ಧರ್ಮೋಪದೇಶಕಾಂಡ 8:19 - ಕನ್ನಡ ಸಮಕಾಲಿಕ ಅನುವಾದ19 ಒಂದು ವೇಳೆ ನೀವು ನಿಮ್ಮ ಯೆಹೋವ ದೇವರನ್ನು ಮರೆತು, ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ, ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧವಾಗಿ ಈ ಹೊತ್ತು ಸಾಕ್ಷಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ ನೀವು ತಪ್ಪದೆ ನಾಶವಾಗಿಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿ. ಅನ್ಯದೇವರುಗಳನ್ನು ಅನುಸರಿಸಬೇಡಿ. ಅವುಗಳನ್ನು ಪೂಜಿಸಬೇಡಿ; ಅವುಗಳ ಸೇವೆ ಮಾಡಬೇಡಿ. ಇಲ್ಲವಾದರೆ ನೀವು ಖಂಡಿತವಾಗಿ ನಾಶವಾಗುವಿರಿ. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವ ದೇವರು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿಬಿಡುವುದಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನೊಳಗಿಂದ ನೀವು ನಾಶವಾಗುವವರೆಗೂ ಅವರು ನಿಮಗೆ ಉರುಲೂ ಬೋನೂ ಆಗಿರುವರು. ಇದಲ್ಲದೆ ದೇವರು ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯವಾಗಿ ತಿಳಿದುಕೊಳ್ಳುವಿರಿ.