ಧರ್ಮೋಪದೇಶಕಾಂಡ 9:3 - ಕನ್ನಡ ಸಮಕಾಲಿಕ ಅನುವಾದ3 ಹೀಗಿರುವುದರಿಂದ ನೀವು ಈ ಹೊತ್ತು ತಿಳಿದುಕೊಳ್ಳತಕ್ಕದ್ದೇನೆಂದರೆ, ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡುವರು. ದೇವರು ಅವರನ್ನು ನಿಮ್ಮ ಮುಂದೆ ಸೋಲಿಸುವರು. ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನೀವು ಅವರನ್ನು ಸ್ವಾಧೀನಪಡಿಸಿಕೊಂಡು ಅವರನ್ನು ಬೇಗ ತೆಗೆದುಹಾಕುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ, ಬೇಗನೆ ನಾಶಮಾಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ತಾವೇ, ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾರೆಂದು ಈಗ ತಿಳಿದುಕೊಳ್ಳಿ. ಅವರೇ ಆ ವಿರೋಧಿಗಳನ್ನು ನಾಶಮಾಡುವರು; ನಿಮ್ಮ ಮುಂದೆ ಆ ವಿರೋಧಿಗಳು ಸೋತುಹೋಗುವಂತೆ ಮಾಡುವರು. ಸರ್ವೇಶ್ವರ ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ ಬೇಗನೆ ನಾಶಮಾಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆದದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶ ಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ ಬೇಗನೆ ನಾಶಮಾಡುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನದಿಯನ್ನು ದಾಟುತ್ತಾನೆಂಬುದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. ಆತನು ದಹಿಸುವ ಬೆಂಕಿಯಂತಿದ್ದಾನೆ. ಆತನು ಆ ಜನಾಂಗಗಳನ್ನು ಬೇಗನೆ ನಾಶಪಡಿಸುವನು; ನಿಮ್ಮ ಎದುರಿನಲ್ಲಿ ಅವರು ಬಿದ್ದುಹೋಗುವಂತೆ ಮಾಡುವನು. ಇದು ನೆರವೇರುವುದಾಗಿ ಯೆಹೋವನೇ ನಿಮಗೆ ವಾಗ್ದಾನ ಮಾಡಿದ್ದಾನೆ. ಅಧ್ಯಾಯವನ್ನು ನೋಡಿ |