Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 1:5 - ಕನ್ನಡ ಸಮಕಾಲಿಕ ಅನುವಾದ

5 ನಾನು ನನ್ನ ಪ್ರಾರ್ಥನೆಯಲ್ಲಿ: “ಪರಲೋಕ ದೇವರಾದ ಯೆಹೋವ ದೇವರೇ, ನೀವು ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿದ್ದೀರಿ. ನಿಮ್ಮನ್ನು ಪ್ರೀತಿಸಿ ನಿಮ್ಮ ಆಜ್ಞೆಗಳಿಗೆ ವಿಧೇಯರಾಗಿರುವವರೊಂದಿಗೆ, ನಿಮ್ಮ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವವರೇ, ಭಯಭಕ್ತಿಗೆ ಪಾತ್ರರಾದ ದೇವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನನ್ನ ಪ್ರಾರ್ಥನೆಯಲ್ಲಿ, “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿರುವ ಪರಲೋಕದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ವಿಜ್ಞಾಪನೆಗಳಲ್ಲಿ ನಾನು - ಯೆಹೋವನೇ, ಮಹೋನ್ನತನೂ ಭಯಂಕರನೂ ಆಗಿರುವ ಪರಲೋಕದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಂತರ ನಾನು ಈ ಪ್ರಾರ್ಥನೆ ಮಾಡಿದೆನು: “ಪರಲೋಕದ ದೇವರಾದ ಯೆಹೋವನೇ, ನೀನು ಮಹಾ ದೇವರೂ ಪರಾಕ್ರಮವುಳ್ಳ ದೇವರೂ ಆಗಿರುವಿ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳಿಗೆ ವಿಧೇಯರಾಗುವವರಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸುವವನಾಗಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 1:5
18 ತಿಳಿವುಗಳ ಹೋಲಿಕೆ  

ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ.


ಅವರಿಗೆ ಹೆದರಬೇಡಿರಿ. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಭಯಭಕ್ತಿಗೆ ಯೋಗ್ಯರಾದ ಮಹಾ ದೇವರಾಗಿ ನಿಮ್ಮ ಮಧ್ಯದಲ್ಲಿದ್ದಾರೆ.


ನಾನು ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು ಶ್ರೇಷ್ಠರಿಗೂ, ಅಧಿಕಾರಸ್ಥರಿಗೂ, ಇತರ ಜನರಿಗೂ ಸಂಬೋಧಿಸಿ, “ನೀವು ಅವರಿಗೋಸ್ಕರ ಭಯಪಡಬೇಡಿರಿ. ದೊಡ್ಡವನಾಗಿಯೂ, ಭಯಂಕರನಾಗಿಯೂ ಇರುವ ಯೆಹೋವ ದೇವರನ್ನು ಜ್ಞಾಪಕಮಾಡಿಕೊಂಡು, ನಿಮ್ಮ ಪುತ್ರರಿಗೋಸ್ಕರ, ಪುತ್ರಿಯರಿಗೋಸ್ಕರ, ನಿಮ್ಮ ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ,” ಎಂದೆನು.


ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರು ಒಬ್ಬರೇ ದೇವರು; ಅವರೇ ನಂಬಿಗಸ್ತರಾದ ದೇವರು; ತಮ್ಮನ್ನು ಪ್ರೀತಿಸಿ, ತಮ್ಮ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಅವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಸಾವಿರ ತಲೆಗಳವರೆಗೂ ತೋರಿಸುವರು.


“ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.


ಹೀಗೆ ಪ್ರಾರ್ಥಿಸಿದನು: “ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಮೇಲಿರುವ ಆಕಾಶದಲ್ಲಾದರೂ, ಕೆಳಗಿರುವ ಭೂಮಿಯಲ್ಲಾದರೂ ನಿಮ್ಮ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣ ಹೃದಯದಿಂದ ನಿಮಗೆ ನಡೆದುಕೊಳ್ಳುವಂಥ ಸೇವಕರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸುವವರೇ,


ಭೂಲೋಕದಲ್ಲಿ ನಿಮ್ಮ ಜನರಾದ ಇಸ್ರಾಯೇಲರಿಗೆ ಸಮಾನವಾದ ಜನಾಂಗ ಯಾವುದು? ದೇವರಾದ ನೀವೇ ಹೋಗಿ ಅವರನ್ನು ಸ್ವಜನರಾಗಿ ವಿಮೋಚಿಸಿ ನಿಮ್ಮ ಹೆಸರನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟಿನಿಂದ ವಿಮೋಚಿಸಿ ತಂದ ನಿಮ್ಮ ಪ್ರಜೆಗಳ ಎದುರಿನಿಂದ ಜನಾಂಗಗಳನ್ನು ಓಡಿಸುವ ಮೂಲಕ ವಿಸ್ಮಯಕರವಾದ ಮಹಾ ಅದ್ಭುತಗಳನ್ನು ಮಾಡಿದ್ದೀರಲ್ಲವೇ?


ಏಕೆಂದರೆ ಮಹೋನ್ನತರಾದ ಯೆಹೋವ ದೇವರು ಭಯಭಕ್ತಿಗೆ ಪಾತ್ರರೂ ಭೂಮಿಯ ಮೇಲೆಲ್ಲಾ ಮಹಾರಾಜರೂ ಆಗಿದ್ದಾರೆ.


ಎಂದೆಂದಿಗೂ ನಿಮ್ಮ ಪ್ರೀತಿಯನ್ನು ಸಾರುವೆನು. ಪರಲೋಕದಲ್ಲಿ ನಿಮ್ಮ ನಂಬಿಗಸ್ತಿಕೆಯನ್ನು ಸ್ಥಿರಪಡಿಸಿದ್ದೀರಿ ಎಂದು ಘೋಷಿಸುವೆನು.


ನೀವು ಹೇಳಿದ್ದೇನಂದರೆ, “ನಾನು ಆಯ್ದುಕೊಂಡವನ ಸಂಗಡ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ. ನಾನು ನನ್ನ ಸೇವಕನಾದ ದಾವೀದನಿಗೆ ಪ್ರಮಾಣ ಮಾಡಿದ್ದೇನೆ.


ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದುಕೊಂಡರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನೂ, ಕರುಣೆಯನ್ನೂ ನಿಮಗೋಸ್ಕರ ನೆರವೇರಿಸುವರು.


“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ.


ಅದಕ್ಕೆ ಅರಸನು ನನಗೆ, “ನಿನಗೆ ಬೇಕಾಗಿರುವುದೇನು?” ಎಂದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ


ಅವರು ಯೆರೂಸಲೇಮಿಗೆ ವಿರೋಧವಾಗಿ ಯುದ್ಧ ಮಾಡುವುದಕ್ಕೂ, ಅಭ್ಯಂತರಿಸುವುದಕ್ಕೂ ಬರಲು ಏಕವಾಗಿ ಒಳಸಂಚು ಮಾಡಿದರು.


ಪರಲೋಕದಿಂದ ನ್ಯಾಯ ನಿರ್ಣಯವನ್ನು ಮಾಡಿದ್ದೀರಿ. ದೇವರೇ, ನ್ಯಾಯತೀರಿಸುವುದಕ್ಕೂ


ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮ ಹಾಗೆ ಶಕ್ತರು ಯಾರು ಇದ್ದಾರೆ? ಯೆಹೋವ ದೇವರೇ, ನೀವು ಶಕ್ತರು, ನಿಮ್ಮ ನಂಬಿಗಸ್ತಿಕೆಯು ನಿಮ್ಮನ್ನು ಸುತ್ತುವರಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು