ಧರ್ಮೋಪದೇಶಕಾಂಡ 8:15 - ಕನ್ನಡ ಸಮಕಾಲಿಕ ಅನುವಾದ15 ದೇವರು ಅಗ್ನಿಸರ್ಪಗಳೂ, ಚೇಳುಗಳೂ ತುಂಬಿದ ಮತ್ತು ನೀರಿಲ್ಲದ ಆ ಭಯಂಕರವಾದ ವಿಶಾಲ ಮರುಭೂಮಿಯಲ್ಲಿ ನಿಮ್ಮನ್ನು ನಡೆಸಿ, ಗಟ್ಟಿಯಾದ ಬಂಡೆಯೊಳಗಿಂದ ನಿಮಗೆ ನೀರು ಬರಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆತನು ಐಗುಪ್ತ ದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ವಿಷಸರ್ಪಗಳೂ ಮತ್ತು ಚೇಳುಗಳೂ ಇದ್ದ ಆ ಘೋರವಾದ ಮಹಾ ಅರಣ್ಯವನ್ನೂ, ನೀರು ಬತ್ತಿಹೋದ ಭೂಮಿಗಳನ್ನೂ ದಾಟಿಸಿದ್ದನ್ನು ಮತ್ತು ಗಟ್ಟಿಯಾದ ಬಂಡೆಯೊಳಗಿಂದ ನೀರು ಹೊರಡಿಸಿದ್ದನ್ನು ಮರೆಯಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15-16 ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ ನಿಮಗೆ ಒಳಿತನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ಈಜಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದರು. ವಿಷಸರ್ಪಗಳೂ ಚೇಳುಗಳೂ ಇದ್ದ ಆ ಘೋರವಾದ ಮಹಾಮರುಭೂಮಿಯನ್ನೂ ನೀರು ಬತ್ತಿಹೋಗಿದ್ದ ಭೂಮಿಗಳನ್ನೂ ದಾಟಿಸಿದರು; ಗಟ್ಟಿಯಾದ ಬಂಡೆಯೊಳಗಿಂದ ನೀರನ್ನು ಹೊರಡಿಸಿಕೊಟ್ಟರು. ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದರು. ಅಂಥವರನ್ನು ಮರೆತು ಮನಸ್ಸಿನಲ್ಲೇ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15-16 ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದನಂತರ ನಿಮಗೆ ಮೇಲನ್ನುಂಟುಮಾಡಬೇಕೆಂಬ ಉದ್ದೇಶದಿಂದ ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ ವಿಷಸರ್ಪಗಳೂ ಚೇಳುಗಳೂ ಇದ್ದ ಆ ಘೋರವಾದ ಮಹಾರಣ್ಯವನ್ನೂ ನೀರು ಬತ್ತಿಹೋದ ಭೂವಿುಗಳನ್ನೂ ದಾಟಿಸಿ ಗಟ್ಟಿಯಾದ ಬಂಡೆಯೊಳಗಿಂದ ನೀರನ್ನು ಹೊರಡಿಸಿಕೊಟ್ಟು ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು ಮನಸ್ಸಿನೊಳಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆತನು ನಿಮ್ಮನ್ನು ಭಯಂಕರವಾದ ಆ ಅಡವಿಯಲ್ಲಿ ಮೊದಲು ನಡೆಸಿದನು. ಅಲ್ಲಿ ವಿಷದ ಹಾವುಗಳು, ಚೇಳುಗಳು ಇದ್ದವು. ನೆಲವು ಕಾದಿದ್ದು ಎಲ್ಲಿಯೂ ನೀರು ಸಿಗುತ್ತಿರಲಿಲ್ಲ. ಆದರೆ ನಿಮ್ಮ ದೇವರಾದ ಯೆಹೋವನು ಬಂಡೆಯೊಳಗಿಂದ ನೀರನ್ನು ನಿಮಗೆ ಒದಗಿಸಿದನು. ಅಧ್ಯಾಯವನ್ನು ನೋಡಿ |