ಧರ್ಮೋಪದೇಶಕಾಂಡ 9:12 - ಕನ್ನಡ ಸಮಕಾಲಿಕ ಅನುವಾದ12 ಆಗ ಯೆಹೋವ ದೇವರು, “ಎದ್ದು ಇಲ್ಲಿಂದ ಬೇಗ ಇಳಿದು ಹೋಗು. ಏಕೆಂದರೆ ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿನ್ನ ಜನರು ಕೆಟ್ಟು ಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡಿದ್ದಾರೆ,” ಎಂದು ನನಗೆ ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀನು ಐಗುಪ್ತ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಬೇಕಾದ ಲೋಹದ ವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನೀನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು; ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ, ತಮಗೆ ಲೋಹವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ’ ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀನು ಐಗುಪ್ತದೇಶದಿಂದ ಕರಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು; ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಲೋಹವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಗ ಆತನು ನನಗೆ, ‘ಎದ್ದು ಬೇಗನೆ ಕೆಳಗಿಳಿ. ಯಾಕೆಂದರೆ ನೀನು ಈಜಿಪ್ಟಿನಿಂದ ಬಿಡಿಸಿತಂದ ಜನರು ತಮ್ಮನ್ನು ತಾವೇ ಕೆಡಿಸಿಕೊಂಡಿದ್ದಾರೆ. ಇಷ್ಟು ಬೇಗನೆ ಅವರು ನನ್ನ ಆಜ್ಞೆಗಳನ್ನು ಮೀರಿದ್ದಾರೆ. ಅವರು ಬಂಗಾರವನ್ನು ಕರಗಿಸಿ ತಮಗಾಗಿ ವಿಗ್ರಹವನ್ನು ಮಾಡಿಕೊಂಡಿದ್ದಾರೆ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿ |