ಧರ್ಮೋಪದೇಶಕಾಂಡ 7:5 - ಕನ್ನಡ ಸಮಕಾಲಿಕ ಅನುವಾದ5 ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು. ಅವರ ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ನೀವು ಅವರಿಗೆ ಹೀಗೆ ಮಾಡತಕ್ಕದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದುದರಿಂದ ನೀವು ಹೀಗೆ ಮಾಡಬೇಕು, ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಪವಿತ್ರವಾದ ಕಲ್ಲಿನ ಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು, ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದುದರಿಂದ ನೀವು ಹೀಗೆ ಮಾಡಬೇಕು; ಅವರ ಯಜ್ಞವೇದಿಗಳನ್ನು ಕೆಡವಬೇಕು, ಅವರ ಪವಿತ್ರಶಿಲೆಗಳನ್ನು ಒಡೆಯಬೇಕು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಬಡಿದು ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆದದರಿಂದ ನೀವು ಹೀಗೆ ಮಾಡಬೇಕು - ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಕಲ್ಲಿನ ಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಆ ಜನಾಂಗಗಳ ಯಜ್ಞವೇದಿಕೆಗಳನ್ನೆಲ್ಲಾ ನೀವು ಕೆಡವಿಹಾಕಿ ನೆಲಸಮಮಾಡಬೇಕು. ಅವರ ಸ್ಮಾರಕ ಕಲ್ಲುಗಳನ್ನು ಒಡೆದು ಚೂರುಚೂರು ಮಾಡಬೇಕು. ಅವರ ಅಶೇರಸ್ತಂಭಗಳನ್ನು ಕತ್ತರಿಸಿಹಾಕಬೇಕು; ಅವುಗಳ ಪ್ರತಿಮೆಗಳನ್ನು ಸುಟ್ಟುಹಾಕಬೇಕು. ಅಧ್ಯಾಯವನ್ನು ನೋಡಿ |