Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:15 - ಕನ್ನಡ ಸಮಕಾಲಿಕ ಅನುವಾದ

15 ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು. ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು. ಒಡಂಬಡಿಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ನಾನು ಆ ಎರಡು ಆಜ್ಞಾಶಾಸನಗಳನ್ನು ನನ್ನ ಎರಡು ಕೈಗಳಲ್ಲಿ ಹಿಡಿದುಕೊಂಡು ಬೆಂಕಿಯಿಂದ ಉರಿಯುವ ಆ ಬೆಟ್ಟದಿಂದ ಇಳಿದು ಬಂದು ನೋಡಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ನಾನು ಆ ಎರಡು ಆಜ್ಞಾಶಾಸನಗಳನ್ನು ನನ್ನ ಎರಡು ಕೈಗಳಲ್ಲಿ ಹಿಡಿದುಕೊಂಡು ಬೆಂಕಿಯಿಂದ ಉರಿಯುತ್ತಿದ್ದ ಆ ಬೆಟ್ಟದಿಂದ ಇಳಿದುಬಂದು ನೋಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ನಾನು ಆ ಎರಡು ಆಜ್ಞಾಶಾಸನಗಳನ್ನು ನನ್ನ ಎರಡು ಕೈಗಳಲ್ಲಿ ಹಿಡಿದುಕೊಂಡು ಬೆಂಕಿಯಿಂದ ಉರಿಯುವ ಆ ಬೆಟ್ಟದಿಂದ ಇಳಿದು ಬಂದು ನೋಡಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನಾನು ಕೂಡಲೇ ಬೆಟ್ಟದಿಂದ ಹಿಂತಿರುಗಿ ಬಂದೆನು. ಅದು ಬೆಂಕಿಯಿಂದ ಸುಡುತ್ತಲಿತ್ತು ಮತ್ತು ಒಡಂಬಡಿಕೆಯ ಕಲ್ಲಿನ ಹಲಗೆಗಳು ನನ್ನ ಬಳಿಯಲ್ಲಿ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:15
7 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಅಗ್ನಿಯೊಳಗೆ ಬೆಟ್ಟದ ಮೇಲೆ ಇಳಿದಿದ್ದರಿಂದ ಸೀನಾಯಿ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.


ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ, ನೀವು ಕತ್ತಲೆಯಿಂದ ಆ ಸ್ವರವನ್ನು ಕೇಳಿದಾಗ, ನಿಮ್ಮ ಗೋತ್ರಗಳ ಮುಖ್ಯಸ್ಥರೂ, ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ,


ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ. ಆ ಬೆಟ್ಟವು ಕತ್ತಲೆಯಾಗಿದ್ದು, ಮೇಘಗಳೂ, ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದವರೆಗೆ ಬೆಂಕಿಯಿಂದ ಉರಿಯುತ್ತಿತ್ತು.


ನೀವು ಮುಟ್ಟಬಹುದಾದ ಮತ್ತು ಬೆಂಕಿಹತ್ತಿದಂಥ ಬೆಟ್ಟಕ್ಕೂ ಮಬ್ಬಿಗೂ ಕತ್ತಲೆಗೂ ಬಿರುಗಾಳಿಗೂ


ಮೋಶೆಯು ಆಕಾಶದ ಕಡೆಗೆ ತನ್ನ ಕೋಲನ್ನು ಚಾಚಿದನು. ಆಗ ಯೆಹೋವ ದೇವರು ಗುಡುಗುಗಳನ್ನೂ ಆಲಿಕಲ್ಲಿನ ಮಳೆಯನ್ನೂ ಸುರಿಸಿದರು. ಸಿಡಿಲು ನೆಲಕ್ಕೆ ಬಡಿಯಿತು. ಸಿಡಿಲಿನ ಆರ್ಭಟದೊಂದಿಗೆ ಯೆಹೋವ ದೇವರು ಈಜಿಪ್ಟ್ ದೇಶದ ಮೇಲೆ ಆಲಿಕಲ್ಲಿನ ಮಳೆಯನ್ನು ಸುರಿಸಿದರು.


ನಾನು ನೋಡಿದಾಗ, ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಎರಕ ಹೊಯ್ದ ಕರುವನ್ನು ನಿಮಗೆ ಮಾಡಿಕೊಂಡು, ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗ ಬಿಟ್ಟುಬಿಟ್ಟು ಹೋಗಿದ್ದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು