Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:26 - ಕನ್ನಡ ಸಮಕಾಲಿಕ ಅನುವಾದ

26 ನಾನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ, “ಸಾರ್ವಭೌಮ ಯೆಹೋವ ದೇವರೇ, ನೀವು ನಿಮ್ಮ ಮಹಿಮೆಯಿಂದ ವಿಮೋಚಿಸಿ, ಬಲವಾದ ಕೈಯಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ ನಿಮ್ಮ ಜನರನ್ನು ನಾಶಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಾನು ಆತನನ್ನು ಬೇಡಿಕೊಳ್ಳುತ್ತಾ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಾನು ಅವರನ್ನು ಬೇಡಿಕೊಳ್ಳುತ್ತಾ, ‘ಸರ್ವೇಶ್ವರಾ, ದೇವರೇ, ನೀವು ನಿಮ್ಮ ಮಹಿಮೆಯಿಂದ ರಕ್ಷಿಸಿ, ನಿಮ್ಮ ಭುಜಬಲ ಪ್ರಯೋಗಿಸಿ ಈಜಿಪ್ಟಿನಿಂದ ಬಿಡುಗಡೆಮಾಡಿದ ನಿಮ್ಮ ಸ್ವಕೀಯ ಜನರನ್ನು ನಾಶಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಾನು ಆತನನ್ನು ಬೇಡಿಕೊಳ್ಳುತ್ತಾ - ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ‘ನನ್ನ ಒಡೆಯನೇ, ಯೆಹೋವನೇ, ನಿನ್ನ ಜನರನ್ನು ನೀನು ನಾಶಮಾಡಬೇಡ. ಅವರು ನಿನ್ನ ಜನಾಂಗ. ನಿನ್ನ ಪರಾಕ್ರಮದಿಂದ ನೀನು ಈಜಿಪ್ಟಿನಿಂದ ಅವರನ್ನು ಬಿಡಿಸಿ ಹೊರತಂದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:26
36 ತಿಳಿವುಗಳ ಹೋಲಿಕೆ  

ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ನಿಮ್ಮ ನಾಮದ ಮೇಲೆ ದೃಷ್ಟಿಯಿಡಿ, ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ, ಅವಮಾನಪಡಿಸಬೇಡಿ. ನೀವು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರಿ.


ಯೆಹೋವ ದೇವರು ವಿಮೋಚಿಸಿದವರು ಹಾಗೆ ಹೇಳಲಿ; ವೈರಿಯ ಕೈಯಿಂದ ಬಿಡುಗಡೆಯಾದವರು ಆ ಕಥೆಯನ್ನು ಹೇಳಲಿ


ನೀವು ವಿಮೋಚಿಸಿದ ಜನರನ್ನು ನೀವು ನಿಮ್ಮ ಪ್ರೀತಿಯಿಂದ ನಡೆಸಿದ್ದೀರಿ. ನೀವು ಅವರನ್ನು ನಿಮ್ಮ ಬಲದಿಂದ ನಿಮ್ಮ ಪರಿಶುದ್ಧ ನಿವಾಸಕ್ಕೆ ನಡೆಸಿದ್ದೀರಿ.


ಕ್ರಿಸ್ತ ಯೇಸು ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವರಾಗಿ ಒಂದೇ ಸಾರಿ ಮಹಾ ಪವಿತ್ರ ಸ್ಥಳದೊಳಗೆ ಪ್ರವೇಶಿಸಿದರು.


ನಾನು ಈಜಿಪ್ಟ್ ದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸತ್ವದ ದೇಶದೊಳಗಿಂದ ನಿನ್ನನ್ನು ವಿಮೋಚಿಸಿ, ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಿನಗೆ ನಾಯಕರನ್ನಾಗಿ ಕಳುಹಿಸಿದೆನು.


ನಾವು ಆದಿಯಿಂದಲೂ ನಿಮ್ಮವರಾಗಿದ್ದೇವೆ. ಅವರ ಮೇಲೆ ನೀವು ದೊರೆತನ ಮಾಡಲಿಲ್ಲ. ಅವರು ನಿಮ್ಮ ಹೆಸರನ್ನು ಧರಿಸಲೂ ಇಲ್ಲ.


ಆಕಾಶಗಳೇ, ಹರ್ಷಧ್ವನಿಗೈಯಿರಿ. ಏಕೆಂದರೆ ಯೆಹೋವ ದೇವರು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಕೆಳಭಾಗವೇ ಆರ್ಭಟಿಸು. ಪರ್ವತಗಳೇ, ವನವೇ, ಅದರಲ್ಲಿರುವ ಎಲ್ಲಾ ಮರಗಳೇ ಉತ್ಸಾಹಧ್ವನಿ ಮಾಡಿರಿ. ಏಕೆಂದರೆ ಯೆಹೋವ ದೇವರು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.


ಆದ್ದರಿಂದ ದೇವರು ಅವರಿಗೆ ಪೂರ್ಣದಂಡನೆ ಕೊಡುವುದಾಗಿ ಹೇಳಿದರು. ಆದರೆ ಅವರು ಆಯ್ದುಕೊಂಡ ಮೋಶೆಯು, ದೇವರ ಕಠಿಣ ತೀರ್ಮಾನವನ್ನು ಶಾಂತಪಡಿಸಲು ಆಪತ್ತಿನಲ್ಲಿ ದೇವರ ಮುಂದೆ ಮಧ್ಯಸ್ಥನಾಗಿ ನಿಂತುಕೊಂಡನು.


ಯೆಹೋವ ದೇವರ ಯಾಜಕರಲ್ಲಿ ಮೋಶೆಯೂ ಆರೋನನೂ ಇದ್ದಾರೆ. ದೇವರ ಹೆಸರೆತ್ತಿ ಕರೆದವರಲ್ಲಿ ಸಮುಯೇಲನೂ ಸಹ ಒಬ್ಬನು. ಇವರೆಲ್ಲರೂ ಯೆಹೋವ ದೇವರನ್ನು ಕರೆದರು. ದೇವರು ಅವರಿಗೆ ಉತ್ತರಕೊಟ್ಟರು.


ಯಾಕೋಬನ ಮತ್ತು ಯೋಸೇಫನ ಸಂತತಿಯವರಾದ ನಿಮ್ಮ ಜನರನ್ನು ನಿಮ್ಮ ಬಲವಾದ ತೋಳಿನಿಂದ ವಿಮೋಚಿಸಿದ್ದೀರಿ.


“ಅವರು ನಿಮ್ಮ ಮಹಾಶಕ್ತಿಯಿಂದಲೂ, ನಿಮ್ಮ ಭುಜಪರಾಕ್ರಮಗಳಿಂದ ನೀವು ವಿಮೋಚಿಸಿದ ನಿಮ್ಮ ಸೇವಕರೂ, ನಿಮ್ಮ ಜನರೂ ಆಗಿರುತ್ತಾರೆ.


ಏಕೆಂದರೆ ಅವರು ಈಜಿಪ್ಟಿನಿಂದಲೂ, ಕಬ್ಬಿಣದ ಒಲೆಯ ಮಧ್ಯದಿಂದಲೂ, ನೀವು ಬರಮಾಡಿದ ನಿಮ್ಮ ಜನರಾಗಿಯೂ, ನಿಮ್ಮ ಬಾಧ್ಯತೆಯೂ ಆಗಿದ್ದಾರೆ. ಹೀಗೆ ಅವರು ನಿಮಗೆ ಮೊರೆಯಿಡುವ ಎಲ್ಲಾದರಲ್ಲಿ ನೀವು ಅವರ ವ್ಯಾಜ್ಯವನ್ನು ಆಲಿಸಿರಿ.


ಭೂಲೋಕದಲ್ಲಿ ನಿಮ್ಮ ಜನರಾದ ಇಸ್ರಾಯೇಲರಿಗೆ ಸಮಾನವಾದ ಜನಾಂಗ ಯಾವುದು? ನೀವೇ ಹೋಗಿ ಅವರನ್ನು ಸ್ವಜನರಾಗಿ ವಿಮೋಚಿಸಿ ನಿಮ್ಮ ಹೆಸರನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟಿನಿಂದ ವಿಮೋಚಿಸಿ ತಂದ ನಿಮ್ಮ ಪ್ರಜೆಗಳ ಎದುರಿನಿಂದ ಜನಾಂಗಗಳನ್ನು ಮತ್ತು ಅವರ ದೇವರುಗಳನ್ನು ಓಡಿಸುವ ಮೂಲಕ ವಿಸ್ಮಯಕರವಾದ ಮಹಾ ಅದ್ಭುತಗಳನ್ನು ಮಾಡಿದ್ದೀರಲ್ಲವೇ?


ಏಕೆಂದರೆ ಯೆಹೋವ ದೇವರ ಪಾಲು ಅವರ ಜನರೇ ಆಗಿರುತ್ತಾರೆ. ಯಾಕೋಬ್ಯರೇ ದೇವರ ಸೊತ್ತಿನ ಪಾಲು.


ಯೆಹೋವ ದೇವರೇ, ನೀವು ವಿಮೋಚಿಸಿದ ನಿಮ್ಮ ಜನರಾದ ಇಸ್ರಾಯೇಲರಿಗೆ ಕರುಣೆ ಹೊದಿಸಿರಿ. ನಿಮ್ಮ ಜನರಾದ ಇಸ್ರಾಯೇಲರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡಿರಿ,” ಎಂದು ಹೇಳಬೇಕು. ಆ ರಕ್ತಾಪರಾಧವು ಅವರಿಗೆ ಮುಚ್ಚಲಾಗುವುದು.


ನೀವು ಈಜಿಪ್ಟ್ ದೇಶದಲ್ಲಿ ದಾಸರಾಗಿದ್ದಿರಿ ಎಂದೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಿರಿ. ಆದ್ದರಿಂದ ನಾನು ಈ ಹೊತ್ತು ಇದನ್ನು ನಿಮಗೆ ಆಜ್ಞಾಪಿಸುತ್ತೇನೆ.


ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು.


ಆದರೂ ನೀವು ನಿಮ್ಮ ದೊಡ್ಡ ಶಕ್ತಿಯಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಹೊರಗೆ ಬರಮಾಡಿದ ನಿಮ್ಮ ಜನವೂ ನಿಮ್ಮ ಸೊತ್ತೂ ಇವರೇ,” ಎಂದು ಹೇಳಿದೆನು.


ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದಲೂ, ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುವುದರಿಂದಲೂ, ಯೆಹೋವ ದೇವರು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿಮ್ಮನ್ನು ಗುಲಾಮತನದಿಂದಲೂ, ಈಜಿಪ್ಟಿನ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದರು.


ಅವನು, ಕರ್ತನೇ, “ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನನ್ನ ಕರ್ತನೇ ತಾವೇ ನಮ್ಮ ಸಂಗಡ ಬರಬೇಕು. ಇದು ಮಾತು ಕೇಳದ ಹಟಮಾರಿ ಜನಾಂಗವೇ ಹೌದು. ಆದರೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿಮ್ಮ ಸೊತ್ತಾಗಿ ತೆಗೆದುಕೊಳ್ಳಿ,” ಎಂದನು.


ಹಾಗಾದರೆ ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆಕಿದ್ದೇ ಆದರೆ ನಾನು ನಿಮ್ಮನ್ನು ತಿಳಿಯುವ ಹಾಗೆ, ನಿಮ್ಮ ಮಾರ್ಗವನ್ನು ನನಗೆ ತೋರಿಸಿ. ಆಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದು. ಈ ಜನಾಂಗವು ನಿಮ್ಮ ಜನರೇ, ಎಂದು ಜ್ಞಾಪಿಸಿಕೊಳ್ಳುವೆನು,” ಎಂದು ಹೇಳಿದನು.


ನಿಮ್ಮ ದಾಸರಾದ ಅಬ್ರಹಾಮ್, ಇಸಾಕ್, ಯಾಕೋಬರನ್ನು ಜ್ಞಾಪಕಮಾಡಿಕೊಳ್ಳಿರಿ. ಈ ಜನರ ಕಾಠಿಣ್ಯದ ಮೇಲೆಯೂ, ಅವರ ದುಷ್ಟತ್ವದ ಮೇಲೆಯೂ, ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡಿ.


ಆಗ ಸಮುಯೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು, ಯೆಹೋವ ದೇವರಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು, ಇಸ್ರಾಯೇಲರಿಗೋಸ್ಕರ ಯೆಹೋವ ದೇವರಿಗೆ ಮೊರೆಯಿಟ್ಟನು. ಯೆಹೋವ ದೇವರು ಅವನಿಗೆ ಉತ್ತರವನ್ನು ದಯಪಾಲಿಸಿದರು.


ನೀವು ಈಜಿಪ್ಟಿನಿಂದ ನಮ್ಮ ಪಿತೃಗಳನ್ನು ಹೊರಗೆ ತಂದಾಗ ನಿಮ್ಮ ಸೇವಕನಾದ ಮೋಶೆಯ ಮುಖಾಂತರವಾಗಿ ಹೇಳಿದ ಹಾಗೆಯೇ ಸಾರ್ವಭೌಮ ಯೆಹೋವ ದೇವರೇ, ಅವರನ್ನು ನಿಮ್ಮ ಬಾಧ್ಯತೆಯಾಗಿ ಭೂಮಿಯ ಸಮಸ್ತ ಜನರೊಳಗಿಂದ ಪ್ರತ್ಯೇಕಿಸಿರಿ,” ಎಂದನು.


ದೇವರು ತಮ್ಮ ಬಂಡೆ ಎಂದೂ ಮಹೋನ್ನತರಾದ ದೇವರು ತಮ್ಮ ವಿಮೋಚಕರೆಂದೂ ಜ್ಞಾಪಕ ಮಾಡಿಕೊಳ್ಳುತ್ತಿದ್ದರು.


ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಮೋಶೆಯೂ ಸಮುಯೇಲನೂ ನನ್ನ ಮುಂದೆ ನಿಂತರೂ, ನನ್ನ ಮನಸ್ಸು ಈ ಜನರ ಮೇಲೆ ಇರುವುದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿಬಿಡು. ಅವರು ಹೋಗಲಿ.


ಯೆಹೋವ ದೇವರೇ, ಕಟಾಕ್ಷಿಸಿ: ನೀವು ಇದನ್ನು ಯಾರಿಗೆ ಮಾಡಿದಿರೋ ಯೋಚಿಸಿರಿ. ಸ್ತ್ರೀಯರು ತಮ್ಮ ಫಲವಾದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಮತ್ತು ಪ್ರವಾದಿಯು ಕರ್ತದೇವರ ಪರಿಶುದ್ಧ ಸ್ಥಳದಲ್ಲಿ ಹತರಾಗಬೇಕೋ?


ಆಗ ಯೆಹೋವ ದೇವರು, “ಎದ್ದು ಇಲ್ಲಿಂದ ಬೇಗ ಇಳಿದು ಹೋಗು. ಏಕೆಂದರೆ ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿನ್ನ ಜನರು ಕೆಟ್ಟು ಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡಿದ್ದಾರೆ,” ಎಂದು ನನಗೆ ಹೇಳಿದರು.


ನಿಮ್ಮ ಜನರನ್ನು ರಕ್ಷಿಸಿರಿ; ನಿಮ್ಮ ವಾರಸುದಾರರನ್ನು ಆಶೀರ್ವದಿಸಿರಿ; ನೀವು ಅವರ ಕುರುಬ ಆಗಿದ್ದು; ಅವರನ್ನು ಯಾವಾಗಲೂ ಮುನ್ನಡೆಸಿರಿ.


ದೇವರೇ ನನ್ನನ್ನು ಕರುಣಿಸಿರಿ, ನನ್ನನ್ನು ಕರುಣಿಸಿರಿ. ನನ್ನ ಪ್ರಾಣವು ನಿಮ್ಮನ್ನು ಆಶ್ರಯಿಸಿಕೊಂಡಿದೆ; ಆಪತ್ತುಗಳು ದಾಟುವವರೆಗೂ ನಿಮ್ಮ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು