Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:1 - ಕನ್ನಡ ಸಮಕಾಲಿಕ ಅನುವಾದ

1 ನಿನೆವೆಯೇ, ಮುತ್ತಿಗೆ ಹಾಕುವವನು ನಿನಗೆ ವಿರೋಧವಾಗಿ ಹೊರಟಿದ್ದಾನೆ, ಕೋಟೆಯನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ; ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಿನವೆಯೇ, ನಿನ್ನನ್ನು ಚದರಿಸುವವನು ನಿನಗೆ ಮುಖಾಮುಖಿಯಾಗಿ ಬಂದಿದ್ದಾನೆ; ಪೌಳಿಗೋಡೆಯನ್ನು ರಕ್ಷಿಸಲು ಸಿದ್ಧನಾಗು. ದಾರಿಯ ಮೇಲೆ ಕಣ್ಣಿಡು, ನಿನ್ನ ಸೊಂಟವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಚೆನ್ನಾಗಿ ದೃಢಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಿನೆವೆಯೇ, ನಿನಗೆದುರಾಗಿ ನಿಂತಿಹನು, ನಿನ್ನನ್ನು ಚದುರಿಸುವವನು! ಕಾವಲಿಡು ಕೋಟೆಯ ಸುತ್ತಲು ಪಹರೆಯಿಡು ದಾರಿ ಕಾಯಲು; ಅಣಿಯಾಗಲಿ ನಿನ್ನ ಸೈನ್ಯವಿಡೀ, ನಡುಕಟ್ಟಿ ನಿಲ್ಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 [ನಿನೆವೆಯೇ,] ಚದರಿಸುವವನು ನಿನಗೆ ಮುಖಾಮುಖಿಯಾಗಿ ಬಂದಿದ್ದಾನೆ; ಪೌಳಿಗೋಡೆಯನ್ನು ಕಾಯಿ, ದಾರಿಯ ಮೇಲೆ ಕಣ್ಣಿಡು, ನಿನ್ನ ಸೊಂಟವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಚೆನ್ನಾಗಿ ದೃಢಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ವೈರಿಯು ನಿನ್ನ ಮೇಲೆ ಬರುವನು. ಆದ್ದರಿಂದ ನಿನ್ನ ಪಟ್ಟಣದ ಬುರುಜುಗಳನ್ನು ಕಾಯಿ. ಮಾರ್ಗದ ಮೇಲೆ ಕಣ್ಣಿಡು. ಯುದ್ಧಕ್ಕೆ ತಯಾರಾಗು. ರಣರಂಗಕ್ಕೆ ಹೋಗಲು ಸಿದ್ಧನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:1
14 ತಿಳಿವುಗಳ ಹೋಲಿಕೆ  

ನೀವು ಹೋಗಿ ಯುದ್ಧದಲ್ಲಿ ಧೈರ್ಯದಿಂದ ಹೋರಾಡಿದರೂ ದೇವರು ಶತ್ರುವಿನ ಮುಂದೆ ನಿನ್ನನ್ನು ಸೋಲಿಸಿಬಿಡುವರು. ಏಕೆಂದರೆ ಸಹಾಯ ಕೊಡುವುದಕ್ಕೂ, ಬೀಳ ಮಾಡುವುದಕ್ಕೂ ದೇವರಿಗೆ ಶಕ್ತಿ ಉಂಟು,” ಎಂದನು.


ಇಗೋ, ಲೋಕವನ್ನೆಲ್ಲಾ ಹೊಡೆದ ಸುತ್ತಿಗೆಯು ಮುರಿದು ತುಂಡುತುಂಡಾಯಿತು! ಹೇಗೆ ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!


ಆ ಅಧಿಪತಿಗಳು ಕಡುಕೋಪದಿಂದ ಎಡೆಬಿಡದೆ ಜನರನ್ನು ದಂಡಿಸಿ, ನಿಲ್ಲದ ದಬ್ಬಾಳಿಕೆಯಿಂದ ರಾಷ್ಟ್ರಗಳನ್ನು ಅಧೀನಪಡಿಸಿಕೊಂಡಿದ್ದರು.


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


“ದೇವರಾಗಿರುವ ನನಗೆ ಸ್ತೋತ್ರವನ್ನು ಬಲಿಯಾಗಿ ಅರ್ಪಿಸಿರಿ. ಮಹೋನ್ನತನಾಗಿರುವ ನನಗೆ ಹರಕೆಗಳನ್ನು ಸಲ್ಲಿಸಿರಿ.


ಪ್ರಾರ್ಥನೆಯನ್ನು ಕೇಳುವವರೇ, ಎಲ್ಲಾ ಜನರು ನಿಮ್ಮ ಬಳಿಗೆ ಬರುವರು.


ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ ಬಾಧಿಸುವ ಸಕಲ ಜನಾಂಗಗಳು ರಾತ್ರಿಯ ದರ್ಶನದ ಕನಸಿನಂತೆ ಮಾಯವಾಗುವುವು.


ಹಸಿದ ಮನುಷ್ಯನು ಕನಸು ಕಂಡು ಇಗೋ, ಉಣ್ಣುತ್ತೇನೆ ಎಂದುಕೊಂಡಂತಾಗುವುದು. ಆದರೆ ಅವನು ಎಚ್ಚೆತ್ತಾಗ ಪ್ರಾಣ ತುಂಬಿದ ಹಾಗೆಯೂ, ಬಾಯಾರಿದವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತೇನೆ ಎಂದುಕೊಂಡಂತಾಗುವುದು. ಆದರೆ ಅವನು ಎಚ್ಚರವಾದಾಗ ಬಲಹೀನನಾಗಿದ್ದು, ಪ್ರಾಣ ಆಶಿಸುವ ಹಾಗೆಯೇ ಚೀಯೋನ್ ಪರ್ವತಕ್ಕೆ ವಿರೋಧವಾಗಿ ಯುದ್ಧಮಾಡುವ ಎಲ್ಲಾ ಜನಾಂಗಗಳ ಸಮೂಹವಿರುವುದು.


ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಒಳ್ಳೆಯ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವವನ ಪಾದಗಳು ಪರ್ವತಗಳ ಮೇಲೆ ಎಷ್ಟೊಂದು ಅಂದವಾಗಿವೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು