ಧರ್ಮೋಪದೇಶಕಾಂಡ 9:18 - ಕನ್ನಡ ಸಮಕಾಲಿಕ ಅನುವಾದ18 ಆಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ಅವರಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಲವತ್ತು ದಿವಸ ಹಗಲುರಾತ್ರಿ ಊಟಮಾಡದೆ, ನೀರು ಕುಡಿಯದೆ, ಯೆಹೋವ ದೇವರ ಮುಂದೆ ಬಿದ್ದಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನ ಪಾನಗಳನ್ನು ಬಿಟ್ಟು ನಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ನೀವು ಹೀಗೆ ಅಪರಾಧಮಾಡಿ, ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ಅವರನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಲವತ್ತು ದಿನಗಳು ಹಗಲಿರುಳು ಸರ್ವೇಶ್ವರನ ಸನ್ನಿಧಿಯಲ್ಲೇ ಬಿದ್ದಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಾಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಮೇಲೆ ನಾನು ನಲವತ್ತು ದಿನ ಹಗಲಿರುಳು ಯೆಹೋವನ ಮುಂದೆ ಬೋರಲ ಬಿದ್ದಿದ್ದೆನು. ನಾನು ಊಟ ಮಾಡಲಿಲ್ಲ, ನೀರನ್ನು ಕುಡಿಯಲಿಲ್ಲ ಯಾಕೆಂದರೆ ನೀವು ಪಾಪಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಆತನು ಕೋಪಗೊಂಡಿದ್ದನು. ಅಧ್ಯಾಯವನ್ನು ನೋಡಿ |