Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:7 - ಕನ್ನಡ ಸಮಕಾಲಿಕ ಅನುವಾದ

7 ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ. ಮರೆಯಬೇಡಿರಿ. ನೀವು ಈಜಿಪ್ಟ್ ದೇಶದಿಂದ ಹೊರಟ ದಿವಸ ಮೊದಲ್ಗೊಂಡು ಈ ಸ್ಥಳಕ್ಕೆ ಬರುವವರೆಗೆ ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ಕೋಪ ಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿ. ಅದನ್ನು ಮರೆಯಬೇಡಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಸರ್ವೇಶ್ವರನ ಆಜ್ಞೆಗಳನ್ನು ಧಿಕ್ಕರಿಸುತ್ತಾ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನೀವು ಅರಣ್ಯದಲ್ಲಿ ಪ್ರಯಾಣ ಮಾಡುತ್ತಿದ್ದಾಗ ನಿಮ್ಮ ದೇವರಾದ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸಿದ್ದನ್ನು ಮರೆಯಬೇಡಿರಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟುಬಂದಂದಿನಿಂದ ಈ ದಿನದ ತನಕವೂ ಆತನ ಮಾತನ್ನು ಅನುಸರಿಸಲು ನಿರಾಕರಿಸಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:7
33 ತಿಳಿವುಗಳ ಹೋಲಿಕೆ  

ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ, “ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಈಜಿಪ್ಟ್ ದೇಶದಿಂದ ಏಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ. ನಾವು ಈ ನಿಸ್ಸಾರವಾದ ರೊಟ್ಟಿಯನ್ನು ತಿಂದು ನಮಗೆ ಬೇಸರವಾಗಿದೆ,” ಎಂದರು.


ಆಗ ಇಸ್ರಾಯೇಲರ ಸಭೆಯೆಲ್ಲಾ ಮರುಭೂಮಿಯಲ್ಲಿ ಮೋಶೆ ಮತ್ತು ಆರೋನರ ವಿರೋಧವಾಗಿ ಗೊಣಗುಟ್ಟಿದರು.


ಅವರು ಮೋಶೆಗೆ, “ಈಜಿಪ್ಟಿನಲ್ಲಿ ಸಮಾಧಿಗಳು ಇಲ್ಲದ ಕಾರಣ ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಕರೆದುಕೊಂಡು ಬಂದೆಯೋ? ಏಕೆ ನೀನು ಈ ಪ್ರಕಾರ ನಮಗೆ ಮಾಡಿ, ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆ?


ಆ ಮಹಿಳೆಯರು ಇಸ್ರಾಯೇಲರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು. ಇವರು ತಿಂದು ಅವರ ದೇವರುಗಳಿಗೆ ಅಡ್ಡಬಿದ್ದರು.


ಅವರೊಳಗಿದ್ದ ಮಿಶ್ರ ಗುಂಪಿನ ಜನರು ಮಾಂಸಕ್ಕಾಗಿ ದುರಾಶೆಪಟ್ಟರು. ಇಸ್ರಾಯೇಲರು ಸಹ ತಿರುಗಿ ಅಳುತ್ತಾ, “ನಮಗೆ ಮಾಂಸವನ್ನು ತಿನ್ನುವುದಕ್ಕೆ ಕೊಡುವವರು ಯಾರು?


ಆದಕಾರಣ ಸುನ್ನತಿಮಾಡಿಸಿಕೊಂಡಿದ್ದೇವೆ ಎಂದು ತಮ್ಮ ಬಗ್ಗೆ ಹೇಳಿಕೊಂಡವರು, ಹುಟ್ಟಿದಂದಿನಿಂದ ಯೆಹೂದ್ಯರಲ್ಲದವರಾದ ನಿಮಗೆ ಸುನ್ನತಿಮಾಡಿಸಿಕೊಳ್ಳದವರು ಎಂದು ಹೇಳಿದ್ದನು ನೆನಪುಮಾಡಿಕೊಳ್ಳಿ. ಈ ಸುನ್ನತಿಯು ಮನುಷ್ಯರಿಂದಾದದ್ದಷ್ಟೇ.


ನಾನಾದರೋ ಅಪೊಸ್ತಲರಲ್ಲಿ ಕನಿಷ್ಠನು, ಅಪೊಸ್ತಲನೆನಿಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ, ಏಕೆಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿದೆನು.


ಆಮೇಲೆ ನೀವು ನಿಮ್ಮ ನಿಮ್ಮ ದುರ್ಮಾರ್ಗಗಳನ್ನೂ ದುರಾಚಾರಗಳನ್ನೂ ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.


ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು, ನೀವು ಯಾವ ಸಂಗತಿಗಳಿಂದ ಅಶುದ್ಧವಾಗಿದ್ದೀರೋ, ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕ ಮಾಡಿಕೊಳ್ಳುವಿರಿ. ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿಯಲ್ಲಿಯೇ ನೀವು ಅಸಹ್ಯರಾಗುವಿರಿ.


ಏಕೆಂದರೆ ನಿಮ್ಮ ದ್ರೋಹವನ್ನೂ, ನಿಮ್ಮ ಹಟಮಾರಿತನವನ್ನೂ ನಾನು ಬಲ್ಲೆನು. ಈ ಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರುವಾಗಲೇ ಯೆಹೋವ ದೇವರಿಗೆ ದ್ರೋಹ ಮಾಡಿದವರಾದಿರಿ. ನಾನು ಸತ್ತಮೇಲೆ ಇನ್ನೇನಾಗುವುದು?


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ತಗ್ಗಿಸಿ, ನೀವು ದೇವರ ಆಜ್ಞೆಗಳನ್ನು ಕಾಪಾಡುವಿರೋ ಇಲ್ಲವೋ ಎಂದು ನಿಮ್ಮ ಹೃದಯವನ್ನು ಪರೀಕ್ಷಿಸುವುದಕ್ಕೆ ನಿಮ್ಮನ್ನು ನಡೆಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಿರಿ.


ಆದಕಾರಣ ಜನರು ಮೋಶೆಯ ಸಂಗಡ ವಿವಾದ ಮಾಡಿ, “ನಮಗೆ ಕುಡಿಯುವುದಕ್ಕೆ ನೀರು ಕೊಡು,” ಎಂದರು. ಮೋಶೆಯು ಅವರಿಗೆ, “ಏಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಯೆಹೋವ ದೇವರನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.


ಫರೋಹನು ಸಮೀಪಕ್ಕೆ ಬರುವುದನ್ನು ಇಸ್ರಾಯೇಲರು ಕಣ್ಣೆತ್ತಿ ನೋಡಿದರು. ಈಜಿಪ್ಟಿನವರು ಅವರ ಹಿಂದೆ ಬರುತ್ತಿರುವುದನ್ನು ಕಂಡು ಇಸ್ರಾಯೇಲರು ಬಹಳ ಭಯಪಟ್ಟು ಯೆಹೋವ ದೇವರಿಗೆ ಮೊರೆಯಿಟ್ಟರು.


ಅವನ ವಿಷಯದಲ್ಲಿ ಜಾಗ್ರತೆಯಾಗಿದ್ದು, ಅವನ ಮಾತಿಗೆ ವಿಧೇಯರಾಗಿರಿ. ಅವನಿಗೆ ಕೋಪವನ್ನೆಬ್ಬಿಸಬೇಡಿರಿ. ಏಕೆಂದರೆ ನನ್ನ ಹೆಸರು ಅವನಲ್ಲಿ ಇರುವುದರಿಂದ ಅವನು ನಿಮ್ಮ ದ್ರೋಹಗಳನ್ನು ಮನ್ನಿಸುವುದಿಲ್ಲ.


ಏಕೆಂದರೆ ನನ್ನ ಮಹಿಮೆಯನ್ನೂ, ಈಜಿಪ್ಟ್ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ ನಾನು ಮಾಡಿದ ಸೂಚಕಕಾರ್ಯಗಳನ್ನೂ ನೋಡಿದ ಈ ಸಕಲ ಜನರು, ನನ್ನನ್ನು ಈಗ ಹತ್ತು ಸಾರಿ ಪರೀಕ್ಷಿಸಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,


ಯೆಹೋವ ದೇವರು ಮೋಶೆಗೆ, “ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಇಟ್ಟುಕೊಳ್ಳುವುದಕ್ಕೆ ಒಡಂಬಡಿಕೆಯ ಮಂಜೂಷದ ಮುಂದೆ ತಿರುಗಿ ಇಡು. ಗೊಣಗುಟ್ಟುವುದನ್ನು ನೀನು ಸಂಪೂರ್ಣವಾಗಿ ತೆಗೆದುಬಿಡಬೇಕು,” ಎಂದರು.


ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ತೆಗೆದುಹಾಕಿದಾಗ, “ಯೆಹೋವ ದೇವರು ನಮ್ಮನ್ನು ಈ ದೇಶವನ್ನು ಸ್ವಾಧೀನಪಡಿಸಲು ಕರೆದುಕೊಂಡು ಬಂದಿದ್ದು ನಮ್ಮ ನೀತಿಯ ನಿಮಿತ್ತವೇ,” ಎಂದು ನೀವು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳಬಾರದು. ಆ ಜನಾಂಗಗಳ ಕೆಟ್ಟತನದ ನಿಮಿತ್ತವೇ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.


ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದೀರಿ.


ನೀನು ಕೇಳಿಲ್ಲ, ತಿಳಿದೂ ಇಲ್ಲ. ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ. ಏಕೆಂದರೆ ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ನೀನು ದ್ರೋಹಿ ಎಂದೂ ನಾನು ತಿಳಿದುಕೊಂಡಿದ್ದೇನೆ.


ನನ್ನ ಮಾತುಗಳನ್ನು ಕೇಳಲೊಲ್ಲದ ತಮ್ಮ ಪಿತೃಗಳ ಅಕ್ರಮಗಳಿಗೆ ತಿರುಗಿಕೊಂಡಿದ್ದಾರೆ. ಬೇರೆ ದೇವರುಗಳನ್ನು ಸೇವಿಸುವುದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ. ಇಸ್ರಾಯೇಲಿನ ವಂಶದವರೂ ಯೆಹೂದದ ವಂಶದವರೂ ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಗಳನ್ನು ಮೀರಿದ್ದಾರೆ.


“ಏಕೆಂದರೆ ಇಸ್ರಾಯೇಲರೂ, ಯೆಹೂದದ ಮಕ್ಕಳೂ ತಮ್ಮ ಚಿಕ್ಕಂದಿನಿಂದ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾತ್ರ ಮಾಡಿದ್ದಾರೆ. ಇಸ್ರಾಯೇಲರೂ ತಮ್ಮ ಕೈಕೆಲಸಗಳಿಂದ ನನಗೆ ಕೋಪೋದ್ರೇಕವನ್ನೂ ಎಬ್ಬಿಸಿದ್ದಾರೆ, ಎಂದು ಯೆಹೋವ ದೇವರು ಹೇಳುತ್ತಾರೆ.


“ ‘ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ಕಣ್ಣಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ. ಅವರು ಈಜಿಪ್ಟಿನ ವಿಗ್ರಹಗಳನ್ನು ಬಿಡಲಿಲ್ಲ. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಈಜಿಪ್ಟ್ ದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.


ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡಿದಂಥ, ನಿಮ್ಮ ಪಿತೃಗಳು ಕೆಟ್ಟತನಗಳನ್ನೂ, ಯೆಹೂದದ ಅರಸರ ಕೆಟ್ಟತನಗಳನ್ನೂ, ಅವರ ಹೆಂಡತಿಯರ ಕೆಟ್ಟತನಗಳನ್ನೂ, ನಿಮ್ಮ ಸ್ವಂತ ಕೆಟ್ಟತನಗಳನ್ನೂ, ನಿಮ್ಮ ಹೆಂಡತಿಯರ ಕೆಟ್ಟತನಗಳನ್ನೂ ಮರೆತು ಬಿಟ್ಟಿದ್ದೀರೋ?


“ ‘ಆದರೆ ಇಸ್ರಾಯೇಲ್ ಜನರು ಮರುಭೂಮಿಯಲ್ಲಿಯೂ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ, ನನ್ನ ಅಪ್ಪಣೆಗಳನ್ನು ತಿರಸ್ಕರಿಸಿದರು. ಅವುಗಳಿಗೆ ವಿಧೇಯನಾಗುವವನು ಅವುಗಳಿಂದ ಜೀವಿಸುವನು. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿದು, ಅವರನ್ನು ಮರುಭೂಮಿಯಲ್ಲಿ ನಾಶಮಾಡುವೆನೆಂದು ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು