ನಹೂಮ 3:8 - ಕನ್ನಡ ಸಮಕಾಲಿಕ ಅನುವಾದ8 ನೈಲ್ ನದಿಯ ಬಳಿ ನೆಲೆಯಾಗಿದ್ದ ತೆಬೆಸ್ಸಿಗಿಂತ ನೀನು ಒಳ್ಳೆಯವಳೋ? ಅವಳ ಸುತ್ತಲೂ ನೀರಿತ್ತು. ನದಿ ಅವಳ ರಕ್ಷಣೆ, ನೀರು ಅವಳ ಗೋಡೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀನು ನೋ ಆಮೋನ್ ಪಟ್ಟಣಗಿಂತ ಭದ್ರವಾಗಿದ್ದೀಯೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು. ನೀರು ಅದನ್ನು ಸುತ್ತಿಕೊಂಡಿತ್ತು, ಮಹಾ ನದಿಯು ಅದಕ್ಕೆ ಪೌಳಿಗೋಡೆ, ಜಲಾಶಯವು ಅದರ ದುರ್ಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ನೀನು ತೇಬೆಸ್ಸಿಗಿಂತ ಸುಭದ್ರಳೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು. ನೀರು ಅದನ್ನು ಸುತ್ತಿಕೊಂಡಿತ್ತು. ಮಹಾನದಿ ಅದಕ್ಕೆ ಕೋಟೆಯಾಗಿತ್ತು. ಜಲಾಶಯವು ಅದರ ದುರ್ಗವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀನು ನೋ ಆಮೋನಿಗಿಂತ ಭದ್ರವಾಗಿದ್ದೀಯೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು, ನೀರು ಅದನ್ನು ಸುತ್ತಿಕೊಂಡಿತ್ತು, ಮಹಾ ನದಿಯು ಅದಕ್ಕೆ ಪೌಳಿಗೋಡೆ, ಜಲಾಶಯವು ಅದರ ದುರ್ಗ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಿನೆವೆಯೇ, ನೀನು ನೈಲ್ ನದಿಯ ದಡದಲ್ಲಿರುವ ತೆಬೆಸ್ ಗಿಂತಲೂ ಉತ್ತಮಳೋ? ಇಲ್ಲ. ತೆಬೆಸಿನ ಸುತ್ತಲೂ ನೀರು ಇತ್ತು. ಆ ನೀರು ಆಕೆಯನ್ನು ತನ್ನ ವೈರಿಗಳಿಂದ ಕಾಪಾಡಲು ಶಕ್ತವಾಯಿತು. ಆ ನೀರನ್ನು ಆಕೆಯು ಗೋಡೆಯಂತೆ ಉಪಯೋಗಿಸಿದಳು. ಅಧ್ಯಾಯವನ್ನು ನೋಡಿ |