Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:5 - ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ನೀತಿಗೋಸ್ಕರವೂ, ನಿಮ್ಮ ಹೃದಯದ ಯಥಾರ್ಥತೆಗೋಸ್ಕರವೂ ನೀವು ಅವರ ದೇಶವನ್ನು ಸ್ವತಂತ್ರಿಸಿಕೊಳ್ಳುವುದಕ್ಕೆ ಬರುವುದಿಲ್ಲ. ಆ ಜನಾಂಗಗಳ ಕೆಟ್ಟತನಕ್ಕೋಸ್ಕರವೂ, ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿಮ್ಮ ಪುಣ್ಯವೇ ಆಗಲಿ ನಿಮ್ಮ ಸುಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವು ಉತ್ತಮ ರೀತಿಯಲ್ಲಿ ಜೀವಿಸುವಿರಿ ಎಂದು ದೇವರು ನಿಮಗೆ ಆ ದೇಶವನ್ನು ಕೊಡುವುದಿಲ್ಲ. ಅವರು ಕೆಟ್ಟದ್ದಾಗಿ ಜೀವಿಸುತ್ತಿರುವುದರಿಂದ ದೇವರು ಅವರನ್ನು ಹೊರಡಿಸಿ ನೀವು ಆ ದೇಶವನ್ನು ಅನುಭವಿಸುವಂತೆ ಮಾಡಿದನು; ಆತನು ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಟ್ಟಿರುವ ವಾಗ್ದಾನಗಳನ್ನು ನೆರವೇರಿಸುವುದಕ್ಕಾಗಿ ನಿಮಗೆ ಆ ದೇಶವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:5
26 ತಿಳಿವುಗಳ ಹೋಲಿಕೆ  

ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು.


ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವಾಗುವುದು.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ತರುವಾಯ ನಿನ್ನ ಸಂತತಿಗೂ ಶಾಶ್ವತವಾದ ಸ್ವತ್ತನ್ನಾಗಿ ಕೊಟ್ಟು, ನಾನು ಅವರಿಗೆ ದೇವರಾಗಿರುವೆನು,” ಎಂದರು.


ದೇವರು ಅವನಿಗೆ, “ಈ ದೇಶವನ್ನು ಸೊತ್ತಾಗಿ ನಿನಗೆ ಕೊಡಲು, ಕಸ್ದೀಯರ ಊರ್ ಎಂಬ ಪ್ರದೇಶದಿಂದ ನಿನ್ನನ್ನು ಹೊರಗೆ ತಂದ ಯೆಹೋವ ದೇವರು ನಾನೇ,” ಎಂದು ಹೇಳಿದರು.


ಏಕೆಂದರೆ ನೀನು ಕಾಣುವ ದೇಶವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.


ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ, ಆ ಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.


ಆ ನಿಮ್ಮ ಸೇವಕರಾದ ಅಬ್ರಹಾಮನನ್ನೂ, ಇಸಾಕನನ್ನೂ, ಇಸ್ರಾಯೇಲನನ್ನೂ ಜ್ಞಾಪಕಮಾಡಿಕೊಳ್ಳಿರಿ, ಯಾರಿಗೆ ನೀವು ಆಣೆಯಿಟ್ಟು ಪ್ರಮಾಣಮಾಡಿ: ‘ಆಕಾಶದ ನಕ್ಷತ್ರಗಳ ಹಾಗೆ ನಿನ್ನ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯವರಿಗೆ ಕೊಡುವೆನು ಮತ್ತು ಅವರು ನಿತ್ಯವಾಗಿ ಸ್ವಾಧೀನವಾಗಿಟ್ಟುಕೊಳ್ಳುವರು’ ಎಂದು ಮಾತುಕೊಡಲಿಲ್ಲವೆ?” ಎಂದನು.


ಇದಲ್ಲದೆ ಯೆಹೋವ ದೇವರು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರೂ, ಇಸಾಕನ ದೇವರೂ ಆದ ಯೆಹೋವ ದೇವರು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ನಾನು ನಿಮಗೆ ಹೇಳುವುದೇನೆಂದರೆ, ದೇವರು ನಂಬಿಗಸ್ತರು ಎಂದು ತೋರಿಸುವುದಕ್ಕಾಗಿ ಕ್ರಿಸ್ತ ಯೇಸು ಯೆಹೂದ್ಯರಿಗೆ ಸೇವಕರಾಗಿ ಬಂದರು. ಹೀಗೆ ದೇವರು ಪಿತೃಗಳಿಗೆ ಕೊಟ್ಟ ವಾಗ್ದಾನಗಳನ್ನು ದೃಢಪಡಿಸಿದರು.


ಸುವಾರ್ತೆಯ ಪ್ರಕಾರ ಇಸ್ರಾಯೇಲರು ಈಗ ನಿಮ್ಮ ನಿಮಿತ್ತ ಶತ್ರುಗಳು. ಆದರೆ ದೇವರ ಆಯ್ಕೆಯ ದೃಷ್ಟಿಯಲ್ಲಿ ನೋಡುವಾಗ ಮೂಲಪಿತೃಗಳ ನಿಮಿತ್ತದಿಂದ ಅವರು ಪ್ರೀತಿಹೊಂದಿದವರು.


ನೀವು ಪ್ರವಾದಿಗಳ ಮತ್ತು ನಿಮ್ಮ ಪಿತೃಗಳೊಂದಿಗೆ ದೇವರು ಮಾಡಿಕೊಂಡ ಒಡಂಬಡಿಕೆಯ ಮಕ್ಕಳಾಗಿದ್ದೀರಿ. ಏಕೆಂದರೆ ದೇವರು, ‘ನಿನ್ನ ಸಂತತಿಯ ಮುಖಾಂತರವಾಗಿ ಭೂಲೋಕದ ಎಲ್ಲಾ ಕುಟುಂಬಗಳಿಗೆ ಆಶೀರ್ವಾದವುಂಟಾಗುವುದು,’ ಎಂದು ಅಬ್ರಹಾಮನಿಗೆ ಹೇಳಿದರು.


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ದೇವರು ಆ ಬಯಲುಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ, ಲೋಟನು ವಾಸವಾಗಿದ್ದ ಪಟ್ಟಣಗಳನ್ನು ನಾಶಮಾಡಿದರು. ಆದರೆ ಅಬ್ರಹಾಮನನ್ನು ಜ್ಞಾಪಕಮಾಡಿಕೊಂಡು, ಲೋಟನನ್ನು ಹೊರಗೆ ಕಳುಹಿಸಿ ಪಾರು ಮಾಡಿದರು.


ದೇಶವೂ ಅಶುದ್ಧವಾಗಿದೆ. ಆದ್ದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು. ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವುದು.


ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಯೆಹೋವ ದೇವರಿಗೆ ಅಸಹ್ಯವಾದ ಅನೇಕ ಸಂಗತಿಗಳನ್ನು ಮಾಡುತ್ತಾರೆ. ಅಂದರೆ, ಅವರು ತಮ್ಮ ಗಂಡು ಮಕ್ಕಳನ್ನು, ಹೆಣ್ಣು ಮಕ್ಕಳನ್ನು ತಮ್ಮ ದೇವರುಗಳಿಗೆ ಬಲಿಯಾಗಿ ಬೆಂಕಿಯಲ್ಲಿ ಸುಡುತ್ತಾರೆ. ಆದ್ದರಿಂದ ನೀವು ನಿಮ್ಮ ಯೆಹೋವ ದೇವರನ್ನು ಆ ರೀತಿಯಲ್ಲಿ ಆರಾಧಿಸಬಾರದು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ, ಆ ಜನಾಂಗಗಳು ಮಾಡುವ ಅಸಹ್ಯ ಕಾರ್ಯಗಳನ್ನು ನೀವು ಕಲಿಯಬಾರದು.


ಇಲ್ಲವಾದರೆ ಅವರು ತಮ್ಮ ದೇವರುಗಳನ್ನು ಆರಾಧಿಸುವಾಗ ಮಾಡಿದ ಎಲ್ಲಾ ಅಸಹ್ಯಕರವಾದ ಆಚಾರಗಳನ್ನು ನಿಮಗೆ ಕಲಿಸಿಕೊಡಬಹುದು ಮತ್ತು ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ದ್ರೋಹಿಗಳಾಗಬಹುದು.


“ಆದ್ದರಿಂದ ನೀನು ಇಸ್ರಾಯೇಲರ ಮನೆತನದವರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡುತ್ತಿಲ್ಲ. ಆದರೆ ನೀವು ಇತರ ಜನಾಂಗಗಳ ನಡುವೆ ಅಪವಿತ್ರಪಡಿಸಿದ ನನ್ನ ಪರಿಶುದ್ಧ ನಾಮಕ್ಕಾಗಿ ಮಾಡುತ್ತೇನೆ.


ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗಗಳಿಗೆ ನಾಚಿಕೆಪಟ್ಟು ಲಜ್ಜೆಹೊಂದಿರಿ.


ಆಗ ನಾಲ್ಕನೆಯ ಸಂತಾನದವರು ಇಲ್ಲಿಗೆ ತಿರುಗಿ ಬರುವರು. ಏಕೆಂದರೆ ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ,” ಎಂದು ಹೇಳಿದರು.


“ ‘ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು. ಏಕೆಂದರೆ ನಿಮ್ಮ ಮುಂದೆಯೇ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಿಂದ ಹೊಲೆಯಾಗಿವೆ.


ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ಹೋಗಿ ಯೆಹೋವ ದೇವರಾದ ನಾನು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ,” ಎಂದು ಹೇಳಿದರು.


ಏಕೆಂದರೆ ಇಂಥವುಗಳನ್ನು ಮಾಡುವವರೆಲ್ಲಾ ಯೆಹೋವ ದೇವರಿಗೆ ಅಸಹ್ಯರಾಗಿದ್ದಾರೆ. ಈ ಅಸಹ್ಯಗಳ ನಿಮಿತ್ತವೇ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರದೂಡಿಸಿಬಿಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು