Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 1:6 - ಕನ್ನಡ ಸಮಕಾಲಿಕ ಅನುವಾದ

6 ಕೃಪೆಮಾಡಿ ನನಗೆ ಕಿವಿಗೊಡಿರಿ, ಕಟಾಕ್ಷಿಸಿ ನೋಡಿರಿ, ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿರಿ. ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಾಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ. ಅವರು ನಿಮಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆಮಾಡುತ್ತಾ ಇದ್ದೇನೆ. ನಾನೂ, ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕೃಪೆಮಾಡಿ ನನ್ನ ಮೊರೆಗೆ ಕಿವಿಗೊಡು, ನನ್ನನ್ನು ಕಟಾಕ್ಷಿಸು, ನಿನ್ನ ಸೇವಕನ ಪ್ರಾರ್ಥನೆಯನ್ನು ಲಾಲಿಸಬೇಕು. ನಾನು ಈಗ ಹಗಲಿರುಳೂ ನಿನ್ನ ಸನ್ನಿಧಿಯಲ್ಲಿ ನಿನ್ನ ಸೇವಕರಾದ ಇಸ್ರಾಯೇಲರಿಗಾಗಿ ಪ್ರಾರ್ಥಿಸುತ್ತಾ ಅವರು ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆ ಮಾಡುತ್ತಾ ಇದ್ದೇನೆ; ನಾನೂ, ನನ್ನ ಪೂರ್ವಿಕರೂ ಆ ಪಾಪಗಳಲ್ಲಿ ಪಾಲುಗಾರರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕೃಪೆಮಾಡಿ ನನಗೆ ಕಿವಿಗೊಡಿ, ಕಟಾಕ್ಷಿಸಿ ನೋಡಿ; ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿ, ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ; ಅವರು ನಿಮಗೆ ವಿರುದ್ಧ ಮಾಡಿದ ಪಾಪಗಳನ್ನು ಅರಿಕೆಮಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕೃಪೆಮಾಡಿ ಕಿವಿಗೊಡಬೇಕು, ಕಟಾಕ್ಷಿಸಬೇಕು; ನಿನ್ನ ಸೇವಕನ ಪ್ರಾರ್ಥನೆಯನ್ನು ಲಾಲಿಸಬೇಕು. ನಾನು ಈಗ ಹಗಲಿರುಳೂ ನಿನ್ನ ಸನ್ನಿಧಿಯಲ್ಲಿ ನಿನ್ನ ಸೇವಕರಾದ ಇಸ್ರಾಯೇಲ್ಯರಿಗೋಸ್ಕರ ಪ್ರಾರ್ಥಿಸುತ್ತಾ ಅವರು ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆಮಾಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಿಕರೂ ಆ ಪಾಪಗಳಲ್ಲಿ ಪಾಲುಗಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಹಗಲಿರುಳು ನಿನ್ನಲ್ಲಿ ಪ್ರಾರ್ಥಿಸುವ ನಿನ್ನ ಸೇವಕನನ್ನು ಕಣ್ತೆರೆದು ನೋಡು; ಅವನ ಪ್ರಾರ್ಥನೆಗೆ ಕಿವಿಗೊಟ್ಟು ಆಲಿಸು. ನಿನ್ನ ಸೇವಕರಾದ ಇಸ್ರೇಲರಿಗಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಇಸ್ರೇಲರಾದ ನಾವು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ನಾನು ನಿನಗೆ ಅರಿಕೆ ಮಾಡುತ್ತೇನೆ. ನಾನೂ ನನ್ನ ತಂದೆಯ ಮನೆಯವರೂ ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ನಿನಗೆ ಅರಿಕೆ ಮಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 1:6
34 ತಿಳಿವುಗಳ ಹೋಲಿಕೆ  

ನಾನು ಮಾತಾಡುತ್ತಾ, ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ, ನನ್ನ ಜನರಾದ ಇಸ್ರಾಯೇಲರ ಪಾಪವನ್ನೂ ಅರಿಕೆಮಾಡುತ್ತಾ, ನನ್ನ ದೇವರಾದ ಯೆಹೋವ ದೇವರ ಮುಂದೆ ಅವರ ಪರಿಶುದ್ಧ ಪರ್ವತಕ್ಕೋಸ್ಕರವಾಗಿ, ವಿಜ್ಞಾಪಿಸುತ್ತಿರಲಾಗಿ,


ನಾನು ನನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥಿಸಿ, ಅರಿಕೆಮಾಡಿದೆನು: “ಕರ್ತನೇ, ಮಹೋನ್ನತ ಮತ್ತು ಅದ್ಭುತ ದೇವರೇ, ನಿಮ್ಮನ್ನು ಪ್ರೀತಿಮಾಡಿ, ನಿಮ್ಮ ಆಜ್ಞೆಗಳನ್ನು ಕೈಗೊಂಡು ನಡೆಯುವವರಿಗೆ ಒಡಂಬಡಿಕೆಯ ಪ್ರೀತಿಯನ್ನೂ ಇಟ್ಟು ನೆರವೇರಿಸುವವರೇ,


ನೀತಿವಂತರ ಮೇಲೆ ಯೆಹೋವ ದೇವರು ದೃಷ್ಟಿ ಇಡುತ್ತಾರೆ, ಅವರು ಮೊರೆಯಿಡುವಾಗ ದೇವರು ಕಿವಿಗೊಡುತ್ತಾರೆ.


ನಮ್ಮ ಪಿತೃಗಳಂತೆ ನಾವು ಕೂಡಾ ಪಾಪಮಾಡಿದ್ದೇವೆ; ಅಕ್ರಮ ಮಾಡಿದ್ದೇವೆ; ದುಷ್ಟಕೃತ್ಯಗಳನ್ನು ನಡೆಸಿದ್ದೇವೆ.


ಏಕೆಂದರೆ ನಮ್ಮ ಪಿತೃಗಳು ಅಪನಂಬಿಗಸ್ತರಾಗಿ, ನಮ್ಮ ದೇವರಾದ ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ, ಅವರನ್ನು ಬಿಟ್ಟುಬಿಟ್ಟರು. ಇದಲ್ಲದೆ ಅವರು ಯೆಹೋವ ದೇವರ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ, ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ.


“ಈಗ ನನ್ನ ದೇವರೇ, ಈ ಸ್ಥಳದಲ್ಲಿ ಮಾಡಿದ ಪ್ರಾರ್ಥನೆಗೆ ನಿಮ್ಮ ಕಣ್ಣುಗಳು ತೆರೆದಿರಲಿ. ನಿಮ್ಮ ಕಿವಿಗಳು ಆಲಿಸುತ್ತಾ ಇರಲಿ.


ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.


ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.


ದೇವರಾದುಕೊಂಡವರು ದೇವರಿಗೆ ಹಗಲುರಾತ್ರಿ ಮೊರೆಯಿಡುವಾಗ, ದೇವರು ಅವರ ವಿಷಯದಲ್ಲಿ ಅವರಿಗೆ ನ್ಯಾಯವನ್ನು ಕೊಡದೆ ಇರುವರೋ? ದೇವರು ನ್ಯಾಯ ಕೊಡಲು ತಡಮಾಡುವರೋ?


ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ನೆನೆಸಿಕೊಳ್ಳುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕರಂತೆ ದೇವರ ಸೇವೆಮಾಡುತ್ತಾ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನಮ್ಮ ತಂದೆಗಳು ಪಾಪಮಾಡಿ ಇಲ್ಲವಾದರು. ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.


ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲು ಇರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.


ಯೆಹೋವ ದೇವರೇ, ನನ್ನ ಧ್ವನಿಯನ್ನು ಕೇಳಿರಿ. ನನ್ನ ಕೂಗಿಗೆ ಕರುಣೆ ತೋರಿಸಿ, ನಿಮ್ಮ ಕಿವಿಗಳು ನನ್ನ ವಿಜ್ಞಾಪನೆಗಳನ್ನು ಆಲೈಸಲಿ.


ಸಂಜೆ, ಮುಂಜಾನೆ, ಮಧ್ಯಾಹ್ನಗಳಲ್ಲಿ ಹಂಬಲಿಸಿ ಮೊರೆಯಿಡುವೆನು. ದೇವರು ನನ್ನ ಧ್ವನಿಯನ್ನು ಕೇಳುವರು.


ನನ್ನ ಪಾಪವನ್ನು ನಿಮಗೆ ತಿಳಿಸಿ, ನನ್ನ ಅನ್ಯಾಯವನ್ನು ಮರೆಮಾಡದೆ, “ನನ್ನ ಉಲ್ಲಂಘನೆಗಳನ್ನು ಯೆಹೋವ ದೇವರಿಗೆ ಅರಿಕೆ ಮಾಡುವೆನು,” ಎಂದು ಹೇಳಿದೆನು; ಆಗ, ನೀವು ನನ್ನ ಪಾಪದ ಅಪರಾಧವನ್ನು ಪರಿಹರಿಸಿದಿರಿ.


ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅತ್ತು ದೇವರ ಆಲಯದ ಮುಂದೆ ಅಡ್ಡಬಿದ್ದ ತರುವಾಯ ಇಸ್ರಾಯೇಲರಲ್ಲಿ ಸ್ತ್ರೀಯರೂ, ಪುರುಷರೂ, ಮಕ್ಕಳು ಮಹಾಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡು ಬಂದರು. ಜನರು ಬಹಳವಾಗಿ ಅತ್ತರು.


ಹಿಂದೊಮ್ಮೆ ನಾವೆಲ್ಲರೂ ಅವರೊಂದಿಗೆ ನಮ್ಮ ದೇಹದ ಆಶೆಗಳ ಪ್ರಕಾರ ಜೀವಿಸುತ್ತಿದ್ದಾಗ ಮನಸ್ಸಿನ ಹಾಗೂ ಶರೀರದ ಆಶೆಗಳನ್ನು ನೆರವೇರಿಸುತ್ತಾ ನಡೆದು, ಉಳಿದವರಂತೆ ಸ್ವಾಭಾವಿಕವಾಗಿ ದೇವರ ಕೋಪಕ್ಕೆ ಗುರಿಯಾದವರಾಗಿದ್ದೆವು.


ಅವಳು ಎಂಬತ್ತನಾಲ್ಕು ವರ್ಷ ವಿಧವೆಯಾಗಿದ್ದು, ದೇವಾಲಯವನ್ನು ಬಿಟ್ಟುಹೋಗದೆ ಉಪವಾಸಗಳಿಂದಲೂ ಪ್ರಾರ್ಥನೆಗಳಿಂದಲೂ ರಾತ್ರಿ ಹಗಲೂ ಆರಾಧನೆ ಮಾಡುತ್ತಿದ್ದಳು.


ನನ್ನನ್ನು ರಕ್ಷಿಸುವ ದೇವರಾದ ಯೆಹೋವ ದೇವರೇ, ಹಗಲಿರುಳು ನಿಮ್ಮ ಮುಂದೆ ಮೊರೆಯಿಡುತ್ತೇನೆ.


ಆದ್ದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರ ಮುಂದೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತದ ಪ್ರಕಾರಮಾಡಿ, ಈ ದೇಶದ ಜನರಿಂದಲೂ, ಅನ್ಯ ಸ್ತ್ರೀಯರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ,” ಎಂದನು.


ಈಗ ನಿಮಗೆ ದಾಸರೂ, ದಾಸಿಯರೂ ಆಗಿರುವ ಹಾಗೆ ಯೆಹೂದದ ಮತ್ತು ಯೆರೂಸಲೇಮಿನ ಮಕ್ಕಳನ್ನು ನಿಮ್ಮ ವಶಮಾಡಬೇಕೆಂದು ಇದ್ದೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಪರಾಧಗಳು ಇಲ್ಲವೋ?


“ನಾನು ಸೌಲನನ್ನು ಅರಸನಾಗಿ ಮಾಡಿದ್ದರಿಂದ ದುಃಖಪಡುತ್ತೇನೆ. ಏಕೆಂದರೆ ಅವನು ನನ್ನನ್ನು ಹಿಂಬಾಲಿಸುವುದನ್ನು ಬಿಟ್ಟು, ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ,” ಎಂದರು. ಅದಕ್ಕೆ ಸಮುಯೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವ ದೇವರಿಗೆ ಮೊರೆಯಿಟ್ಟನು.


ನಿಮ್ಮ ಜನರಾದ ಇಸ್ರಾಯೇಲರ ಮತ್ತು ನಿಮ್ಮ ಸೇವಕನ ವಿಜ್ಞಾಪನೆಯನ್ನೂ ಕೇಳಿರಿ. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ, ನೀವು ವಾಸಮಾಡುವ ಸ್ಥಳವಾದ ಪರಲೋಕದಿಂದ ಕೇಳಿ, ಕ್ಷಮೆಯನ್ನು ದಯಪಾಲಿಸಿರಿ.


ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಮಾನಸಾಂತರಪಟ್ಟು, ‘ನಾವು ಪಾಪಮಾಡಿದ್ದೇವೆ, ತಪ್ಪುಮಾಡಿ ದುಷ್ಟರಾಗಿ ನಡೆದಿದ್ದೇವೆ,’ ಎಂದು ಅವರನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿಮಗೆ ಪ್ರಾರ್ಥನೆಮಾಡಿದರೆ,


ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು.


ಅವರು ದಿಕ್ಕಿಲ್ಲದವರ ಪ್ರಾರ್ಥನೆಗೆ ಕಿವಿಗೊಡುತ್ತಾರೆ; ದೇವರು ಅವರ ಪ್ರಾರ್ಥನೆಯನ್ನು ತಿರಸ್ಕರಿಸುವುದಿಲ್ಲ.


ನಾವು ಪಾಪಮಾಡಿದ್ದೇವೆ ಮತ್ತು ಅಕ್ರಮಗಳನ್ನು ಮಾಡಿದ್ದೇವೆ. ಕೆಟ್ಟವರಾಗಿ ನಡೆದಿದ್ದೇವೆ ಮತ್ತು ತಿರುಗಿಬಿದ್ದಿದ್ದೇವೆ. ನಿಮ್ಮ ಕಟ್ಟಳೆಗಳನ್ನು ಮತ್ತು ನ್ಯಾಯಗಳನ್ನು ತೊರೆದುಬಿಟ್ಟಿದ್ದೇವೆ.


ಯೆಹೋವ ದೇವರೇ, ನಮ್ಮ ಅರಸರಿಗೂ ನಮ್ಮ ರಾಜಕುಮಾರರಿಗೂ, ನಮ್ಮ ಪೂರ್ವಜರಿಗೂ, ನಮಗೂ ನಾಚಿಕೆಯಾಗಿದೆ. ಏಕೆಂದರೆ ನಿಮಗೆ ವಿರುದ್ಧವಾಗಿ ನಾವು ಪಾಪಮಾಡಿದ್ದೇವೆ.


“ಈಗ ನಮ್ಮ ಕರ್ತದೇವರೇ, ನಿಮ್ಮ ಭುಜಬಲವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟ್ ದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರು ಪಡೆದುಕೊಂಡವರೇ, ನಾವು ಪಾಪಮಾಡಿದ್ದೇವೆ, ನಾವು ಕೆಟ್ಟವರಾಗಿ ನಡೆದುಕೊಂಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು