ನಹೂಮ 1:4 - ಕನ್ನಡ ಸಮಕಾಲಿಕ ಅನುವಾದ4 ಅವರು ಸಮುದ್ರವನ್ನು ಗದರಿಸಿ, ಅದನ್ನು ಒಣಗುವಂತೆ ಮಾಡುತ್ತಾರೆ. ಸಕಲನದಿಗಳನ್ನು ಬತ್ತಿಸುತ್ತಾರೆ. ಬಾಷಾನು, ಕರ್ಮೆಲು ಬಾಡಿ ಹೋಗುತ್ತವೆ ಮತ್ತು ಲೆಬನೋನಿನ ಹೂವು ಬಾಡಿ ಹೋಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಮತ್ತು ಕರ್ಮೆಲ್ ಹೊಲಗಳೂ ಕಂದುತ್ತವೆ. ಲೆಬನೋನಿನ ಚಿಗುರು ಬಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆತನ ಗದರಿಕೆಯೊಂದಕೆ ಬತ್ತಿಹೋಗುತ್ತದೆ ಸಮುದ್ರ; ನಂದಿಹೋಗುತ್ತವೆ ನದಿಸರೋವರ. ಕಂದುತ್ತವೆ ಕಾರ್ಮೆಲ್ ಗುಡ್ಡಗಳು ಬಾಡುತ್ತವೆ ಬಾಷಾನಿನ ಹೊಲಗಳು ಮುದುಡುತ್ತವೆ ಲೆಬನೋನಿನ ಚಿಗುರುಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಕರ್ಮೆಲೂ ಕಂದುತ್ತವೆ, ಲೆಬನೋನಿನ ಚಿಗುರು ಬಾಡುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನು ಸಮುದ್ರಕ್ಕೆ ಗದರಿಸಿದಾಗ ಅದು ಒಣಗಿಹೋಗುವುದು. ಆತನು ಎಲ್ಲಾ ನದಿಗಳನ್ನು ಬತ್ತಿಸಿಬಿಡುವನು. ಕರ್ಮೆಲ್ ಮತ್ತು ಬಾಷಾನಿನ ಫಲವತ್ತಾದ ನೆಲಗಳು ಒಣಗಿ ಪಾಳುಬೀಳುವವು. ಲೆಬನೋನಿನ ಪುಷ್ಪವು ಬಾಡಿಹೋಗುವದು. ಅಧ್ಯಾಯವನ್ನು ನೋಡಿ |