ಧರ್ಮೋಪದೇಶಕಾಂಡ 9:10 - ಕನ್ನಡ ಸಮಕಾಲಿಕ ಅನುವಾದ10 ಆಗ ಯೆಹೋವ ದೇವರು ನನಗೆ ತಮ್ಮ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟರು. ಯೆಹೋವ ದೇವರು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಕೂಡಿದ ದಿನದಲ್ಲಿ ಹೇಳಿದ ಆಜ್ಞೆಗಳೆಲ್ಲಾ ಆ ಹಲಗೆಗಳಲ್ಲಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಯೆಹೋವನು ತನ್ನ ಕೈಯಿಂದಲೇ ಬರೆದ ಆ ಎರಡು ಕಲ್ಲಿನ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನು. ನೀವು ಸಭೆ ಕೂಡಿದ ದಿನದಲ್ಲಿ ಯೆಹೋವನು ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಿಗೆಗಳಲ್ಲಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಸರ್ವೇಶ್ವರ ತಮ್ಮ ಕೈಯಿಂದಲೇ ಬರೆದ ಆ ಎರಡು ಕಲ್ಲಿನ ಹಲಗೆಗಳನ್ನು ನನ್ನ ವಶಕ್ಕೆ ಕೊಟ್ಟರು. ನೀವು ಸಭೆಕೂಡಿದ ದಿನದಲ್ಲಿ ಸರ್ವೇಶ್ವರ ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಗೆಗಳಲ್ಲಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ಯೆಹೋವನು ತನ್ನ ಕೈಯಿಂದಲೇ ಬರೆದು ಆ ಎರಡು ಕಲ್ಲಿನ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನು. ನೀವು ಸಭೆಕೂಡಿದ ದಿನದಲ್ಲಿ ಯೆಹೋವನು ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಿಗೆಗಳಲ್ಲಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನು ತನ್ನ ಬೆರಳಿನಿಂದ ಕಲ್ಲಿನ ಹಲಗೆಗಳ ಮೇಲೆ ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು. ನೀವು ಸೀನಾಯ್ ಬೆಟ್ಟದ ಬಳಿ ಸಮೂಹವಾಗಿ ಸೇರಿಬಂದಿದ್ದಾಗ ಆತನು ಬೆಂಕಿಯ ಜ್ವಾಲೆಯೊಳಗಿಂದ ನಿಮಗೆ ತಿಳಿಸಿದ ಪ್ರತಿಯೊಂದನ್ನೂ ಬರೆದಿದ್ದನು. ಅಧ್ಯಾಯವನ್ನು ನೋಡಿ |