Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:3 - ಕನ್ನಡ ಸಮಕಾಲಿಕ ಅನುವಾದ

3 ಅವರ ಸಂಗಡ ಮದುವೆ ಮಾಡಿಕೊಳ್ಳಬಾರದು. ನಿಮ್ಮ ಪುತ್ರಿಯರನ್ನು ಅವರ ಮಕ್ಕಳಿಗೆ ಕೊಡಬಾರದು. ನಿಮ್ಮ ಪುತ್ರರಿಗೆ ಅವರ ಪುತ್ರಿಯರನ್ನು ತೆಗೆದುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರೊಡನೆ ಬೀಗತನಮಾಡಬಾರದು; ಅವರ ಗಂಡು ಮಕ್ಕಳಿಗೆ ನಿಮ್ಮ ಹೆಣ್ಣುಮಕ್ಕಳನ್ನು ಕೊಡಲೂಬಾರದು ಮತ್ತು ಅವರ ಹೆಣ್ಣುಮಕ್ಕಳನ್ನು ನಿಮ್ಮ ಗಂಡುಮಕ್ಕಳಿಗೆ ತರಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರೊಡನೆ ಬೀಗತನ ಮಾಡಬಾರದು; ಅವರ ಮಕ್ಕಳಿಗೆ ಹೆಣ್ಣುಗಳನ್ನು ಕೊಡಲೂಬಾರದು, ಅವರಿಂದ ತರಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರೊಡನೆ ಬೀಗತನಮಾಡಬಾರದು; ಅವರ ಮಕ್ಕಳಿಗೆ ಹೆಣ್ಣುಗಳನ್ನು ಕೊಡಲೂಬಾರದು. ಅವರಿಂದ ತರಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರೊಳಗಿಂದ ಹೆಣ್ಣನ್ನು ತರಬೇಡಿ. ನಿಮ್ಮ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಅವರನ್ನು ಮದುವೆಯಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:3
14 ತಿಳಿವುಗಳ ಹೋಲಿಕೆ  

ಈ ಜನಾಂಗಗಳನ್ನು ಕುರಿತು ಯೆಹೋವ ದೇವರು ಇಸ್ರಾಯೇಲರಿಗೆ, “ನೀವು ಅವರ ಬಳಿಗೆ ಪ್ರವೇಶಿಸಬಾರದು. ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು,” ಎಂದು ಹೇಳಿದ್ದರು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು.


ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬಾರದು.


ಆಗ ಅವನ ತಂದೆಯೂ, ತಾಯಿಯೂ ಅವನಿಗೆ, “ನಿನಗೆ ಸುನ್ನತಿಯಾಗದ ಫಿಲಿಷ್ಟಿಯರಲ್ಲಿ ಹೆಂಡತಿಯನ್ನು ತೆಗೆದುಕೊಳ್ಳುವುದಕ್ಕೆ ನಿನ್ನ ಸಹೋದರರ ಪುತ್ರಿಯರಲ್ಲಿಯೂ, ನಮ್ಮ ಎಲ್ಲಾ ಜನರಲ್ಲಿಯೂ ಸ್ತ್ರೀ ಇಲ್ಲವೋ?” ಎಂದರು. ಆದರೆ ಸಂಸೋನನು ತನ್ನ ತಂದೆಗೆ, “ಅವಳನ್ನು ನನಗೆ ತೆಗೆದುಕೋ. ಏಕೆಂದರೆ ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ,” ಎಂದನು.


ಆದ್ದರಿಂದ ನೀವು ಪ್ರಬಲವಾಗಿ ದೇಶದ ಸಮೃದ್ಧಿಯನ್ನು ಅನುಭವಿಸಿ, ಅದನ್ನು ನಿಮ್ಮ ಮಕ್ಕಳಿಗೆ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಡುವ ಹಾಗೆ ನೀವು ನಿಮ್ಮ ಪುತ್ರಿಯರನ್ನು ಅವರ ಪುತ್ರರಿಗೆ ಮದುವೆಮಾಡಿಕೊಡಬೇಡಿರಿ. ಅವರ ಪುತ್ರಿಯರನ್ನು ನಿಮ್ಮ ಪುತ್ರರಿಗೆ ತೆಗೆದುಕೊಳ್ಳಬೇಡಿರಿ. ಅವರ ಸಮಾಧಾನವನ್ನೂ, ಅವರ ಮೇಲನ್ನೂ ಹುಡುಕಲೇ ಬೇಡಿರಿ,’ ಎಂದು ದೇವರೇ ನಮಗೆ ಹೇಳಿದಿರಲ್ಲವೇ?


ಆದಕಾರಣ ನಮ್ಮ ಒಡೆಯನಾದ ನಿನ್ನ ಯೋಚನೆಯ ಪ್ರಕಾರವಾಗಿಯೂ, ನಮ್ಮ ದೇವರ ಆಜ್ಞೆಗೆ ಭಯಪಡುವವರ ಯೋಚನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ, ಅವರಿಂದ ಹುಟ್ಟಿದವರನ್ನೂ ಕಳುಹಿಸಿಬಿಡಲು, ಈಗಲೇ ನಮ್ಮ ದೇವರ ಮುಂದೆ ಒಡಂಬಡಿಕೆ ಮಾಡಿಕೊಂಡು, ದೇವರ ನಿಯಮದ ಪ್ರಕಾರ ನಡೆಯೋಣ.


ನಾವು ನಮ್ಮ ಪುತ್ರಿಯರನ್ನು ಇತರ ಜನರಿಗೆ ಕೊಡುವುದಿಲ್ಲ, ನಮ್ಮ ಪುತ್ರರಿಗೆ ಅವರ ಪುತ್ರಿಯರನ್ನು ತೆಗೆದುಕೊಳ್ಳುವುದಿಲ್ಲ ಎಂದು ಆಣೆ ಮಾಡುತ್ತೇವೆ.


ನೆಬಾಟನ ಮಗ ಯಾರೊಬ್ಬಾಮನ ಪಾಪಗಳಲ್ಲಿ ನಡೆಯುವುದು ಅವನಿಗೆ ಅಲ್ಪವಾಗಿತ್ತು. ಅವನು ಸೀದೋನ್ಯರ ಅರಸನಾದ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡಬಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು