Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:13 - ಕನ್ನಡ ಸಮಕಾಲಿಕ ಅನುವಾದ

13 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಹೊಗೆಯಾಗಲು ಸುಡುತ್ತೇನೆ. ಖಡ್ಗವು ನಿನ್ನ ಎಳೆಯ ಸಿಂಹಗಳನ್ನು ನುಂಗಿಬಿಡುವುದು. ನಿನಗೆ ಸಿಕ್ಕಿದ ಬೇಟೆಯನ್ನು ಭೂಮಿಯ ಮೇಲಿನಿಂದ ತೆಗೆದುಬಿಡುತ್ತೇನೆ. ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ! ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ಸೀಳಿ ನುಂಗಿ ಬಿಡುವವು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು; ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇಂತೆನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ: “ನಿನಗೆ ವಿರುದ್ಧವಾಗಿದ್ದೇನೆ ನಾನು; ಸುಟ್ಟು ಭಸ್ಮಮಾಡುವೆ ನಿನ್ನ ರಥಗಳನು; ಸಂಹರಿಸಿಬಿಡುವೆನು ನಿನ್ನ ಯುವಸಿಂಹಗಳನು; ನಿನಗೆ ಜಗದಲ್ಲೆಲ್ಲ ಬೇಟೆ ಸಿಗದಂತೆ ಮಾಡುವೆನು; ಯಾರೂ ಕೇಳರು ನಿನ್ನ ರಾಯಭಾರಿಗಳ ಮಾತನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ನುಂಗಿಬಿಡುವದು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು, ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಿನೆವೆಯೇ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಸುಟ್ಟುಹಾಕುತ್ತೇನೆ. ನಿನ್ನ ಎಳೆ ಸಿಂಹಗಳನ್ನು ರಣರಂಗದಲ್ಲಿ ಸಾಯಿಸುತ್ತೇನೆ. ಈ ಭೂಮಿಯ ಮೇಲೆ ಇನ್ನು ಯಾರನ್ನೂ ಭೇಟಿ ಮಾಡದಿರುವೆ. ನಿನ್ನ ಸಂದೇಶವಾಹಕರಿಂದ ಕೆಟ್ಟ ಸಮಾಚಾರವನ್ನು ಜನರು ಇನ್ನು ಎಂದಿಗೂ ಕೇಳರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:13
33 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲಿಂದ ಎತ್ತಿ, ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ, ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ.


ಇಗೋ, ತಗ್ಗಿನ ನಗರಿಯೇ, ಬಯಲಿನ ಬಂಡೆಯಲ್ಲಿ ವಾಸಮಾಡುವವರೇ, “ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರುವರೆಂದು, ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ದೇವರು ಯುದ್ಧಗಳನ್ನು ಭೂಮಿಯ ಅಂತ್ಯದವರೆಗೆ ನಿಲ್ಲಿಸುತ್ತಾರೆ. ಬಿಲ್ಲನ್ನೂ ಭಲ್ಲೆಯನ್ನೂ ಮುರಿದು ಹಾಕಿದ್ದಾರೆ. ರಥಗಳನ್ನು ಬೆಂಕಿಯಿಂದ ಸುಡುತ್ತಾರೆ.


ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿದ್ದೀ, “ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ, ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ, ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಗಡಿಸ್ಥಳಗಳಲ್ಲಿಯೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.


ರಕ್ತಮಯ ಪಟ್ಟಣಕ್ಕೆ ಕಷ್ಟ, ಅದೆಲ್ಲಾ ಸುಳ್ಳಿನಿಂದಲೂ, ಕಳ್ಳತನದಿಂದಲೂ ತುಂಬಿದೆ, ಕೊಳ್ಳೆಯನ್ನೂ ಬಿಡುವುದಿಲ್ಲ.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ, ನಿನಗೆ ವಿರೋಧವಾಗಿದ್ದೇನೆ. ಜನಾಂಗಗಳ ಕಣ್ಣುಗಳ ಮುಂದೆ ನಿಮ್ಮ ಜನರನ್ನು ದಂಡಿಸುವೆನು.


ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ, ಹಿಜ್ಕೀಯನ ಬಳಿಗೆ ತಿರಿಗಿ ದೂತರನ್ನು ಕಳುಹಿಸಿ ಅವರಿಗೆ,


ಯೆಹೋಶುವನು ಯೆಹೋವ ದೇವರ ಅಪ್ಪಣೆಯ ಪ್ರಕಾರವೇ ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯ್ದುಬಿಟ್ಟು, ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು.


ನಿನ್ನ ಕೋಟೆಗಳೆಲ್ಲಾ ಮೊದಲನೆಯ ಮಾಗಿದ ಹಣ್ಣುಳ್ಳ ಅಂಜೂರದ ಗಿಡಗಳ ಹಾಗಿರುವುವು. ಅಲ್ಲಾಡಿಸಿದರೆ ಹಣ್ಣು ತಿನ್ನುವವನ ಬಾಯಿಗೆ ಬೀಳುವುದು.


“ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆಂದು ಹೇಳು, ರೋಷ್, ಮೆಷೆಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಿನಗೆ ನಾನು ವಿರೋಧವಾಗಿದ್ದೇನೆ.


‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ರೋಷ್, ಮೆಷೆಕ್, ತೂಬಲಿಗೆ ಮುಖ್ಯ ರಾಜಕುಮಾರನಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ.


ಅದಕ್ಕೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಸೇಯೀರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.


ಆದ್ದರಿಂದ ಇಗೋ, ನಾನು ನಿನಗೂ ನಿನ್ನ ನದಿಗಳಿಗೂ ವಿರುದ್ಧವಾಗಿದ್ದೇನೆ. ಈಜಿಪ್ಟ್ ದೇಶವನ್ನು ಮಿಗ್ದೋಲಿನಿಂದ ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.


ನೀನು ಮಾತನಾಡಿ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಈಜಿಪ್ಟಿನ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು ಈ ನೈಲ್ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.


ನೀನು ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಸೀದೋನೇ ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧವಾಗುವಾಗ ನಾನೇ ಯೆಹೋವ ದೇವರೆಂದು ತಿಳಿಯುವರು.


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಟೈರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವುದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.


“ಲೋಕವನ್ನೆಲ್ಲಾ ನಾಶಮಾಡುವ ನಾಶಕ ಪರ್ವತವೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ನಿನ್ನ ಮೇಲೆ ನನ್ನ ಕೈಯನ್ನು ಚಾಚಿ, ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ, ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.


“ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ,” ಎಂದು ಸೈನ್ಯಗಳ ದೇವರಾದ ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಿನ್ನ ದಿವಸವೂ, ನಿನ್ನ ಶಿಕ್ಷೆಯ ಕಾಲವೂ ಬಂತು.


ಮನುಷ್ಯರ ಕೈಕೆಲಸವಾದ ಭೂಮಿಯ ಜನರ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ, ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.


ರಬ್ಷಾಕೆಯು ಅವರಿಗೆ, “ನೀವು ಹಿಜ್ಕೀಯನಿಗೆ ಹೀಗೆ ಹೇಳಬೇಕು: “ ‘ಮಹಾರಾಜನಾದ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ಈ ನಿನ್ನ ಭರವಸೆಗೆ ಆಧಾರ ಏನು?


ಅಸ್ಸೀರಿಯದ ಅರಸನು ತನ್ನ ಅತಿ ಪ್ರಮುಖ ಅಧಿಕಾರಿಯನ್ನೂ, ಮುಖ್ಯ ನಾಯಕರನ್ನೂ, ಸೈನ್ಯಾಧಿಕಾರಿಯನ್ನೂ ಲಾಕೀಷಿನಿಂದ ದೊಡ್ಡ ಸೈನ್ಯದೊಂದಿಗೆ ರಬ್ಷಾಕೆ ಎಂಬವನನ್ನೂ ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅಗಸರ ಹೊಲದ ಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಸಮೀಪದಲ್ಲಿ ನಿಂತುಕೊಂಡರು.


ಆಗ ಯೆಹೋವ ದೇವರು ಯೆಹೋಶುವನಿಗೆ, “ಅವರಿಗೆ ಭಯಪಡಬೇಡ, ಏಕೆಂದರೆ ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರೂ ಸಂಹಾರವಾಗುವಂತೆ ಇಸ್ರಾಯೇಲರಿಗೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯ್ದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು,” ಎಂದರು.


“ಈಜಿಪ್ಟಿನಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿಸಿ, ನೋಫಿನಲ್ಲಿಯೂ, ತಹಪನೇಸಿನಲ್ಲಿಯೂ ಪ್ರಕಟಿಸಿ, ‘ನಿಮ್ಮ ಸ್ಥಾನಗಳನ್ನು ತೆಗೆದುಕೊಳ್ಳಿ ಮತ್ತು ಸಿದ್ಧರಾಗಿ, ಏಕೆಂದರೆ ಖಡ್ಗವು ನಿನ್ನ ಸುತ್ತಲೂ ಸಂಹರಿಸುವುದು,’ ಎಂದು ಹೇಳಿರಿ.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಸುಳ್ಳಾಗಿ ಮಾತನಾಡಿದ್ದರಿಂದಲೂ, ಸುಳ್ಳನ್ನು ದರ್ಶಿಸಿದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನು. ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


‘ಇಸ್ರಾಯೇಲ್ ದೇಶಕ್ಕೆ ಹೇಳಬೇಕಾದದ್ದೇನೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರಗೆ ತೆಗೆದು, ನಿನ್ನೊಳಗಿರುವ ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವೆನು.


ಸಿಂಹವು, ತನ್ನ ಮರಿಗಳಿಗೆ, ಸಿಂಹಿಣಿಗಳಿಗೆ, ಕೊರಳು ಹಿಸುಕಿ ಕೊಂದ ಪ್ರಾಣಿಗಳಿಂದ ತನ್ನ ಗುಹೆಯನ್ನು ತುಂಬಿಸುತ್ತಿತ್ತು.


ಅಲ್ಲೇ ಬೆಂಕಿ ನಿನ್ನನ್ನು ತಿನ್ನುವುದು; ಖಡ್ಗವು ನಿನ್ನನ್ನು ಕಡಿದುಬಿಡುವುದು; ಹುಲ್ಲು ಮೇಯುವ ಹುಳ ನಿನ್ನನ್ನು ತಿಂದುಬಿಡುವುದು; ಬಹುಮಂದಿಯಾಗು, ಮಿಡತೆಗಳಂತೆ ಬಹುಮಂದಿಯಾಗು, ಗುಂಪು ಮಿಡತೆಗಳಂತೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು