ನಹೂಮ 2:11 - ಕನ್ನಡ ಸಮಕಾಲಿಕ ಅನುವಾದ11 ಸಿಂಹದ ಗವಿಯೂ, ಎಳೆಯ ಸಿಂಹಗಳು ಮೇಯುವ ಸ್ಥಳವೂ ಎಲ್ಲಿ? ಸಿಂಹವೂ, ಸಿಂಹಿಣಿಯೂ, ಸಿಂಹದ ಮರಿಗಳೂ ಭಯವಿಲ್ಲದೆ ನಡೆದಾಡುವ ಸ್ಥಳಗಳೆಲ್ಲಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮೃಗರಾಜರ ಪ್ರಾಯದ ಸಿಂಹಗಳ ಗವಿ ಎಲ್ಲಿ? ಸಿಂಹ, ಸಿಂಹಿಣಿ, ಸಿಂಹದ ಮರಿ ಇವುಗಳು ಯಾರಿಗೂ ಹೆದರದೆ ತಿರುಗುತ್ತಿದ್ದ ಸ್ಥಳವೆಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮೃಗರಾಜನ ಗವಿಯೆಲ್ಲಿ? ಯುವಸಿಂಹಗಳ ಹಕ್ಕೆಯೆಲ್ಲಿ? ಸಿಂಹ ಸಿಂಹಿಣಿಗಳು, ಅವುಗಳ ಮರಿಗಳು ಹೆದರದೆ ತಿರುಗಾಡುತ್ತಿದ್ದ ಎಡೆಯೆಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮೃಗರಾಜರ ಗವಿ, ಪ್ರಾಯದ ಸಿಂಹಗಳ ಹಕ್ಕೆ ಎಲ್ಲಿ? ಸಿಂಹ, ಸಿಂಹಿ, ಸಿಂಹದ ಮರಿ, ಇವುಗಳು ಯಾರಿಗೂ ಹೆದರದೆ ತಿರುಗುತ್ತಿದ್ದ ಸ್ಥಳವೆಲ್ಲಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸಿಂಹದ ಗುಹೆಯಂತಿದ್ದ ನಿನೆವೆಯು ಎಲ್ಲಿ? ಗಂಡು ಹೆಣ್ಣು ಸಿಂಹಗಳು ಅದರೊಳಗೆ ವಾಸಿಸುತ್ತಿದ್ದವು. ಅದರ ಮರಿಗಳಿಗೆ ಭಯವಿಲ್ಲ. ಅಧ್ಯಾಯವನ್ನು ನೋಡಿ |
ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು; ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”
ಯೆಹೋವ ದೇವರು ನನಗೆ ಹೀಗೆ ಹೇಳಿದ್ದಾನೆ: ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ, ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವುದೋ, ಹಾಗೆಯೇ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತಕ್ಕೋಸ್ಕರವೂ, ಅದರ ಗುಡ್ಡಕ್ಕೋಸ್ಕರವೂ ಯುದ್ಧಮಾಡಲು ಇಳಿದು ಬರುವರು.