Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:9 - ಕನ್ನಡ ಸಮಕಾಲಿಕ ಅನುವಾದ

9 ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರು ಒಬ್ಬರೇ ದೇವರು; ಅವರೇ ನಂಬಿಗಸ್ತರಾದ ದೇವರು; ತಮ್ಮನ್ನು ಪ್ರೀತಿಸಿ, ತಮ್ಮ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಅವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಸಾವಿರ ತಲೆಗಳವರೆಗೂ ತೋರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ವಾಗ್ದಾನವನ್ನೂ ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:9
41 ತಿಳಿವುಗಳ ಹೋಲಿಕೆ  

ನಾವು ನಮ್ಮ ನಿರೀಕ್ಷೆಯ ಅರಿಕೆಯನ್ನು ಚಂಚಲರಾಗದೆ ಬಿಗಿಯಾಗಿ ಹಿಡಿಯೋಣ. ಏಕೆಂದರೆ ವಾಗ್ದಾನ ಮಾಡಿದವರು ನಂಬಿಗಸ್ತರು.


ನಾವು ಅಪನಂಬಿಗಸ್ತರಾಗಿದ್ದರೂ ಅವರು ನಂಬಿಗಸ್ತರಾಗಿಯೇ ಉಳಿದಿರುವರು. ಅವರು ತಮ್ಮ ಸ್ವಭಾವವನ್ನು ತಾವೇ ನಿರಾಕರಿಸಲಾರರು.


ಆದರೆ ಕರ್ತ ಯೇಸು ನಂಬಿಗಸ್ತರು, ಅವರು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೆಡುಕನಿಂದ ತಪ್ಪಿಸುವರು.


ನಾನು ನನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥಿಸಿ, ಅರಿಕೆಮಾಡಿದೆನು: “ಕರ್ತನೇ, ಮಹೋನ್ನತ ಮತ್ತು ಅದ್ಭುತ ದೇವರೇ, ನಿಮ್ಮನ್ನು ಪ್ರೀತಿಮಾಡಿ, ನಿಮ್ಮ ಆಜ್ಞೆಗಳನ್ನು ಕೈಗೊಂಡು ನಡೆಯುವವರಿಗೆ ಒಡಂಬಡಿಕೆಯ ಪ್ರೀತಿಯನ್ನೂ ಇಟ್ಟು ನೆರವೇರಿಸುವವರೇ,


ತಮ್ಮ ಪುತ್ರರೂ ನಮ್ಮ ಕರ್ತ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ಪ್ರಾಮಾಣಿಕರು.


ನಾನು ನನ್ನ ಪ್ರಾರ್ಥನೆಯಲ್ಲಿ: “ಪರಲೋಕ ದೇವರಾದ ಯೆಹೋವ ದೇವರೇ, ನೀವು ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿದ್ದೀರಿ. ನಿಮ್ಮನ್ನು ಪ್ರೀತಿಸಿ ನಿಮ್ಮ ಆಜ್ಞೆಗಳಿಗೆ ವಿಧೇಯರಾಗಿರುವವರೊಂದಿಗೆ, ನಿಮ್ಮ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವವರೇ, ಭಯಭಕ್ತಿಗೆ ಪಾತ್ರರಾದ ದೇವರೇ,


ನಿಮ್ಮನ್ನು ಕರೆಯುವ ದೇವರು ನಂಬಿಗಸ್ತರು, ಅವರೇ ಅದನ್ನು ಸಾಧಿಸುವವರೂ ಆಗಿದ್ದಾರೆ.


ದೇವರನ್ನು ಪ್ರೀತಿಸಿ ದೇವರ ಉದ್ದೇಶಕ್ಕೆ ಅನುಸಾರವಾಗಿ ಕರೆಹೊಂದಿದವರಿಗೆ ಸಕಲವನ್ನು ಒಳ್ಳೆಯದಕ್ಕಾಗಿಯೇ ದೇವರು ಮಾಡುವರು, ಎಂದು ನಮಗೆ ಗೊತ್ತಿದೆ.


ಆದರೆ ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ.


ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.


ಮನಃಪೂರ್ವಕವಾಗಿ ತಿರಸ್ಕೃತನಾದವನೂ ಜನಾಂಗಕ್ಕೆ ಅಸಹ್ಯನೂ, ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೋವ ದೇವರ ನಂಬಿಗಸ್ತಿಕೆಯನ್ನೂ, ನೀನು ಆಯ್ದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ಕಂಡು ಅರಸರು ಎದ್ದು ನಿಲ್ಲುತ್ತಾರೆ, ಅಧಿಪತಿಗಳು ಸಹ ಆರಾಧಿಸುವರು.”


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ನಿಶ್ಚಯವಾಗಿ, ದೇವರು ಹೇಗೆ ಪ್ರಾಮಾಣಿಕತೆಗೆ ಯೋಗ್ಯರೋ, ಹಾಗೆಯೇ ನಾವು ನಿಮಗೆ ಕೊಟ್ಟ ಸಂದೇಶವೂ, ಒಮ್ಮೆ “ಹೌದು,” ಒಮ್ಮೆ “ಅಲ್ಲ” ಎಂದಾಗಿರುವುದಿಲ್ಲ.


ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ.


ಇದಲ್ಲದೆ ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನು. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುವೆನು.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ಬದಲಾಗದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಸುಳ್ಳಾಡುವವರಲ್ಲ. ಇದರಿಂದಾಗಿ, ದೇವರ ಆಶ್ರಯವನ್ನು ಹೊಂದುವುದಕ್ಕೆ ಓಡಿಬಂದಿರುವ ನಾವು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಳ್ಳಲು ಬಲವಾದ ಉತ್ತೇಜನ ಉಂಟಾಯಿತು.


ಯೆಹೋವ ದೇವರೇ, ನಿಮ್ಮ ನಿಯಮಗಳು ನೀತಿಯುಳ್ಳವುಗಳು; ನಿಮ್ಮ ನಂಬಿಗಸ್ತಿಕೆಯಿಂದಲೇ ನೀವು ನನ್ನನ್ನು ಕಷ್ಟಪಡಿಸಿದ್ದೀರಿ ಎಂದು ನನಗೆ ಗೊತ್ತಿದೆ.


ನಂಬಿಕೆಯಿಂದಲೇ ಸಾರಳು ಸಹ ವಾಗ್ದಾನ ಮಾಡಿದ ದೇವರು ನಂಬಿಗಸ್ತರು ಎಂದೆಣಿಸಿ ತಾನು ಪ್ರಾಯಮೀರಿದವಳಾಗಿದ್ದರೂ ಗರ್ಭವತಿಯಾಗುವುದಕ್ಕೆ ಸಾಮರ್ಥ್ಯ ಹೊಂದಿ, ಒಂದು ಮಗುವನ್ನು ಹೆತ್ತಳು.


ಯೆಹೋವ ದೇವರಲ್ಲದೆ ಮತ್ತೊಬ್ಬರಿಲ್ಲ. ಅವರೇ ದೇವರೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದನ್ನೆಲ್ಲಾ ನಿಮಗೆ ಮಾತ್ರ ತೋರಿಸಲಾಗಿದೆ.


ಸುಳ್ಳಾಡದ ದೇವರು, ಕಾಲಾರಂಭಕ್ಕೆ ಮುಂಚೆಯೇ ನಿತ್ಯಜೀವದ ನಿರೀಕ್ಷೆಯನ್ನು ವಾಗ್ದಾನಮಾಡಿದ್ದಾರೆ.


ಅವರೆಲ್ಲರೂ ಒಂದೇ ಆತ್ಮಿಕವಾದ ಆಹಾರವನ್ನು ಉಂಡರು.


ಆದರೆ ದೇವರನ್ನು ಪ್ರೀತಿಸುವವರನ್ನು ದೇವರು ತಿಳಿದುಕೊಂಡಿರುತ್ತಾರೆ.


ದೇವರು ತಮ್ಮ ಒಡಂಬಡಿಕೆಯನ್ನೂ, ಸಾವಿರ ತಲಾಂತರಗಳಿಗೆ ಆಜ್ಞಾಪಿಸಿದ ತಮ್ಮ ಮಾತನ್ನೂ,


ಅವು ಪ್ರತಿ ಮುಂಜಾನೆಯೂ ಹೊಸದಾಗಿರುವುವು. ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.


ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದ ದೇವರೇ ಎಂದೆಂದಿಗೂ ನಂಬಿಗಸ್ತರು.


ಆಗ ನಾನು ನನಗೂ ನಿಮಗೂ ಪ್ರತಿಯೊಂದು ಜೀವಿಗಳಿಗೂ ಮಧ್ಯೆಯಿರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಎಲ್ಲಾ ಜೀವಿಗಳನ್ನು ನಾಶಮಾಡುವ ಪ್ರಳಯವಾಗುವುದೇ ಇಲ್ಲ.


ಇಗೋ, ನಾನು ನಿನ್ನ ಸಂಗಡ ಇದ್ದು, ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಈ ದೇಶಕ್ಕೆ ನಿನ್ನನ್ನು ತಿರುಗಿ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವವರೆಗೆ ನಿನ್ನನ್ನು ಬಿಡುವುದಿಲ್ಲ,” ಎಂದರು.


