Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:10 - ಕನ್ನಡ ಸಮಕಾಲಿಕ ಅನುವಾದ

10 ನೀವು ತಿಂದು ತೃಪ್ತಿ ಹೊಂದಿದಾಗ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಒಳ್ಳೆಯ ದೇಶದಲ್ಲಿ ಅವರನ್ನು ಸ್ತುತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ಹೊಟ್ಟೆ ತುಂಬಾ ಊಟಮಾಡಿ ಸುಖದಿಂದಿರುವಾಗ ನಿಮ್ಮ ದೇವರಾದ ಯೆಹೋವನು ನಿಮಗೆ ಉತ್ತಮ ದೇಶವನ್ನು ಕೊಟ್ಟಿದ್ದಕ್ಕಾಗಿ ಆತನನ್ನು ಸ್ತುತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀವು ಹೊಟ್ಟೆತುಂಬ ಉಂಡು ಸುಖದಿಂದಿರುವಾಗ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಇಂಥ ಉತ್ತಮ ನಾಡನ್ನು ಕೊಟ್ಟದ್ದಕ್ಕಾಗಿ ಅವರನ್ನು ಸ್ತುತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀವು ಹೊಟ್ಟೆತುಂಬಾ ಉಂಡು ಸುಖದಿಂದಿರುವಾಗ ನಿಮ್ಮ ದೇವರಾದ ಯೆಹೋವನು ನಿಮಗೆ ಉತ್ತಮ ದೇಶವನ್ನು ಕೊಟ್ಟದ್ದಕ್ಕಾಗಿ ಆತನನ್ನು ಸ್ತುತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿಮಗೆ ಬೇಕಾದಷ್ಟು ಆಹಾರ ಇರುವುದು. ಆಗ ನೀವು ನಿಮಗೆ ಉತ್ತಮ ದೇಶವನ್ನು ಕೊಟ್ಟಿರುವ ಯೆಹೋವ ದೇವರನ್ನು ಸ್ತುತಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:10
14 ತಿಳಿವುಗಳ ಹೋಲಿಕೆ  

ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು; ಅವರ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.


ಒಬ್ಬ ಒಂದು ದಿನವನ್ನು ವಿಶೇಷವೆಂದು ಎಣಿಸುವುದಾದರೆ ಅವನು ಅದನ್ನು ಕರ್ತನಿಗಾಗಿಯೇ ಮಾಡಲಿ. ಮಾಂಸಾಹಾರಿಯು ದೇವರಿಗೆ ಕೃತಜ್ಞತೆಯನ್ನು ಮಾಡಿ ಊಟಮಾಡುವುದಾದರೆ ಅವನು ಅದನ್ನು ಮಾಡುವುದು ಕರ್ತನಿಗಾಗಿಯೇ. ಸಸ್ಯಾಹಾರಿಯು ಕರ್ತನಿಗಾಗಿಯೇ ತಿನ್ನದೆ ಕೃತಜ್ಞತೆ ಸಲ್ಲಿಸುತ್ತಾನೆ.


ನಿನ್ನ ಆಸ್ತಿಯಿಂದಲೂ ನಿನ್ನ ಎಲ್ಲಾ ಬೆಳೆಯ ಪ್ರಥಮ ಫಲದಿಂದಲೂ ಯೆಹೋವ ದೇವರನ್ನು ಸನ್ಮಾನಿಸು.


“ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವುದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಏಕೆಂದರೆ ಸಮಸ್ತವೂ ನಿಮ್ಮಿಂದಲೇ.


ಜನಸಮೂಹವು ಹುಲ್ಲಿನ ಮೇಲೆ ಕುಳಿತುಕೊಳ್ಳಬೇಕೆಂದು ಯೇಸು ಅಪ್ಪಣೆಕೊಟ್ಟು, ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನಸಮೂಹಕ್ಕೆ ಕೊಟ್ಟರು.


ಆದ್ದರಿಂದ ನೀವು ಊಟಮಾಡಿದರೂ ಪಾನೀಯ ಸೇವಿಸಿದರೂ ಯಾವುದನ್ನೇ ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ಬೇರೆ ದೋಣಿಗಳು ತಿಬೇರಿಯದಿಂದ ಹೊರಟು, ಕರ್ತ ಯೇಸು ಕೃತಜ್ಞತೆ ಸಲ್ಲಿಸಿ ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.


ಎಲ್ಲವುಗಳಿಗಾಗಿ ಕೃತಜ್ಞತೆ ಸಲ್ಲಿಸಿರಿ. ಏಕೆಂದರೆ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.


ಆ ದೇಶದಲ್ಲಿ ನಿಮಗೆ ಆಹಾರಕ್ಕೆ ಕೊರತೆ ಇರುವುದಿಲ್ಲ. ಅಲ್ಲಿ ಯಾವುದರ ಕೊರತೆ ನಿಮಗೆ ಆಗದು. ಅದರ ಕಲ್ಲುಗಳಲ್ಲಿ ಕಬ್ಬಿಣವನ್ನೂ, ಅದರ ಬೆಟ್ಟಗಳಲ್ಲಿ ತಾಮ್ರದ ಗಣಿಗಳನ್ನೂ ಅಗೆಯಬಹುದು.


ನಾನು ಅವರ ಪಿತೃಗಳಿಗೆ ಪ್ರಮಾಣ ಮಾಡಿದಂಥ, ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ, ಅವರು ತಿಂದು ತೃಪ್ತರಾಗಿ ಕೊಬ್ಬಿದವರಾದಾಗ, ಅವರು ಅನ್ಯದೇವರುಗಳ ಕಡೆಗೆ ತಿರುಗಿಕೊಂಡು, ಅವುಗಳನ್ನು ಪೂಜಿಸಿ, ನನಗೆ ಕೋಪವನ್ನೆಬ್ಬಿಸಿ, ನನ್ನ ಒಡಂಬಡಿಕೆಯನ್ನು ಮೀರುವರು.


ನನ್ನ ಪ್ರಿಯನ ದ್ರಾಕ್ಷಿತೋಟದ ವಿಷಯವಾದ ಹಾಡನ್ನು ನನ್ನ ಪ್ರಾಣ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದ ಬಳಿಯಲ್ಲಿ ನನ್ನ ಅತಿ ಪ್ರಿಯನಿಗೆ ದ್ರಾಕ್ಷಿ ತೋಟವಿದೆ.


ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು, ನಿಮ್ಮನ್ನು ಅದ್ಭುತವಾಗಿ ನಡೆಸಿದ ನಿಮ್ಮ ದೇವರಾದ ಯೆಹೋವ ದೇವರ ಹೆಸರನ್ನು ಸ್ತುತಿಸುವಿರಿ. ನನ್ನ ಜನರು ಎಂದೆಂದಿಗೂ ನಾಚಿಕೆಪಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು