ಧರ್ಮೋಪದೇಶಕಾಂಡ 7:8 - ಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದಲೂ, ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುವುದರಿಂದಲೂ, ಯೆಹೋವ ದೇವರು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿಮ್ಮನ್ನು ಗುಲಾಮತನದಿಂದಲೂ, ಈಜಿಪ್ಟಿನ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ನಿಮ್ಮನ್ನು ಪ್ರೀತಿಸಿ, ತಾನು ನಿಮ್ಮ ಪೂರ್ವಿಕರಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೂ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿ, ತಾವು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು, ಈಜಿಪ್ಟಿನ ರಾಜ ಫರೋಹನ ಕೈಕೆಳಗೆ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತಮ್ಮ ಭುಜಬಲ ಪ್ರಯೋಗಿಸಿ, ಆ ದೇಶದಿಂದ ಬರಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನು ನಿಮ್ಮನ್ನು ಪ್ರೀತಿಸಿ ತಾನು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿ ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಯೆಹೋವನು ತನ್ನ ಪರಾಕ್ರಮವನ್ನು ತೋರಿಸಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ನಿಮ್ಮನ್ನು ದಾಸತ್ವದಿಂದ ಬಿಡುಗಡೆ ಮಾಡಿದನು; ಫರೋಹನ ಹಿಡಿತದಿಂದ ನಿಮ್ಮನ್ನು ಬಿಡಿಸಿದನು; ಯಾಕೆಂದರೆ ಆತನು ನಿಮ್ಮನ್ನು ಪ್ರೀತಿಸುತ್ತಾನೆ; ನಿಮ್ಮ ಪೂರ್ವಿಕರಿಗೆ ತಾನು ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದಾನೆ. ಅಧ್ಯಾಯವನ್ನು ನೋಡಿ |
ನಿನ್ನ ದೇವರಾದ ಯೆಹೋವ ದೇವರಿಗೋಸ್ಕರ ಅರಸನಾಗಿರುವಂತೆ ತಮ್ಮ ಸಿಂಹಾಸನದ ಮೇಲೆ ನಿನ್ನನ್ನು ಕುಳ್ಳಿರಿಸಿದ ನಿನ್ನಲ್ಲಿ ಹರ್ಷಗೊಂಡ ನಿನ್ನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಮಾಡಿದ್ದರಿಂದ ಅವರನ್ನು ಯುಗಯುಗಕ್ಕೂ ಸ್ಥಿರಗೊಳಿಸಬೇಕೆಂದಿದ್ದಾರೆ. ನ್ಯಾಯವನ್ನೂ, ನೀತಿಯನ್ನೂ ನಡೆಸಲು ಅವರು ನಿನ್ನನ್ನು ಅರಸನನ್ನಾಗಿ ಮಾಡಿದರು,” ಎಂದಳು.