ನಹೂಮ 1:3 - ಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರು ಕೋಪಗೊಳ್ಳುವುದರಲ್ಲಿ ಶಾಂತಿಸ್ವರೂಪರು. ಆದರೂ ಶಕ್ತಿಯಲ್ಲಿ ಮಹತ್ತಾದವರು. ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ಶಿಕ್ಷಿಸದೆ ಇರರು. ಯೆಹೋವ ದೇವರ ಮಾರ್ಗವು ಸುಳಿಗಾಳಿಯಲ್ಲಿಯೂ, ಬಿರುಗಾಳಿಯಲ್ಲಿಯೂ ಇದೆ. ಮೇಘಗಳು ಅವರ ಕಾಲುಗಳ ಧೂಳೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರ ಶಾಂತಿಸ್ವರೂಪಿ; ಆದರೆ ಆತನ ಶಕ್ತಿ ಅಪಾರ, ಅಪರಾಧಿಗಳನ್ನು ಆತ ಶಿಕ್ಷಿಸದೆ ಬಿಡ; ಗಾಳಿಬಿರುಗಾಳಿಗಳ ನಡುವೆ ಆತನ ಹಾದಿ; ಮೋಡಗಳು ಆತನ ನಡೆಯಿಂದೇಳುವ ಧೂಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ದೂಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋವನು ತಾಳ್ಮೆಯುಳ್ಳ ದೇವರು ಮತ್ತು ಬಲಿಷ್ಠನಾದ ದೇವರಾಗಿದ್ದಾನೆ! ಪಾಪಿಗಳನ್ನು ಆತನು ಶಿಕ್ಷಿಸುವನು. ಆತನಿಂದ ಅವರು ತಪ್ಪಿಸಿಕೊಳ್ಳಲಾರರು. ದುಷ್ಟಜನರನ್ನು ಶಿಕ್ಷಿಸಲು ಯೆಹೋವನು ಬರುವನು. ಆತನು ತನ್ನ ಸಾಮರ್ಥ್ಯವನ್ನು ಬಿರುಗಾಳಿಯಲ್ಲಿಯೂ ಸುಂಟರಗಾಳಿಯಲ್ಲಿಯೂ ತೋರ್ಪಡಿಸುವನು. ಮನುಷ್ಯನು ನೆಲದ ಧೂಳಿನ ಮೇಲೆ ನಡೆಯುತ್ತಾರೆ, ಯೆಹೋವನಾದರೋ ಮೋಡಗಳ ಮೇಲೆ ನಡೆಯುತ್ತಾನೆ. ಅಧ್ಯಾಯವನ್ನು ನೋಡಿ |
ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.