Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:2 - ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ತಗ್ಗಿಸಿ, ನೀವು ದೇವರ ಆಜ್ಞೆಗಳನ್ನು ಕಾಪಾಡುವಿರೋ ಇಲ್ಲವೋ ಎಂದು ನಿಮ್ಮ ಹೃದಯವನ್ನು ಪರೀಕ್ಷಿಸುವುದಕ್ಕೆ ನಿಮ್ಮನ್ನು ನಡೆಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ್ದನ್ನೂ ನೀವು ತನ್ನ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:2
46 ತಿಳಿವುಗಳ ಹೋಲಿಕೆ  

ನಿಮ್ಮ ನಂಬಿಕೆಯ ಪರೀಕ್ಷೆಯು ದೃಢ ನಿಷ್ಠೆಯನ್ನು ಉಂಟುಮಾಡುತ್ತದೆ ಎಂದು ತಿಳಿದಿದ್ದೀರಿ.


ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ನಿಮ್ಮನ್ನು ದೀನತ್ವಕೆ ಒಳಪಡಿಸಿ, ಪರೀಕ್ಷಿಸಿದ ನಂತರ, ಕಡೆಯಲ್ಲಿ ನಿಮಗೆ ಒಳ್ಳೆಯದನ್ನು ಮಾಡುವಂತೆ ನಿಮ್ಮ ಪಿತೃಗಳು ಅರಿಯದ ಮನ್ನವನ್ನು ಮರುಭೂಮಿಯಲ್ಲಿ ನಿಮಗೆ ಪೋಷಿಸಿದರು.


ಆಗ ಯೆಹೋವ ದೇವರು ಮೋಶೆಗೆ, “ನಾನು ರೊಟ್ಟಿಯನ್ನು ನಿಮಗಾಗಿ ಆಕಾಶದಿಂದ ಸುರಿಸುತ್ತೇನೆ. ಜನರು ಹೊರಗೆ ಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದದ್ದನ್ನು ಕೂಡಿಸಲಿ. ಇದರಿಂದ ಅವರು ನನ್ನ ಆಜ್ಞೆಗಳನ್ನು ಕೈಗೊಳ್ಳುವರೋ, ಇಲ್ಲವೋ ಎಂಬುದನ್ನು ಪರೀಕ್ಷಿಸುತ್ತೇನೆ.


ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದಾರೆ. ನೀವು ಈ ದೊಡ್ಡ ಮರುಭೂಮಿಯಲ್ಲಿ ಸಂಚಾರ ಮಾಡಿದ್ದನ್ನು ದೇವರು ಗಮನಿಸಿದ್ದಾರೆ. ಈ ನಲವತ್ತು ವರ್ಷ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದರು. ನಿಮಗೆ ಏನೂ ಕಡಿಮೆ ಆಗಲಿಲ್ಲ.


ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾರಣೆ ಮಾಡಲು ಬಾಬಿಲೋನಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲಾದ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದಲ್ಲಿ ಇರುವ ಪ್ರತಿಯೊಂದನ್ನೂ ತಿಳಿದುಕೊಳ್ಳುವದಕ್ಕಾಗಿಯೂ ಪರಿಶೋಧಿಸುವುದಕ್ಕಾಗಿಯೂ ದೇವರು ಅವನನ್ನು ಕೈಬಿಟ್ಟರು.


ಅವನು ಯೆಹೋವ ದೇವರಿಗೆ ಮೊರೆಯಿಟ್ಟನು. ಯೆಹೋವ ದೇವರು ಅವನಿಗೆ ಒಂದು ಗಿಡವನ್ನು ತೋರಿಸಿದರು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಗಿ ಬಿಟ್ಟಿತು. ಅಲ್ಲಿ ದೇವರು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿದರು. ಅಲ್ಲಿಯೇ ದೇವರು ಅವರನ್ನು ಪರೀಕ್ಷಿಸಿದರು.


ಕರ್ತದೇವರ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆಗ ಅವರು ನಿಮ್ಮನ್ನು ಮೇಲಕ್ಕೆತ್ತುವರು.


ಯೇಸು ಮನುಷ್ಯರ ಅಂತರಂಗವನ್ನು ತಿಳಿದವರಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಅವರಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ.


ಆದರೆ ದೇವರು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾರೆ. ಆದ್ದರಿಂದ ಈ ಕಾರಣಕ್ಕಾಗಿ, ಪವಿತ್ರ ವೇದವು: “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ. ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ,” ಎಂದು ಹೇಳುತ್ತದೆ.


“ನಾನು ನಲವತ್ತು ವರ್ಷ ನಿಮ್ಮನ್ನು ಮರುಭೂಮಿಯಲ್ಲಿ ನಡೆಸಿದೆನು. ನಿಮ್ಮ ಮೇಲಿರುವ ವಸ್ತ್ರಗಳು ಹರಿಯಲಿಲ್ಲ. ನಿಮ್ಮ ಪಾದಗಳಲ್ಲಿದ್ದ ಕೆರವಾಗಲಿ ಸವೆದುಹೋಗಲಿಲ್ಲ.


“ನಾನು ನಿಮಗೆ ಹೇಳುತ್ತೇನೆ, ಅವನಲ್ಲ, ಇವನೇ ನೀತಿವಂತನೆಂಬ ನಿರ್ಣಯ ಪಡೆದವನಾಗಿ ತನ್ನ ಮನೆಗೆ ಹೋದನು. ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.


ನಾನೇ ನಿಮ್ಮನ್ನು ಈಜಿಪ್ಟ್ ದೇಶದಿಂದ ಕರೆತಂದೆನು. ಅಮೋರಿಯರ ದೇಶವನ್ನು ನಿಮಗೆ ಸೊತ್ತಾಗಿ ಕೊಡಲು, ನಿಮ್ಮನ್ನು ನಾಲ್ವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದೆನು.


ಜನರ ಅಟ್ಟಹಾಸವು ತಗ್ಗಿಹೋಗುವುದು. ಆ ದಿನದಲ್ಲಿ ಯೆಹೋವ ದೇವರೊಬ್ಬರೇ ಉನ್ನತವಾಗಿರುವರು.


ಸೋಸುವುದಕ್ಕೆ ಬೆಳ್ಳಿಗೆ ಕುಲುಮೆ ಪುಟ, ಬಂಗಾರಕ್ಕೆ ಆವಿಗೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರಿಶೋಧಿಸುತ್ತಾರೆ.


ತಮ್ಮ ಜನರನ್ನು ಮರುಭೂಮಿಯಲ್ಲಿ ನಡೆಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ನಮ್ಮ ಪಿತೃಗಳು ಈಜಿಪ್ಟಿನಲ್ಲಿ ನಿಮ್ಮ ಅದ್ಭುತಗಳಿಗೆ ಲಕ್ಷಕೊಡದೆ, ನಿಮ್ಮ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ ಅಂದರೆ ಕೆಂಪುಸಮುದ್ರದ ಹತ್ತಿರ ತಿರುಗಿಬಿದ್ದರು.


ಇಕ್ಕಟ್ಟಿನಲ್ಲಿ ನೀವು ಕರೆಮಾಡಿದಿರಿ, ಆಗ ನಾನು ನಿಮ್ಮನ್ನು ವಿಮೋಚಿಸಿದೆನು. ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟೆನು. ಮೆರೀಬಾ ನೀರಿನ ಹತ್ತಿರ ನಿಮ್ಮನ್ನು ಪರೀಕ್ಷಿಸಿದೆನು.


ಯೆಹೋವ ದೇವರ ಕ್ರಿಯೆಗಳನ್ನು ಜ್ಞಾಪಕಮಾಡಿಕೊಳ್ಳುವೆನು. ಹೌದು, ಆದಿಯಿಂದಲೂ ನೀವು ನಡೆಸಿದ ಅದ್ಭುತಗಳನ್ನು ನೆನಪುಮಾಡಿಕೊಳ್ಳುವೆನು.


ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವದಕ್ಕೂ, ಅವನ ಗರ್ವವನ್ನು ಅಡಗಿಸುವುದಕ್ಕೂ ದೇವರು ಹಾಗೆ ಮಾಡುತ್ತಾರೆ.


ಮನಸ್ಸೆಯು ಬಾಧೆಯಲ್ಲಿರುವಾಗ ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಂಡನು ಮತ್ತು ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಪ್ರಾರ್ಥನೆಮಾಡಿದನು.


ಅವನು ಹೇಳಿದಂತೆಯೇ ಅದು ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸುತ್ತೀರೋ ಇಲ್ಲವೋ ಎಂಬುದನ್ನು ಕಂಡುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.


ನೀವು ಅವರಿಗೆ ಭಯಪಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಫರೋಹನಿಗೂ, ಎಲ್ಲಾ ಈಜಿಪ್ಟಿನವರಿಗೂ ಮಾಡಿದ್ದನ್ನು


ಅವರೇ ನಿಮಗೆ ಇಳಿದುಕೊಳ್ಳುವುದಕ್ಕೆ ಸ್ಥಳವನ್ನು ಗೊತ್ತುಮಾಡಿ ನೀವು ಹೋಗತಕ್ಕ ಮಾರ್ಗವನ್ನು ನಿಮಗೆ ತೋರಿಸಲು ರಾತ್ರಿ ಹೊತ್ತು ಬೆಂಕಿಯಲ್ಲಿಯೂ ಹಗಲು ಹೊತ್ತು ಮೇಘದಲ್ಲಿಯೂ ನಿಮ್ಮ ಮುಂದೆ ಹೋದರು.


ನಲ್ವತ್ತನೆಯ ವರ್ಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿನದಲ್ಲಿ, ಮೋಶೆಯು ಇಸ್ರಾಯೇಲರಿಗೆ, ಯೆಹೋವ ದೇವರು ಅವನಿಗೆ ಅವರ ವಿಷಯವಾಗಿ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಮಾತನಾಡಿದನು.


ಕೆಲವು ಕಾಲದ ನಂತರ, ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕಾಗಿ ಅವನಿಗೆ, “ಅಬ್ರಹಾಮನೇ,” ಎಂದು ಕರೆದರು. ಅದಕ್ಕವನು, “ಇಗೋ, ಇಲ್ಲಿದ್ದೇನೆ,” ಎಂದು ಉತ್ತರಕೊಟ್ಟನು.


ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ಇದಲ್ಲದೆ ಅವನ ಪ್ರಾರ್ಥನೆಯೂ, ಅವನು ದೇವರಿಗೆ ಭಿನ್ನವಿಸಿದ್ದೂ, ಅವನ ಸಮಸ್ತ ಪಾಪವೂ, ಅವನ ಅಪನಂಬಿಕೆಯೂ, ಅವನು ತಗ್ಗಿಸಿಕೊಳ್ಳುವುದಕ್ಕಿಂತ ಮುಂಚೆ ಕಟ್ಟಿಸಿದ ಉನ್ನತ ಸ್ಥಳಗಳನ್ನೂ, ನಿಲ್ಲಿಸಿದ ಅಶೇರ ಸ್ತಂಭಗಳೂ, ಕೆತ್ತಿಸಿದ ವಿಗ್ರಹಗಳೂ, ಸ್ಥಾಪಿಸಿದ ಸ್ಥಳಗಳೂ ಪ್ರವಾದಿಗಳ ದಾಖಲೆಗಳಲ್ಲಿ ಬರೆದಿರುತ್ತವೆ.


ಇಸ್ರಾಯೇಲರು ತಾವು ವಾಸವಾಗಿರತಕ್ಕ ದೇಶಕ್ಕೆ ಬರುವವರೆಗೆ, ನಲವತ್ತು ವರುಷ ಮನ್ನವನ್ನು ತಿಂದರು. ಕಾನಾನ್ ದೇಶದ ಮೇರೆಗಳಿಗೆ ಸೇರುವವರೆಗೂ ಅವರು ಮನ್ನವನ್ನು ತಿಂದರು.


ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ. ಏಕೆಂದರೆ ನಿಮ್ಮನ್ನು ಪರೀಕ್ಷಿಸುವುದಕ್ಕೋಸ್ಕರವೂ ನೀವು ಪಾಪಮಾಡದಂತೆ ಅವರ ಭಯವು ನಿಮಗಿರಲೆಂದೂ ದೇವರು ಬಂದಿದ್ದಾರೆ,” ಎಂದನು.


ಇದಲ್ಲದೆ ನಿಮ್ಮ ಮಕ್ಕಳು ನಲವತ್ತು ವರುಷ ಮರುಭೂಮಿಯಲ್ಲಿ ಅಲೆದಾಡಿ, ನಿಮ್ಮ ಹೆಣಗಳು ಮರುಭೂಮಿಯಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಅಪನಂಬಿಗಸ್ತಿಕೆಯನ್ನು ಅನುಭವಿಸುವಿರಿ.


ಇಸ್ರಾಯೇಲರು ತಮ್ಮ ತಂದೆಗಳು ಕೈಗೊಂಡು ನಡೆದ ಯೆಹೋವ ದೇವರ ಮಾರ್ಗದಲ್ಲಿ ತಾವು ಕೈಗೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ,


ತಾವು ಮೋಶೆಯ ಮುಖಾಂತರವಾಗಿ ಇಸ್ರಾಯೇಲರ ಪಿತೃಗಳಿಗೆ ಆಜ್ಞಾಪಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೇಳುವರೋ ಇಲ್ಲವೋ ಎಂದು ಪರೀಕ್ಷಿಸುವುದಕ್ಕೆ ಯೆಹೋವ ದೇವರು ಅವರನ್ನು ಉಳಿಸಿಬಿಟ್ಟರು.


“ಆದರೆ ನೀವು ನಿಮ್ಮ ಬಹು ಕರುಣೆಯಿಂದ ಮರುಭೂಮಿಯಲ್ಲಿ ಅವರನ್ನು ಕೈಬಿಡಲಿಲ್ಲ. ಹಗಲಿನಲ್ಲಿ ಅವರಿಗೆ ಮೇಘಸ್ತಂಭವು ದಾರಿ ತೋರಿಸದೆ ಇರಲಿಲ್ಲ. ರಾತ್ರಿಯಲ್ಲಿ ಅವರಿಗೆ ಬೆಳಕನ್ನೂ, ಅವರು ನಡೆಯತಕ್ಕ ಮಾರ್ಗವನ್ನೂ ತೋರಿಸುವ ಅಗ್ನಿ ಸ್ತಂಭವು ಅವರನ್ನು ಬಿಟ್ಟುಹೋಗಲಿಲ್ಲ.


ನಾನೇ ಯೆಹೋವ ದೇವರೂ ನಿಮ್ಮ ದೇವರೂ ಆಗಿದ್ದೇನೆ. ನನ್ನ ನಿಯಮಗಳಲ್ಲೇ ನಡೆಯಿರಿ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಕೈಗೊಂಡು ಅವುಗಳನ್ನೇ ಮಾಡಿರಿ.


ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳಿರಿ. ತಲತಲಾಂತರಗಳ ವರುಷಗಳನ್ನು ಗ್ರಹಿಸಿಕೊಳ್ಳಿರಿ. ನಿಮ್ಮ ತಂದೆಯನ್ನು ಕೇಳಿದರೆ, ಅವರು ನಿಮಗೆ ತಿಳಿಸುವರು. ನಿಮ್ಮ ಹಿರಿಯರನ್ನು ಕೇಳಿದರೆ, ಅವರು ನಿಮಗೆ ಹೇಳುವರು.


ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು; ಅವರ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.


ಅವರು, ‘ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿ ನಮ್ಮನ್ನು ಮರುಭೂಮಿಯಲ್ಲಿ ಕಾಡು ಕುಳಿಗಳು ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದುಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡೆಸಿದ ಯೆಹೋವ ದೇವರು ಎಲ್ಲಿ?’ ಎಂದು ಪ್ರಶ್ನೆ ಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು