ಧರ್ಮೋಪದೇಶಕಾಂಡ 9:19 - ಕನ್ನಡ ಸಮಕಾಲಿಕ ಅನುವಾದ19 ಏಕೆಂದರೆ ಯೆಹೋವ ದೇವರು ನಿಮ್ಮನ್ನು ನಾಶಮಾಡುವಂತೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು. ಆದರೆ ಆ ಸಾರಿ ಕೂಡ ಯೆಹೋವ ದೇವರು ನನ್ನ ಬೇಡಿಕೆಯನ್ನು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನು ನಿಮ್ಮ ಮೇಲೆ ಬಹುಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿಕೊಂಡೆನು. ಆದರೆ ಆ ಸಮಯದಲ್ಲಿಯೂ ಆತನು ನನ್ನ ಮನವಿಯನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸರ್ವೇಶ್ವರ ನಿಮ್ಮ ಮೇಲೆ ಬಹು ಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿದೆ. ಆದರೆ ಆ ಕಾಲದಲ್ಲೂ ಅವರು ನನ್ನ ಮನವಿಯನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆಹೋವನು ನಿಮ್ಮ ಮೇಲೆ ಬಹುಕೋಪವನ್ನು ಮಾಡಿ ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದದರಿಂದ ನಾನು ಹೆದರಿಕೊಂಡೆನು. ಆದರೆ ಆ ಕಾಲದಲ್ಲಿಯೂ ಆತನು ನನ್ನ ಮನವಿಯನ್ನು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೆಹೋವನ ಭಯಂಕರ ಕೋಪಕ್ಕೆ ನಾನು ಹೆದರಿದ್ದೆನು. ನಿಮ್ಮನ್ನು ನಾಶಮಾಡುವಷ್ಟರ ತನಕ ಆತನು ಕೋಪಗೊಂಡಿದ್ದನು. ಆದರೆ ಆತನು ನನ್ನ ಬಿನ್ನಹಗಳನ್ನು ಲಾಲಿಸಿದನು. ಅಧ್ಯಾಯವನ್ನು ನೋಡಿ |