Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:1 - ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರೇ, ಕೇಳಿರಿ, ನೀವು ಹೋಗಿ ನಿಮಗಿಂತ ದೊಡ್ಡ, ಬಲಿಷ್ಠ ಜನಾಂಗಗಳನ್ನೂ, ಆಕಾಶದವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವುದಕ್ಕೆ ಈ ಹೊತ್ತು ಯೊರ್ದನ್ ನದಿಯನ್ನು ದಾಟಲಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಇಸ್ರಯೇಲರೇ ಕೇಳಿ : ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನು ಹಾಗು ಗಗನ ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲು, ನೀವು ಈ ಜೋರ್ಡನ್ ನದಿಯನ್ನು ಇಂದು ದಾಟಲಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರೇ ಕೇಳಿರಿ. ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಈ ಯೊರ್ದನ್ ಹೊಳೆಯನ್ನು ಇಂದು ದಾಟುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಇಸ್ರೇಲ್ ಜನರೇ, ಕೇಳಿರಿ. ಈ ದಿನ ನೀವು ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಪ್ರವೇಶಿಸಿ ನಿಮಗಿಂತ ಬಲಿಷ್ಠವಾದ ಜನಾಂಗಗಳನ್ನು ಹೊಡೆದೋಡಿಸುವಿರಿ. ಅವರ ಪಟ್ಟಣಗಳು ದೊಡ್ಡದಾಗಿವೆ; ಅದರ ಗೋಡೆಗಳು ಆಕಾಶದಷ್ಟು ಎತ್ತರವಾಗಿವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:1
24 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಿ ಹೋಗಬೇಕು. ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡುವಾಗ,


ದೇವರು ನಿಮಗಿಂತ ದೊಡ್ಡದಾದ, ನಿಮಗಿಂತ ಬಲಿಷ್ಠವಾದ ಜನಾಂಗಗಳನ್ನು ನಿಮ್ಮ ಮುಂದೆ ಓಡಿಸಿ, ನಿಮ್ಮನ್ನು ಅವರ ದೇಶದೊಳಗೆ ಬರಮಾಡಿ, ಈ ದಿನ ನೀವು ಇರುವಂತೆ ನಿಮಗೆ ಅವರ ದೇಶವನ್ನು ಬಳುವಳಿಯಾಗಿ ಕೊಟ್ಟಿದ್ದಾರೆ.


ನಾವು ಎಲ್ಲಿಗೆ ಏರಿಹೋಗೋಣ? ನಮ್ಮ ಸಹೋದರರು, ‘ಆ ಜನರು ನಮಗಿಂತ ಬಲಿಷ್ಠರೂ ಎತ್ತರವಾದವರೂ ಪಟ್ಟಣಗಳು ದೊಡ್ಡವೂ, ಆಕಾಶವನ್ನು ಮುಟ್ಟುವ ಗೋಡೆಯುಳ್ಳವುಗಳೂ ಆಗಿವೆ. ಇದಲ್ಲದೆ ರಾಕ್ಷಸಾಕಾರದ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು’ ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ,” ಎಂದು ಹೇಳಿದಿರಿ.


“ನೀವು ಪಾಳೆಯದ ಮಧ್ಯದಲ್ಲಿ ನಡೆದುಹೋಗಿ ಜನರಿಗೆ, ‘ನಿಮಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನ್ ನದಿಯನ್ನು ದಾಟಿ ಹೋಗಬೇಕು,’ ಎಂದು ತಿಳಿಸಿರಿ,” ಎಂದನು.


ಯೆಹೋವ ದೇವರು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವರು. ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನಮಾಡಿಕೊಳ್ಳುವಿರಿ.


ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಬರಮಾಡಿದಾಗ, ಅವರು ನಿಮಗಿಂತ ದೊಡ್ಡವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಎಂದರೆ, ಗಿರ್ಗಾಷಿಯರನ್ನೂ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವರು.


ಆ ಕಾಲದಲ್ಲಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಯ ಅರ್ಧ ಗೋತ್ರಕ್ಕೂ ಆಜ್ಞಾಪಿಸಿದ್ದೇನೆಂದರೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ದೇಶವನ್ನು ಸೊತ್ತಾಗಿ ಕೊಟ್ಟಿದ್ದಾರೆ. ನಿಪುಣರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಆಯುಧ ಧರಿಸಿಕೊಂಡು ನದಿದಾಟಿ ಹೋಗಬೇಕು.


ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಯೊರ್ದನಿನಿಂದ ಹೊರಟು, ಯೆರಿಕೋವಿನ ಪೂರ್ವದಿಕ್ಕಿನ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದುಕೊಂಡರು.


ಯೆಹೋಶುವನು ಅವರಿಗೆ, “ನೀವು ಯೊರ್ದನ್ ನದಿ ಮಧ್ಯದಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಮಂಜೂಷದ ಮುಂದೆ ಇಸ್ರಾಯೇಲರ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನೂ ಒಂದೊಂದು ಕಲ್ಲನ್ನು ಭುಜದ ಮೇಲೆ ಹೊತ್ತುಕೊಂಡು ಬನ್ನಿರಿ.


ಮೇಲಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಸಮೀಪವಾಗಿದ್ದ ಆದಾಮ್ ಪಟ್ಟಣಕ್ಕೆ ಬಂದು ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ಎಂಬ ಲವಣ ಸಮುದ್ರಕ್ಕೆ ಹರಿದುಹೋಯಿತು. ಆಗ ಜನರು ಯೆರಿಕೋವಿನ ಎದುರಾಗಿ ನದಿ ದಾಟಿದರು.


ಆದ್ದರಿಂದ ಜನರು ಯೊರ್ದನ್ ನದಿಯನ್ನು ದಾಟಲು ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಜನರಿಗೆ ಮುಂದಾಗಿ ಹೊತ್ತುಕೊಂಡು ಹೋದರು.


ಆಗ ಯೆಹೋಶುವನು ಯಾಜಕರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋಗಿರಿ,” ಎಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದೆ ಹೊರಟರು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಯೊರ್ದನನ್ನು ದಾಟಿ ಪ್ರವೇಶಿಸುವಾಗ, ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಿ,


ಅವರು ನೆಗೆವನ್ನು ದಾಟಿ ಹೆಬ್ರೋನಿನವರೆಗೆ ಬಂದರು. ಅಲ್ಲಿ ಅನಾಕನ ಮಕ್ಕಳಾದ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳು ಮೊದಲು ನಿರ್ಮಿಸಲಾಗಿತ್ತು.


ಅನಂತರ ಅವರು, “ಬನ್ನಿರಿ, ನಾವು ಭೂಮಿಯ ಮೇಲೆ ಪಟ್ಟಣವನ್ನು ಕಟ್ಟೋಣ. ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನು ನಮಗೋಸ್ಕರವಾಗಿ ಕಟ್ಟಿಕೊಂಡು, ನಮಗೆ ಹೆಸರು ಸಂಪಾದಿಸಿಕೊಳ್ಳೋಣ. ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರುವುದಕ್ಕೆ ಆಸ್ಪದವಾಗುವದಿಲ್ಲ,” ಎಂದುಕೊಂಡರು.


ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಾಕೋಬರಿಗೆ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಸೇರಿಸಿ, ನೀವು ಕಟ್ಟಿದ ದೊಡ್ಡದಾದ ಒಳ್ಳೆಯ ಪಟ್ಟಣಗಳನ್ನೂ,


ಆ ಮರವು ವಿಶಾಲವಾಗಿಯೂ, ಬಲವಾಗಿಯೂ ಬೆಳೆಯಿತು ಹಾಗೂ ಅದು ಆಕಾಶವನ್ನು ಮುಟ್ಟುತ್ತಿತ್ತು. ಭೂಲೋಕದ ಕಟ್ಟಕಡೆಯವರೆಗೆ ಅದು ಕಾಣಿಸುತ್ತಿತ್ತು.


ಮೋಶೆಯು ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲರು ನೋಡಿದಾಗ, ಅವರು ಆರೋನನ ಬಳಿಗೆ ಕೂಡಿಬಂದು ಅವನಿಗೆ, “ನೀನು ಎದ್ದು ನಮ್ಮನ್ನು ಮುನ್ನಡೆಸಿಕೊಂಡು ಹೋಗುವ ದೇವರುಗಳನ್ನು ನಮಗಾಗಿ ಮಾಡು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು,” ಎಂದರು.


“ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನೀವು ಯೊರ್ದನನ್ನು ದಾಟಿ, ಕಾನಾನ್ ದೇಶಕ್ಕೆ ಬರುವಾಗ,


ಈಗ ಇಸ್ರಾಯೇಲರೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ, ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿ, ಅವುಗಳನ್ನು ಕೈಗೊಳ್ಳಿರಿ.


ಯೆಹೋವ ದೇವರು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿಪಡಿಸಿ, ಅವರು ನಿಮ್ಮ ದೇವರಾದ ಯೆಹೋವ ದೇವರು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವವರೆಗೆ ಅವರಿಗೆ ಸಹಾಯಮಾಡಬೇಕು. ತರುವಾಯ ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿಯ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸೊತ್ತಾಗಿರುವ ದೇಶಕ್ಕೆ ತಿರುಗಿಬಂದು, ಅದನ್ನು ಸ್ವಾಧೀನಮಾಡಿಕೊಂಡು, ಅದನ್ನು ಅನುಭವಿಸಿರಿ,” ಎಂದನು.


ಆದ್ದರಿಂದ ಯೆಹೋವ ದೇವರು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಏಕೆಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ, ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿವಸದಲ್ಲಿ ಕೇಳಿದ್ದಿ. ಯೆಹೋವ ದೇವರು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಯೆಹೋವ ದೇವರು ನನಗೆ ಸಹಾಯ ಮಾಡುವರೆಂದು ನಂಬಿಕೊಂಡಿದ್ದೇನೆ,” ಎಂದನು.


“ಆದರೂ ನನ್ನ ಜನರೇ, ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ, ಅಮೋರಿಯರನ್ನು ನಾನು ನಾಶ ಪಡಿಸಿದೆನು. ನಾನು ಮೇಲೆ ಅದರ ಫಲವನ್ನು ಮತ್ತು ಕೆಳಗೆ ಅದರ ಬೇರನ್ನು ಕಿತ್ತು ಹಾಕುವಂತೆ, ಅವರನ್ನು ನಿರ್ಮೂಲ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು