Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:12 - ಕನ್ನಡ ಸಮಕಾಲಿಕ ಅನುವಾದ

12 ನೀವು ತಿಂದು ತೃಪ್ತಿಹೊಂದಿ, ಒಳ್ಳೆಯ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವು ಹೊಟ್ಟೆತುಂಬಾ ಊಟಮಾಡಿ, ಸುಖವಾಗಿದ್ದು ಒಳ್ಳೇ ಮನೆಗಳನ್ನು ಕಟ್ಟಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀವು ಹೊಟ್ಟೆ ತುಂಬ ಉಂಡು, ಸುಖವಾಗಿದ್ದು, ಒಳ್ಳೊಳ್ಳೆಯ ಮನೆಗಳನ್ನು ಕಟ್ಟಿಸಿಕೊಂಡು, ಅವುಗಳಲ್ಲಿ ವಾಸವಾಗಿರುವ ಕಾಲದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವು ಹೊಟ್ಟೆತುಂಬಾ ಉಂಡು ಸುಖವಾಗಿದ್ದು ಒಳ್ಳೇ ಮನೆಗಳನ್ನು ಕಟ್ಟಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ನಿಮಗೆ ಸಮೃದ್ಧಿಯಾಗಿ ಆಹಾರವಿರುವುದು. ನೀವು ಒಳ್ಳೆಯ ಮನೆಗಳನ್ನು ಕಟ್ಟಿಕೊಂಡು ವಾಸಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:12
13 ತಿಳಿವುಗಳ ಹೋಲಿಕೆ  

ನಾನು ಐಶ್ವರ್ಯವಂತನಾದರೆ ನಿನ್ನನ್ನು ನಿರಾಕರಿಸಿ, ‘ಯೆಹೋವ ದೇವರು ಯಾರು?’ ಎಂದು ಹೇಳೇನು. ನಾನು ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿಮ್ಮ ಹೆಸರಿಗೆ ಅಪಕೀರ್ತಿ ತಂದೇನು.


ಯೆಶುರೂನು ಎಂಬ ಇಸ್ರಾಯೇಲರು ಕೊಬ್ಬಿ ಹೋದರು. ಅವರು ಹೊಟ್ಟೆ ತುಂಬ ಚೆನ್ನಾಗಿ ತಿಂದು ದಪ್ಪವಾದರು. ಅವರು ತಮ್ಮನ್ನು ಸೃಷ್ಟಿಮಾಡಿದ ದೇವರನ್ನು ಬಿಟ್ಟು, ತಮ್ಮ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದರು.


ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸಂತೋಷದಿಂದಲೂ ಹರ್ಷದಿಂದಲೂ ಸೇವೆಮಾಡದೆ ಹೋದಿರಿ.


“ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಜನರೆಲ್ಲರೂ ತಿನ್ನುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.


“ಈ ಆಲಯ ಹಾಳುಬಿದ್ದಿರುವಾಗ, ನೀವು, ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವುದಕ್ಕೆ ಇದು ನಿಮಗೆ ಕಾಲವೋ?”


ಆದಕಾರಣ ನೀವು ಬಡವನನ್ನು ತುಳಿದು ಅವರ ಧಾನ್ಯಕ್ಕೆ ತೆರಿಗೆ ವಿಧಿಸುತ್ತೀರಿ. ಆದ್ದರಿಂದ ನೀವು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಿ. ಆದರೆ ನೀವು ಅವುಗಳಲ್ಲಿ ವಾಸ ಮಾಡದೇ ಇರುವಿರಿ. ರಮ್ಯವಾದ ದ್ರಾಕ್ಷಿತೋಟಗಳನ್ನು ನೆಟ್ಟಿರಲ್ಲಾ, ಆದರೆ ಅವುಗಳ ದ್ರಾಕ್ಷಾರಸವನ್ನು ಕುಡಿಯಲಾರಿರಿ.


ನಾನು ಮಹಾ ಯೋಜನೆಗಳನ್ನು ನಡೆಸಿದೆನು: ನಾನು ನನಗಾಗಿ ಮನೆಗಳನ್ನು ಕಟ್ಟಿಸಿಕೊಂಡೆನು. ನಾನು ದ್ರಾಕ್ಷಿತೋಟಗಳನ್ನು ನೆಟ್ಟೆನು.


ನಾನು ಅವರ ಪಿತೃಗಳಿಗೆ ಪ್ರಮಾಣ ಮಾಡಿದಂಥ, ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ, ಅವರು ತಿಂದು ತೃಪ್ತರಾಗಿ ಕೊಬ್ಬಿದವರಾದಾಗ, ಅವರು ಅನ್ಯದೇವರುಗಳ ಕಡೆಗೆ ತಿರುಗಿಕೊಂಡು, ಅವುಗಳನ್ನು ಪೂಜಿಸಿ, ನನಗೆ ಕೋಪವನ್ನೆಬ್ಬಿಸಿ, ನನ್ನ ಒಡಂಬಡಿಕೆಯನ್ನು ಮೀರುವರು.


ಅವರು, ‘ಇತ್ತೀಚಿಗೆ ನಮ್ಮ ಮನೆಗಳು ನಿರ್ಮಾಣವಾಗಿಲ್ಲವೇ? ಈ ಪಟ್ಟಣವು ಪಾತ್ರೆ, ಮತ್ತು ನಾವು ಅದರಲ್ಲಿರುವ ಮಾಂಸ,’ ಎನ್ನುತ್ತಾರೆ.


ನಿಮ್ಮ ಪಶು ಕುರಿಗಳು ಹೆಚ್ಚಿದಾಗಲೂ, ಬೆಳ್ಳಿಬಂಗಾರ ನಿಮಗೆ ಹೆಚ್ಚಿದಾಗಲೂ, ನಿಮಗಿರುವ ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ,


ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಾಕೋಬರಿಗೆ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಸೇರಿಸಿ, ನೀವು ಕಟ್ಟಿದ ದೊಡ್ಡದಾದ ಒಳ್ಳೆಯ ಪಟ್ಟಣಗಳನ್ನೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು