Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:26 - ಕನ್ನಡ ಸಮಕಾಲಿಕ ಅನುವಾದ

26 ನೀವು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿಮ್ಮ ಮನೆಗೆ ತೆಗೆದುಕೊಂಡು ಬರಬಾರದು. ಅದನ್ನು ಕೆಟ್ಟದಾಗಿ ಪರಿಗಣಿಸಿ ಮತ್ತು ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು, ಏಕೆಂದರೆ ಅದು ಶಾಪಗ್ರಸ್ತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಆದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನೀವು ಅಂಥ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ಅದು ಶಾಪಗ್ರಸ್ತವಾದ್ದರಿಂದ ಅಸಹ್ಯಪಟ್ಟು ಅದನ್ನು ಮುಟ್ಟಲೂಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅದು ಕೇವಲ ಯೆಹೋವನದಾಗುವದಕ್ಕೆ ನಾಶವಾಗತಕ್ಕದ್ದಾಗಿರುವದರಿಂದ ನೀವು ಅಂಥ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಂಥ ಅಸಹ್ಯ ವಿಗ್ರಹಗಳನ್ನು ನಿಮ್ಮ ಮನೆಯೊಳಗೆ ತರಲೂಬಾರದು, ಅವುಗಳನ್ನು ಬಯಸಲೂಬಾರದು; ನೀವು ಅವುಗಳನ್ನು ದ್ವೇಷಿಸಬೇಕು ಮತ್ತು ನಾಶಮಾಡಬೇಕು. ಇಲ್ಲವಾದರೆ ನೀವೂ ಅವುಗಳಂತೆಯೇ ನಾಶನಕ್ಕೆ ಗುರಿಯಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:26
15 ತಿಳಿವುಗಳ ಹೋಲಿಕೆ  

ಇದಲ್ಲದೆ ನೀವು ನಿಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕಾಪಾಡಿ,


ಎಫ್ರಾಯೀಮೇ, ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನಿಗೆ ಉತ್ತರಿಸಿದ್ದೇನೆ. ನಾನು ಅವನ ಬಗ್ಗೆ ಕಾಳಜಿ ವಹಿಸುತ್ತೇನೆ. ನಾನು ಹಸಿರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಬರುವುದು.”


“ಅವರು ಅಲ್ಲಿಗೆ ಹಿಂತಿರುಗಿ ಮತ್ತು ಅದರಲ್ಲಿರುವ ಎಲ್ಲಾ ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ತೆಗೆದುಹಾಕುತ್ತಾರೆ.


ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನೂ ನೀವು ಹೊಲಸ್ಸಾಗಿ ಭಾವಿಸಿ, ಆ ವಿಗ್ರಹಕ್ಕೆ, “ತೊಲಗಿಹೋಗು,” ಎಂದು ಹೇಳಿ, ಅದನ್ನು ಹೊಲೆಯ ಬಟ್ಟೆಯಂತೆ ಬಿಸಾಡಿ ಬಿಡುವಿರಿ.


ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳಲ್ಲಿ ಅಸಹ್ಯಪಡುವ ನೀನು ದೇವಾಲಯಗಳನ್ನು ದೋಚುತ್ತೀಯೋ?


“ ‘ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಇಸ್ರಾಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ, ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ, ಯೆಹೋವ ದೇವರಾದ ನಾನೇ ಉತ್ತರಕೊಡುವೆನು.


‘ನಾನು ಶಾಪವನ್ನು ಕಳುಹಿಸುತ್ತೇನೆ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರಿನಿಂದ ಸುಳ್ಳಾಗಿ ಆಣೆ ಇಡುವವನ ಮನೆಯಲ್ಲಿಯೂ ಪ್ರವೇಶಿಸಿ, ಅವನ ಮನೆಯಲ್ಲಿ ನಿಂತು, ಅದನ್ನೂ, ಅದರ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು.’ ”


ಆ ದಿನದಲ್ಲಿ ಮನುಷ್ಯರು ಪೂಜಿಸುವುದಕ್ಕೋಸ್ಕರ ಮಾಡಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಚಿನ್ನದ ವಿಗ್ರಹಗಳನ್ನೂ ಇಲಿ ಬಾವಲಿಗಳಿಗಾಗಿ ಬಿಸಾಡಿಬಿಡುವರು.


ಇದಲ್ಲದೆ ಆ ಊರಿನ ಎಲ್ಲಾ ಸಾಮಗ್ರಿಗಳನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ, ಆ ಪಟ್ಟಣವನ್ನೂ, ಅದರ ಎಲ್ಲಾ ವಸ್ತುವನ್ನೂ ಸಂಪೂರ್ಣವಾಗಿ ನಿಮ್ಮ ದೇವರಾದ ಯೆಹೋವ ದೇವರಿಗೆ ದಹನಬಲಿಯಾಗಿ ಸುಟ್ಟುಬಿಡಬೇಕು. ಅದು ಎಂದಿಗೂ ಹಾಳುದಿಬ್ಬವಾಗಿರಬೇಕು; ಇನ್ನು ಮೇಲೆ ಅದನ್ನು ಕಟ್ಟಬಾರದು; ಆ ಶಾಪಗ್ರಸ್ತ ವಸ್ತುಗಳಲ್ಲಿ ಏನನ್ನೂ ತೆಗೆದುಕೊಳ್ಳಬಾರದು.


ನಿಮ್ಮ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದಾಗ ಯೆಹೋವ ದೇವರು ತಮ್ಮ ಕೋಪವನ್ನು ಬಿಟ್ಟು, ತಿರುಗಿ ನಿಮಗೆ ದಯೆಯನ್ನು ತೋರಿಸಿ, ನಿಮ್ಮ ಮೇಲೆ ಕನಿಕರಪಟ್ಟು, ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವರು.


ನೀವು ಶೂನ್ಯವೇ, ನಿಮ್ಮ ಕಾರ್ಯವು ವ್ಯರ್ಥವೇ. ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು