ಧರ್ಮೋಪದೇಶಕಾಂಡ 8:7 - ಕನ್ನಡ ಸಮಕಾಲಿಕ ಅನುವಾದ7 ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಒಳ್ಳೆಯ ದೇಶಕ್ಕೆ ಬರಮಾಡುತ್ತಾರೆ. ಅದು ನೀರಿನ ಹಳ್ಳಗಳೂ, ತಗ್ಗುಗಳಲ್ಲಿಯೂ, ಬೆಟ್ಟದಲ್ಲಿಯೂ, ಉಕ್ಕುವ ಬುಗ್ಗೆಗಳೂ ಇರುವ ದೇಶವಾಗಿರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶಕ್ಕೆ ನಿಮ್ಮನ್ನು ಸೇರಿಸುತ್ತಾನೆ. ಆ ದೇಶದ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತದೆ; ಮತ್ತು ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಾಗಲಿ ಎಲ್ಲಾ ಕಡೆಯೂ ಬುಗ್ಗೆಗಳಿಂದ ನೀರು ಉಕ್ಕುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ನಿಮ್ಮ ದೇವರಾದ ಸರ್ವೇಶ್ವರ ಉತ್ತಮವಾದ ನಾಡಿಗೆ ನಿಮ್ಮನ್ನು ಸೇರಿಸುತ್ತಾರೆ. ಆ ನಾಡಿನ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತಿರುತ್ತದೆ; ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಿ ಆಗಲಿ, ಎಲ್ಲಾ ಕಡೆಯು ಬಾವಿಗಳಿಂದಲೂ ಬುಗ್ಗೆಗಳಿಂದಲೂ ನೀರು ಉಕ್ಕುತ್ತಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿಮ್ಮ ದೇವರಾದ ಯೆಹೋವನು ಉತ್ತಮದೇಶಕ್ಕೆ ನಿಮ್ಮನ್ನು ಸೇರಿಸುತ್ತಾನೆ. ಆ ದೇಶದ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತದೆ; ಮತ್ತು ತಗ್ಗುಗಳಲ್ಲಾಗಲಿ ಗುಡ್ಡಗಳಲ್ಲಾಗಲಿ ಎಲ್ಲಾ ಕಡೆಯೂ ಬಾವಿಗಳಲ್ಲಿಯೂ ಬುಗ್ಗೆಗಳಿಂದಲೂ ನೀರು ಉಕ್ಕುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶವನ್ನು ನಿಮಗೆ ಕೊಡುತ್ತಿದ್ದಾನೆ. ಆ ದೇಶದಲ್ಲಿ ನೀರು ಸಮೃದ್ಧಿಯಾಗಿರುವುದು. ನೀರು ಕಣಿವೆಗಳಲ್ಲಿಯೂ ಬೆಟ್ಟಗಳಲ್ಲಿಯೂ ನೆಲದ ಮೇಲೂ ಹರಿದುಬರುವುದು. ಅಧ್ಯಾಯವನ್ನು ನೋಡಿ |
ಸ್ವಲ್ಪ ಕಾಲವಾದ ನಂತರ ನಾನು ಬಂದು, ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಎಣ್ಣೆಮರಗಳು, ಜೇನು ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ಜೀವವನ್ನು ಆಯ್ದುಕೊಳ್ಳಿರಿ, ಮರಣವನ್ನಲ್ಲ. “ ‘ಯೆಹೋವ ದೇವರು ನಮ್ಮನ್ನು ರಕ್ಷಿಸುವರು,’ ಎಂದು ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸಿ ತಪ್ಪು ಮಾರ್ಗದಲ್ಲಿ ನಡೆಸುವಾಗ, ಅವನ ಮಾತನ್ನು ಕೇಳಬೇಡಿರಿ.