ನೆಹೆಮೀಯ 1:2 - ಕನ್ನಡ ಸಮಕಾಲಿಕ ಅನುವಾದ2 ಆಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನು ಹಾಗೂ ಬೇರೆ ಕೆಲವು ಜನರು ಯೆಹೂದದಿಂದ ನನ್ನ ಬಳಿಗೆ ಬಂದರು. ಸೆರೆ ಹೋದವರಿಂದ ಉಳಿದಿರುವ ಯೆಹೂದ್ಯರ ಮತ್ತು ಯೆರೂಸಲೇಮಿನ ಸಮಾಚಾರವನ್ನು ನಾನು ಅವರಲ್ಲಿ ವಿಚಾರಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನನ್ನ ಸಹೋದರಲ್ಲಿ ಒಬ್ಬನಾದ ಹನಾನೀಯನೂ, ಬೇರೆ ಕೆಲವರು ಯೆಹೂದ ಜನರೊಂದಿಗೆ, ನನ್ನ ಬಳಿಗೆ ಬಂದರು. ಸೆರೆಯಾಳುಗಳಾಗಿ ಹೋಗಿದ್ದವರಲ್ಲಿ ಕೆಲವು ಯೆಹೂದ್ಯರು ತಪ್ಪಿಸಿಕೊಂಡು ನನ್ನ ಬಳಿಗೆ ಬಂದಾಗ ಯೆರೂಸಲೇಮಿನ ಸಮಾಚಾರವನ್ನು ನಾನು ಅವರ ಹತ್ತಿರ ವಿಚಾರಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನು ಹಾಗೂ ಬೇರೆ ಕೆಲವು ಜನರು ಜುದೇಯದಿಂದ ನನ್ನ ಬಳಿಗೆ ಬಂದರು. ಸೆರೆಹೋದವರಿಂದ ತಪ್ಪಿಸಿಕೊಂಡ ಯೆಹೂದ್ಯರ ಮತ್ತು ಜೆರುಸಲೇಮಿನ ಸಮಾಚಾರವನ್ನು ನಾನು ಅವರಲ್ಲಿ ವಿಚಾರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನೂ ಬೇರೆ ಕೆಲವು ಜನರೂ ಯೆಹೂದದಿಂದ ನನ್ನ ಬಳಿಗೆ ಬಂದರು. ಸೆರೆಯವರೊಳಗೆ ತಪ್ಪಿಸಿಕೊಂಡ ಯೆಹೂದ್ಯರ ಮತ್ತು ಯೆರೂಸಲೇವಿುನ ಸಮಾಚಾರವನ್ನು ನಾನು ಅವರ ಹತ್ತಿರ ವಿಚಾರಿಸುವಲ್ಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾನು ಶೂಷನ್‌ನಲ್ಲಿದ್ದಾಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀ ಮತ್ತು ಇನ್ನಿತರರು ಯೆಹೂದ ಪ್ರಾಂತ್ಯದಿಂದ ಬಂದಿದ್ದರು. ನಾನು ಅಲ್ಲಿರುವ ಯೆಹೂದ್ಯರ ಯೋಗಕ್ಷೇಮದ ಬಗ್ಗೆ ವಿಚಾರಿಸಿದೆನು. ಈ ಯೆಹೂದ್ಯರು ಸೆರೆವಾಸದಿಂದ ತಪ್ಪಿಸಿಕೊಂಡು ಇನ್ನೂ ಯೆಹೂದದಲ್ಲಿ ವಾಸವಾಗಿದ್ದರು. ಜೆರುಸಲೇಮ್ ನಗರದ ವಿಷಯವಾಗಿಯೂ ವಿಚಾರಿಸಿದೆನು. ಅಧ್ಯಾಯವನ್ನು ನೋಡಿ |
ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.