ನೆಹೆಮೀಯ 1:11 - ಕನ್ನಡ ಸಮಕಾಲಿಕ ಅನುವಾದ11 ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನೇ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ, ನಿನ್ನ ನಾಮ ಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಈ ಮನುಷ್ಯನ ದಯೆಗೆ ಪಾತ್ರನಾಗಿ ಸಫಲನಾಗುವಂತೆ ಅನುಗ್ರಹಿಸಬೇಕು” ಎಂದು ಪ್ರಾರ್ಥಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸ್ವಾಮೀ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ ನಿನ್ನ ನಾಮಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಆ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಬೇಕು ಎಂದು ಪ್ರಾರ್ಥಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.” ಅಧ್ಯಾಯವನ್ನು ನೋಡಿ |
ರಾಜವನಪಾಲಕನಾದ ಆಸಾಫನು, ದೇವಾಲಯದ ಕೋಟೆಯ ಬಾಗಿಲುಗಳನ್ನೂ, ಪಟ್ಟಣದ ಪೌಳಿಗೋಡೆಯನ್ನೂ, ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನೂ ಕೊಡಬೇಕಾಗುತ್ತದೆ. ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆನು. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ, ರಾಜನು ಅವುಗಳನ್ನು ನನಗೆ ಕೊಟ್ಟನು.