ನಹೂಮ 3:13 - ಕನ್ನಡ ಸಮಕಾಲಿಕ ಅನುವಾದ13 ಇಗೋ, ನಿನ್ನ ಸೈನ್ಯಗಳನ್ನು ನೋಡು. ಅವರೆಲ್ಲರೂ ಮಹಿಳೆಯರೇ. ನಿನ್ನ ದೇಶದ ಬಾಗಿಲುಗಳು ನಿನ್ನ ಶತ್ರುಗಳಿಗೆ ವಿಶಾಲವಾಗಿ ತೆರೆದಿವೆ. ಬೆಂಕಿ ನಿನ್ನ ಅಗುಳಿಗಳನ್ನು ತಿಂದುಬಿಟ್ಟಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಹಾ! ನಿನ್ನಲ್ಲಿನ ಜನರು ಹೆಣ್ಣಿಗರು; ನಿನ್ನ ದೇಶದ ಬಾಗಿಲುಗಳು ನಿನ್ನ ಶತ್ರುಗಳಿಗೆ ತೆರೆದು ಹಾಕಿವೆ; ಬೆಂಕಿಯು ನಿನ್ನ ಅಗುಳಿಗಳನ್ನು ನುಂಗಿಬಿಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಿನ್ನ ಯೋಧರನ್ನು ನೋಡು; ಅವರೆಲ್ಲ ಹೆಣ್ಣಿಗರು. ನಿನ್ನ ದೇಶದ ದ್ವಾರಗಳು ಶತ್ರುಗಳಿಗೆ ತೆರೆದ ಬಾಗಿಲುಗಳು. ಅದರ ಕಬ್ಬಿಣದ ಅಗುಳಿಗಳು ಬೆಂಕಿಯಿಂದ ಭಸ್ಮವಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಹಾ, ನಿನ್ನಲ್ಲಿನ ಜನರು ಹೆಣ್ಣಿಗರು; ನಿನ್ನ ದೇಶದ ಬಾಗಿಲುಗಳು ನಿನ್ನ ಶತ್ರುಗಳಿಗೆ ತೆರೆದು ಹಾಕಿವೆ; ಬೆಂಕಿಯು ನಿನ್ನ ಅಗುಳಿಗಳನ್ನು ನುಂಗಿಬಿಟ್ಟಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಿನೆವೆಯೇ, ನಿನ್ನ ಜನರೆಲ್ಲಾ ಹೆಂಗಸರಂತೆ, ವೈರಿ ಸೈನಿಕರು ಅವರನ್ನು ಹಿಡಿದುಕೊಳ್ಳಲು ತಯಾರಾಗಿದ್ದಾರೆ. ನಿನ್ನ ದೇಶದ ದ್ವಾರಗಳು, ವೈರಿಗಳು ಪ್ರವೇಶಿಸುವಂತೆ ಅಗಲವಾಗಿ ತೆರೆಯಲ್ಪಟ್ಟಿವೆ. ದ್ವಾರದ ಬಾಗಿಲಿನ ಅಡ್ಡಪಟ್ಟಿಯು ಬೆಂಕಿಯಿಂದ ಸುಟ್ಟಿರುತ್ತದೆ. ಅಧ್ಯಾಯವನ್ನು ನೋಡಿ |