ಯೆಹೋವ ದೇವರು ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು, ತಿರುಗಿಬೀಳುವುದನ್ನು ಮತ್ತು ಪಾಪವನ್ನು ಕ್ಷಮಿಸುವಾತನು, ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನೂ ಎಂದು ನೀವು ಹೇಳಿದ್ದೀರಲ್ಲಾ?


ಹೀಗಿರುವುದರಿಂದ ಮೇಲಿನ ಆಕಾಶದಲ್ಲಿಯೂ, ಕೆಳಗಿನ ಭೂಮಿಯಲ್ಲಿಯೂ ಯೆಹೋವ ದೇವರೇ ದೇವರೆಂದೂ ಮತ್ತೊಬ್ಬರಿಲ್ಲವೆಂಬುದನ್ನೂ ನೀವು ಈಗ ಗ್ರಹಿಸಿಕೊಂಡು ಮನಸ್ಸಿಗೆ ತಂದುಕೊಳ್ಳಿರಿ.


ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು. ಅವರ ಮಾರ್ಗಗಳೆಲ್ಲಾ ನ್ಯಾಯವಾಗಿವೆ. ಅವರು ಯಾವ ತಪ್ಪನ್ನೂ ಮಾಡದ ನಂಬಿಗಸ್ತ ದೇವರು, ನೀತಿವಂತರೂ ಯಥಾರ್ಥರೂ ಆದ ದೇವರು.


ಯೆಹೋವ ದೇವರ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು, “ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ, ನಿಮ್ಮ ತಂದೆಗಳಿಗೆ ಆಣೆ ಇಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.


ಹೀಗೆ ಪ್ರಾರ್ಥಿಸಿದನು: “ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಮೇಲಿರುವ ಆಕಾಶದಲ್ಲಾದರೂ, ಕೆಳಗಿರುವ ಭೂಮಿಯಲ್ಲಾದರೂ ನಿಮ್ಮ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣ ಹೃದಯದಿಂದ ನಿಮಗೆ ನಡೆದುಕೊಳ್ಳುವಂಥ ಸೇವಕರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸುವವರೇ,


ಹೀಗೆ ಪ್ರಾರ್ಥಿಸಿದನು. “ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಆಕಾಶದಲ್ಲಾದರೂ, ಭೂಮಿಯಲ್ಲಾದರೂ ನಿಮ್ಮ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣ ಹೃದಯದಿಂದ ನಿಮಗೆ ನಡೆದುಕೊಳ್ಳುವಂಥ ಸೇವಕರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸಿದ್ದೀರಿ.


ದೇವರ ಒಡಂಬಡಿಕೆಯನ್ನು ಕೈಕೊಂಡು, ಅವರ ಸೂತ್ರಗಳನ್ನು ಪಾಲಿಸಲು ನೆನಸುವವರಿಗೂ ಅವರ ನೀತಿಯು ನೆಲೆಸಿರುವುದು.


ದೇವರು ತಮ್ಮ ಒಡಂಬಡಿಕೆಯನ್ನೂ, ಸಾವಿರ ತಲಾಂತರಗಳಿಗೆ ಆಜ್ಞಾಪಿಸಿದ ತಮ್ಮ ಮಾತನ್ನೂ,


ನೀವು ಸಾವಿರಾರು ತಲೆಗಳವರೆಗೆ ಪ್ರೀತಿ, ದಯೆತೋರಿಸಿ, ತಂದೆಗಳ ಅಕ್ರಮಗಳನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸುರಿಸುವವರಾಗಿದ್ದೀರಿ. ಮಹತ್ವವುಳ್ಳವರೂ, ಪರಾಕ್ರಮವುಳ್ಳ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಎಂಬುದು ನಿಮ್ಮ ಹೆಸರು.


“ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.


“ಯೆಹೋವ ದೇವರೇ, ಹೀಗೆಯೇ ನಿಮ್ಮ ಶತ್ರುಗಳೆಲ್ಲರೂ ನಾಶವಾಗಲಿ. ಆದರೆ ಅವರನ್ನು ಪ್ರೀತಿ ಮಾಡುವವರು ಪರಾಕ್ರಮದಿಂದ ಹೊರಡುವ ಸೂರ್ಯನ ಹಾಗೆಯೇ ಇರಲಿ.” ಅನಂತರ ದೇಶವು ನಲವತ್ತು ವರ್ಷ ವಿಶ್ರಾಂತಿಯಲ್ಲಿತ್ತು.


“ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.


ನಿಮ್ಮ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿಮ್ಮ ನ್ಯಾಯತೀರ್ಪುಗಳು ಮಹಾ ಅಗಾಧವೇ. ಯೆಹೋವ ದೇವರೇ, ನೀವು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು