟ್ಟು ಹೋದುದರಿಂದ, ದಾವೀದನು ಅವುಗಳನ್ನು ಸುಟ್ಟುಹಾಕಬೇಕೆಂದು ಅಪ್ಪಣೆಮಾಡಿದನು.


ಯಾವುದೇ ಊನತೆ ಅಥವಾ ಅವಲಕ್ಷಣವುಳ್ಳ ಹೋರಿಯನ್ನಾಗಲಿ, ಕುರಿಯನ್ನಾಗಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸಬಾರದು. ಏಕೆಂದರೆ ಅದು ನಿಮ್ಮ ದೇವರಾದ ಯೆಹೋವ ದೇವರಿಗೆ ಅಸಹ್ಯವೇ.


ನಾನು ಕೊಳ್ಳೆಯಲ್ಲಿ ಒಂದು ಶಿನಾರ್ ದೇಶದ ಒಳ್ಳೆಯ ವಸ್ತ್ರವನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಒಂದು ಬಂಗಾರದ ಗಟ್ಟಿಯನ್ನು ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ, ಬೆಳ್ಳಿಯೂ ಅದರ ಕೆಳಗೆ ಇದೆ,” ಎಂದನು.


ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ, ಅವರ ಕಲ್ಲುಸ್ತಂಭಗಳನ್ನು ಒಡೆದು, ಅವರ ಆಶೇರ್ ಸ್ತಂಭಗಳನ್ನು ಬೆಂಕಿಯಿಂದ ಸುಟ್ಟು, ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ, ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ತೆಗೆದುಹಾಕಬೇಕು.


ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನೂ ನೀವು ಹೊಲಸ್ಸಾಗಿ ಭಾವಿಸಿ, ಆ ವಿಗ್ರಹಕ್ಕೆ, “ತೊಲಗಿಹೋಗು,” ಎಂದು ಹೇಳಿ, ಅದನ್ನು ಹೊಲೆಯ ಬಟ್ಟೆಯಂತೆ ಬಿಸಾಡಿ ಬಿಡುವಿರಿ.


ಆದರೆ ಇಸ್ರಾಯೇಲರು ಅರ್ಪಿತವಾದ ವಸ್ತುಗಳ ವಿಷಯದಲ್ಲಿ ಅಪನಂಬಿಕೆಯಿಂದ ನಡೆದುಕೊಂಡರು. ಯೆಹೂದ ಗೋತ್ರದ ಜೆರಹನ ಮೊಮ್ಮಗನೂ, ಜಿಮ್ರಿಯ ಮಗನೂ ಆದ ಕರ್ಮೀಯ ಮಗನಾದ ಆಕಾನನು ಅರ್ಪಿತವಾದ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡನು. ಇದರಿಂದ ಇಸ್ರಾಯೇಲರ ಮೇಲೆ ಯೆಹೋವ ದೇವರ ಕೋಪವು ಉರಿಯಿತು.


ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯು ಸೂಳೆಗಾರಿಕೆಯಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ದೇವ ಮಂದಿರದೊಳಗೆ ತರಬಾರದು. ಏಕೆಂದರೆ ಅವೆರಡನ್ನು ನಿನ್ನ ದೇವರಾದ ಯೆಹೋವ ದೇವರು ದ್ವೇಷಿಸುತ್ತಾರೆ.


ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು. ಅವರ ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ನೀವು ಅವರಿಗೆ ಹೀಗೆ ಮಾಡತಕ್ಕದ್ದು.


ಆಕೆಯ ಹಣೆಯ ಮೇಲೆ: “ಮಹಾ ಬಾಬಿಲೋನ್, ಜಾರ ಸ್ತ್ರೀಯರಿಗೂ ಭೂಮಿಯ ಎಲ್ಲಾ ಅಸಹ್ಯವಾದವುಗಳಿಗೂ ತಾಯಿ!” ಎಂದು ನಿಗೂಢ ಹೆಸರು ಬರೆದಿತ್ತು.


“ಮನುಷ್ಯರನ್ನೂ ಮೃಗಗಳನ್ನೂ ನಾಶಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ನಾಶಮಾಡುವೆನು.” “ಮನುಷ್ಯರನ್ನು ದೇಶದೊಳಗಿಂದ ಕಡಿದು ಬಿಡುವಾಗ ದುಷ್ಟರಿಗೆ ಉಳಿಯುವುದು ಕಸದರಾಶಿಯೇ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಒಪ್ಪಿಸುವ ಜನರನ್ನೆಲ್ಲಾ ನೀವು ಸಂಹರಿಸಬೇಕು. ಅವರ ಮೇಲೆ ನೀವು ಕಟಾಕ್ಷವಿಡಬಾರದು. ಅವರ ದೇವರುಗಳನ್ನು ಆರಾಧಿಸಬಾರದು. ಏಕೆಂದರೆ ಅವು ನಿಮಗೆ ಉರುಲಾಗುವವು.


ಆದರೆ ಮೋಶೆಯು ಫರೋಹನಿಗೆ, “ಹಾಗೆ ಮಾಡುವುದು ಯುಕ್ತವಲ್ಲ. ಏಕೆಂದರೆ ನಮ್ಮ ಯೆಹೋವ ದೇವರಾದ ದೇವರಿಗೆ ಯಜ್ಞವನ್ನರ್ಪಿಸುವುದು ಈಜಿಪ್ಟಿನವರಿಗೆ ಅಸಹ್ಯವಾಗಿರುವುದು. ಈಜಿಪ್ಟಿನವರಿಗೆ ಅಸಹ್ಯವಾಗಿರುವುದನ್ನು ಅವರ ಕಣ್ಣೆದುರಿಗೆ ಅರ್ಪಿಸಿದರೆ, ಅವರು ನಮ್ಮ ಮೇಲೆ ಕಲ್ಲೆಸೆದಾರು.


ನಿನ್ನ ನೆರೆಯವನ ಮನೆಯನ್ನು ಆಶಿಸಬೇಡ. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ.”


ಇದಲ್ಲದೆ ಆ ಊರಿನ ಎಲ್ಲಾ ಸಾಮಗ್ರಿಗಳನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ, ಆ ಪಟ್ಟಣವನ್ನೂ, ಅದರ ಎಲ್ಲಾ ವಸ್ತುವನ್ನೂ ಸಂಪೂರ್ಣವಾಗಿ ನಿಮ್ಮ ದೇವರಾದ ಯೆಹೋವ ದೇವರಿಗೆ ದಹನಬಲಿಯಾಗಿ ಸುಟ್ಟುಬಿಡಬೇಕು. ಅದು ಎಂದಿಗೂ ಹಾಳುದಿಬ್ಬವಾಗಿರಬೇಕು; ಇನ್ನು ಮೇಲೆ ಅದನ್ನು ಕಟ್ಟಬಾರದು; ಆ ಶಾಪಗ್ರಸ್ತ ವಸ್ತುಗಳಲ್ಲಿ ಏನನ್ನೂ ತೆಗೆದುಕೊಳ್ಳಬಾರದು.


ಇದಲ್ಲದೆ ಯೋಷೀಯನು ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದುಬಿಟ್ಟು, ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.


ಆದ್ದರಿಂದ ಅವನು ಆ ಉಡುಪುಗಳನ್ನು ಅಂದರೆ ಅದು ಉಣ್ಣೆ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ, ಹಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನ್ನಾಗಲಿ ಎಲ್ಲಿ ಬೂಜಿದೆಯೋ ಅದನ್ನು ಸುಡಬೇಕು. ಏಕೆಂದರೆ ಅದು ನಾಶಕರವಾದ ಬೂಜುರೋಗವಾಗಿದೆ. ಅದನ್ನು ಬೆಂಕಿಯಿಂದ ಸುಡಬೇಕು.


“ ‘ನೀವು ವಿಗ್ರಹಗಳ ಕಡೆಗೆ ತಿರುಗಿಕೊಳ್ಳಬೇಡಿರಿ. ಇಲ್ಲವೆ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


“ಯೆಹೋವ ದೇವರಿಗೆ ಅಸಹ್ಯವಾಗಿರುವ ವಿಗ್ರಹವನ್ನಾಗಲಿ, ಎರಕ ಹೊಯ್ದದ್ದನ್ನಾಗಲಿ ಮಾಡಿಕೊಂಡು, ಶಿಲ್ಪಿಯ ಕೈಯಿಂದ ಮಾಡಿಸಿ, ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ನೀವು ಶೂನ್ಯವೇ, ನಿಮ್ಮ ಕಾರ್ಯವು ವ್ಯರ್ಥವೇ. ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು